ವಿದ್ಯಾರ್ಥಿಗಳಿದ್ದ ದೋಣಿ ಮುಗುಚಿ ಆರು ಮಂದಿ ಸಾವು; ಹಲವರು ನಾಪತ್ತೆ

Boat Tragedy
Published on

ವಡೋದರಾ: ವಿದ್ಯಾರ್ಥಿಗಳನ್ನು ಹೊತ್ತು ಸಾಗುತ್ತಿದ್ದ ದೋಣಿಯೊಂದು ಮುಗುಚಿಬಿದ್ದ ಪರಿಣಾಮ ಆರು ಮಂದಿ ಮೃತಪಟ್ಟು, ಹಲವರು ನಾಪತ್ತೆ ಆಗಿರುವ ಘಟನೆ ಗುಜರಾತಿನ ವಡೋದರಾದಲ್ಲಿರುವ ಹರಣಿ ಸರೋವರದಲ್ಲಿ ನಡೆದಿದೆ.

ದೋಣಿಯಲ್ಲಿ ಖಾಸಗಿ ಶಾಲೆಯ 27 ವಿದ್ಯಾರ್ಥಿಗಳು ಪ್ರಯಾಣಿಸುತ್ತಿದ್ದರು ಎಂದು ವರದಿಯಾಗಿದೆ. ಆದರೆ, ಯಾರು ಲೈಫ್​ ಜಾಕೆಟ್​ ಧರಿಸಿರಲಿಲ್ಲ ಎಂದು ತಿಳಿದು ಬಂದಿದೆ.

ವಿಚಾರ ತಿಳಿದು ಸ್ಥಳಕ್ಕೆ ದೌಡಾಯಿಸಿದ ರಕ್ಷಣಾ ಇಲಾಖೆಯ ಸಿಬ್ಬಂದಿ ಕಾರ್ಯಾಚರಣೆ ಆರಂಭಿಸಿದ್ದು, ನೀರಿನಲ್ಲಿ ಮುಳುಗಿರುವವರನ್ನು ಹೊರತೆಗೆಯುತ್ತಿದ್ದಾರೆ. ಮೃತಪಟ್ಟಿರುವ ವಿದ್ಯಾರ್ಥಿಗಳ ಮೃತದೇಹಕ್ಕಾಗಿ ಶೋಧ ಕಾರ್ಯ ನಡೆಸುತ್ತಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net