ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಅನಂತನಾಗ್ ಮತ್ತು ಬಾರಾಮುಲ್ಲಾ ಜಿಲ್ಲೆಯಲ್ಲಿ ನಡೆದ 2 ಪ್ರತ್ಯೇಕ ಎನ್ಕೌಂಟರ್ನಲ್ಲಿ ಭದ್ರತಾ ಪಡೆಗಳು 6 ಉಗ್ರರನ್ನು ಹೊಡೆದುರುಳಿಸಿವೆ.
ಗುರುವಾರ ಅನಂತನಾಗ್ ಜಿಲ್ಲೆಯ ಅರ್ವಾನಿನಲ್ಲಿ ನಡೆದ ಎನ್ಕೌಂಟರ್ನಲ್ಲಿ 4 ಉಗ್ರರು ಮೃತಪಟ್ಟಿದ್ದರೆ, ಬಾರಾಮುಲ್ಲಾ ಜಿಲ್ಲೆಯ ಕ್ರೀರಿಯಲ್ಲಿ ನಡೆದ ಎನ್ಕೌಂಟರ್ನಲ್ಲಿ ಲಷ್ಕರ್ ಎ ತೋಯೆಬಾ ಉಗ್ರ ಸಂಘಟನೆಯ ಇಬ್ಬರು ಉಗ್ರರನ್ನು ಹತ್ಯೆ ಮಾಡಲಾಗಿದೆ. ಘಟನಾ ಸ್ಥಳದಿಂದ ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಎನ್ಕೌಂಟರ್ ನಡೆದ ಸ್ಥಳದಲ್ಲಿ ಗ್ರೆನೇಡ್ ಅಥವಾ ಬಾಂಬ್ಗಳೂ ಸ್ಫೋಟಗೊಳ್ಳದೆ ಉಳಿದಿರಬಹುದಾದ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಜನರು ಆ ಸ್ಥಳಕ್ಕೆ ತೆರಳದಂತೆ ಸ್ಥಳೀಯರಿಗೆ ಮನವಿ ಮಾಡಿದ್ದಾರೆ. (ಏಜೆನ್ಸೀಸ್)