blank

ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ ಕಾಂಗ್ರೆಸ್ ಸೇರ್ಪಡೆ|Elections to local bodies

blank

ಬೆಂಗಳೂರು: ಸ್ಥಳೀಯ ಸಂಸ್ಥೆಗಳ ಚುನಾವಣೆ ಯಾವುದೇ ಕ್ಷಣದಲ್ಲಿ ನಡೆಯಬಹುದು(Elections to local bodies can be held at any moment). ಹೀಗಾಗಿ ಪಕ್ಷದ ನಾಯಕರು ಹಾಗೂ ಕಾರ್ಯಕರ್ತರು ಸಜ್ಜಾಗಬೇಕು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್(D K Shivakumar) ಕರೆ ನೀಡಿದರು.

ಕೆಪಿಸಿಸಿ ಕಚೇರಿಯಲ್ಲಿ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಮಾಧ್ಯಮಗೋಷ್ಠಿ ಉದ್ದೇಶಿಸಿ ಮಾತನಾಡಿದರು.

ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸುವ ವಿಚಾರವಾಗಿ ನ್ಯಾಯಾಲಯದಿಂದ ಸಧ್ಯದಲ್ಲೇ ಸೂಚನೆ ಬರುವ ಸಾಧ್ಯತೆ ಇದೆ. ಬೆಂಗಳೂರು ನಗರ ಪಾಲಿಕೆ ಚುನಾವಣೆಯನ್ನು ನಡೆಸಬೇಕಾಗಿದ್ದು ಗ್ರೇಟರ್ ಬೆಂಗಳೂರು ವಿಚಾರವಾಗಿ ಅಭಿಪ್ರಾಯ ಸಂಗ್ರಹಕ್ಕೆ ಮುಂದಾಗಿದ್ದೇವೆ. ಯಾವುದೇ ಕ್ಷಣದಲ್ಲಿ ಈ ಚುನಾವಣೆಗಳು ಘೋಷಣೆಯಾಗಬಹುದು. ಇದಕ್ಕೆ ನಾವೆಲ್ಲರೂ ಸಿದ್ಧತೆ ಮಾಡಿಕೊಳ್ಳಬೇಕು ಎಂದು ತಿಳಿಸಿದರು.

ಕಾಂಗ್ರೆಸ್ ಹೆಸರಿನಲ್ಲಿ ಜಾಗ

100 ಕಾಂಗ್ರೆಸ್ ಕಚೇರಿ ನಿರ್ಮಿಸುವ ಹಿನ್ನೆಲೆಯಲ್ಲಿ ಅವುಗಳ ಶಂಕುಸ್ಥಾಪನೆ ಕಾರ್ಯಕ್ರಮ ನೆರವೇರಿಸಲು ದಿನಾಂಕ ನಿಗದಿ ಮಾಡುವಂತೆ ಮಲ್ಲಿಕಾರ್ಜುನ ಖರ್ಗೆ ಹಾಗೂ ರಾಹುಲ್ ಗಾಂಧಿ ಅವರಿಗೆ ಮನವಿ ಮಾಡಿದ್ದೇನೆ. ಕಚೇರಿ ಕಟ್ಟಡ ನಿರ್ಮಾಣ ಮಾಡುವ ಜಾಗ ಕಾಂಗ್ರೆಸ್ ಹೆಸರಿನಲ್ಲಿ ನೋಂದಣಿ ಆಗದಿದ್ದರೆ ಅಲ್ಲಿ ನಮ್ಮ ನಾಯಕರಿಂದ ಶಂಕುಸ್ಥಾಪನೆ ಮಾಡಿಸುವುದಿಲ್ಲ. ಈ ಕಟ್ಟಡ ನಿರ್ಮಾಣದ ಜಾಗ ವೈಯಕ್ತಿಕ ಹೆಸರು, ಬೇರೆ ಟ್ರಸ್ಟ್ ಹೆಸರಿನಲ್ಲಿ ಇರುವಂತಿಲ್ಲ ಎಂದರು.

ಆನಂದರಾವ್ ವೃತ್ತದ ಬಳಿ ಇರುವ ಜಾಗದಲ್ಲಿ ಕಟ್ಟಡ ನಿರ್ಮಾಣಕ್ಕೆ ನಕ್ಷೆ ಸಿದ್ಧಪಡಿಸಲಾಗಿದೆ. ಈ ಕಟ್ಟಡದ ಶಂಕುಸ್ಥಾಪನೆಯನ್ನು ಅದೇ ದಿನ ನೆರವೇರಿಸಲಾಗುವುದು ಎಂದು ತಿಳಿಸಿದರು.

