

ಭೋಪಾಲ್: ಕಲ್ಲು ತುಂಬಿದ್ದ ಲಾರಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ (Bus-Truck Collision) ಆರು ಮಂದಿ ಮೃತಪಟ್ಟು, 20 ಮಂದಿ ಗಾಯಗೊಂಡಿರುವ ಘಟನೆ ಮಧ್ಯಪ್ರದೇಶದ ಮೈಹಾರ್ ಜಿಲ್ಲೆಯ ನಾದನ್ ದೇಹತ್ ಬಳಿ ನಡೆದಿದೆ.
ಶನಿವಾರ (ಸೆಪ್ಟೆಂಬರ್ 28) ರಾತ್ರಿ 11 ಗಂಟೆ ಸುಮಾರಿಗೆ ಈ ಅಪಘಾತ ಸಂಭವಿಸಿದ್ದು, ಪ್ರಯಾಗ್‌ರಾಜ್‌ನಿಂದ ನಾಗ್ಪುರಕ್ಕೆ ಹೋಗುತ್ತಿದ್ದ ಬಸ್ ರಸ್ತೆಬದಿಯಲ್ಲಿ ನಿಂತಿದ್ದ ಕಲ್ಲು ತುಂಬಿದ ಡಂಪರ್ ಟ್ರಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ದುರ್ಘಟನೆ ಸಂಭವಿಸಿದೆ.
ಈ ಕುರಿತು ಮಾತನಾಡಿರುವ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸುಧೀರ್ ಅಗರ್ವಾಲ್, ಅಪಘಾತದಲ್ಲಿ ಆರು ಮಂದಿ ಮೃತಪಟ್ಟಿದ್ದು, 20ಕ್ಕೂ ಅಧಿಕ ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ. ಈ ಪೈಕಿ ಆರು ಮಂದಿಯ ಸ್ಥಿತಿ ಚಿಂತಾಜನಕವಾಗಿದ್ದು, ರಸ್ತೆ ಬದಿ ನಿಲ್ಲಿಸಲಾಗಿದ್ದ ಲಾರಿಗೆ ಬಸ್ ಡಿಕ್ಕಿ ಹೊಡೆದ ಪರಿಣಾಮ ದುರ್ಘಟನೆ ಸಂಭವಿಸಿದೆ. ಅಪಘಾತದ ಬಗ್ಗೆ ಮಾಹಿತಿ ಪಡೆದ ಕೂಡಲೇ ಹಿರಿಯ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿ ರಕ್ಷಣಾ ಕಾರ್ಯಾಚರಣೆ ಆರಂಭಿಸಿದ್ದಾರೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸುಧೀರ್ ಅಗರ್ವಾಲ್ ಮಾಹಿತಿ ನೀಡಿದ್ದಾರೆ.