ಕಾಂಗ್ರೆಸ್ ಸಮುದ್ರ ಇದ್ದಂತೆ

ಬಿಜೆಪಿ ಹಾಗೂ ಜೆಡಿಎಸ್‌ನ ವಿವಿಧ ನಾಯಕರು ಹಂತ ಹಂತವಾಗಿ ಕಾಂಗ್ರೆಸ್ ಸೇರುತ್ತಿದ್ದಾರೆ. ಎಲ್.ಆರ್.ಶಿವರಾಮೇಗೌಡ ಕಾಂಗ್ರೆಸ್ ಸೇರಿದ್ದಾರೆ. ಜೆಡಿಎಸ್‌ನಿಂದ ಅವರು ಸಂಸತ್ ಸದಸ್ಯರಾಗಿದ್ದರು.
ಕಾಂಗ್ರೆಸ್ ರಾಷ್ಟ್ರೀಯ ವಕ್ತಾರರಾಗಿದ್ದ ಬ್ರಿಜೇಶ್ ಕಾಳಪ್ಪ ಕೂಡ ಅಮ್ ಆದ್ಮಿ ಪಕ್ಷ ತೊರೆದು ಕಾಂಗ್ರೆಸ್ ಸೇರುತ್ತಿದ್ದಾರೆ. ದೇಶದಲ್ಲಿ ಕಾಂಗ್ರೆಸ್‌ಗೆ ಮಾತ್ರ ಭವಿಷ್ಯವಿದೆ ಎಂದು ಮನದಟ್ಟು ಮಾಡಿಕೊಂಡು ನಮ್ಮ ಪಕ್ಷ ಸೇರುತ್ತಿದ್ದಾರೆ ಎಂದು ಹೇಳಿದರು.

ಪಕ್ಷ ಸೇರುವವರ ದೊಡ್ಡ ಪಟ್ಟಿ ಇದೆ

ಪಕ್ಷಕ್ಕೆ ಸೇರುವವರ ಪಟ್ಟಿಯಲ್ಲಿ ಇನ್ನು ಬೇರೆ ನಾಯಕರು, ಶಾಸಕರು ಇದ್ದಾರಾ? ಎಂಬ ಪ್ರಶ್ನೆಗೆ, ದೊಡ್ಡ ಪಟ್ಟಿ ಇದೆ. ಕೆಲವು ನಾಯಕರ ಬಗ್ಗೆ ಸ್ಥಳೀಯವಾಗಿ ಚರ್ಚೆ ಮಾಡಿ ತೀರ್ಮಾನ ಮಾಡಬೇಕಿದೆ. ಚರ್ಚೆ ಮಾಡಿ ಹಂತ ಹಂತವಾಗಿ ಪಕ್ಷ ಸೇರ್ಪಡೆ ಮಾಡಿಕೊಳ್ಳುತ್ತೇವೆ ಎಂದು ಶಿವಕುಮಾರ್ ಪ್ರತಿಕ್ರಿಯಿಸಿದರು.

Share This Article

ಅಪ್ಪಿತಪ್ಪಿಯೂ ಈ ಆಹಾರಗಳನ್ನು ತುಪ್ಪದೊಂದಿಗೆ ಸೇವಿಸಬೇಡಿ; ಉತ್ತಮ ಆರೋಗ್ಯಕ್ಕಾಗಿ ತಿಳಿದುಕೊಳ್ಳಲೇಬೇಕಾದ ಮಾಹಿತಿ | Health Tips

ಭಾರತೀಯ ಪಾಕಪದ್ಧತಿಯಲ್ಲಿ ತುಪ್ಪಕ್ಕೆ ವಿಶೇಷ ಪ್ರಾಮುಖ್ಯತೆ ನೀಡಲಾಗಿದೆ. ಆಯುರ್ವೇದದಲ್ಲಿ ತುಪ್ಪವು ಆಹಾರದ ರುಚಿಯನ್ನು ಹೆಚ್ಚಿಸುವುದಲ್ಲದೆ, ಆರೋಗ್ಯಕ್ಕೂ…

ಕಾಫಿ ಕುಡಿಯುವಾಗ ಈ ತಪ್ಪುಗಳನ್ನು ಎಂದಿಗೂ ಮಾಡಬೇಡಿ; ನಿಮಗಾಗಿ ಹೆಲ್ತಿ ಮಾಹಿತಿ | Health Tips

ಪ್ರಪಂಚದಾದ್ಯಂತ ಕಾಫಿ ಪ್ರಿಯರನ್ನು ಕಾಣಬಹುದು. ಇಲ್ಲಿಯವರೆಗೆ ಕಾಫಿಯ ಬಗ್ಗೆ ಸಾಕಷ್ಟು ಸಂಶೋಧನೆಗಳು ನಡೆದಿದ್ದು, ಇದು ಅದರ…

ಕಪ್ಪು ದ್ರಾಕ್ಷಿ vs ಹಸಿರು ದ್ರಾಕ್ಷಿ.. ಆರೋಗ್ಯಕ್ಕೆ ಯಾವುದು ಉತ್ತಮ..? grapes

grapes: ದ್ರಾಕ್ಷಿ ತಿನ್ನುವುದು ಆರೋಗ್ಯಕ್ಕೆ ಒಳ್ಳೆಯದು. ಈ ಹಣ್ಣುಗಳು ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿ. ಆದರೆ ಹಸಿರು…