ತಲಪಾಡಿ ಅಪಘಾತದಲ್ಲಿ ಬಾಲಕಿ ಸಹಿತ ಆರು ಮಂದಿ ಮೃತ್ಯು

ksd
Published on

ಕಾಸರಗೋಡು: ನಿಯಂತ್ರಣ ಕಳೆದುಕೊಂಡ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಬಸ್ ತಲಪಾಡಿಯಲ್ಲಿ ನಿಂತಿದ್ದ ಆಟೋರಿಕ್ಷಾ ಹಾಗೂ ಬಸ್ ಪ್ರಯಾಣಿಕರ ತಂಗುದಾಣಕ್ಕೆ ಡಿಕ್ಕಿಯಾಗಿ ಬಾಲಕಿ ಸೇರಿದಂತೆ ಆರು ಮಂದಿ ದಾರುಣವಾಗಿ ಮೃತಪಟ್ಟಿದ್ದಾರೆ. ಆಟೋ ಚಾಲಕ ಹೈದರಾಲಿ, ರಿಕ್ಷಾದಲ್ಲಿದ್ದ ನಫೀಸಾ, ಆಯಿಷಾ, ಖದೀಜಾ, ಹವ್ವಮ್ಮ ಹಾಗೂ ಹಸೀನಾ ಮೃತಪಟ್ಟವರು.

ಬಸ್ ನಿಲ್ದಾಣದಲ್ಲಿ ಬಸ್ಸಿಗಾಗಿ ಕಾದು ನಿಂತಿದ್ದವರು ಗಾಯಗೊಂಡಿದ್ದು, ಇವರನ್ನು ಮಂಗಳೂರಿನ ವಿವಿಧ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ. ಗಾಯಾಳುಗಳಲ್ಲಿ ಮೂವರ ಸ್ಥಿತಿ ಗಂಭೀರವಾಗಿದೆ.

ಕಾಸರಗೋಡಿನಿಂದ ಮಂಗಳೂರಿಗೆ ತೆರಳುತ್ತಿದ್ದ ಬಸ್ ಮೊದಲು ಆಟೋ ರಿಕ್ಷಾಗೆ ಡಿಕ್ಕಿಯಾಗಿ, ನಂತರ ಸನಿಹದ ಬಸ್ ನಿಲ್ದಾಣಕಟ್ಟಡಕ್ಕೆ ಡಿಕ್ಕಿಯಾಗಿದೆ. ಮೃತದೇಹಗಳನ್ನು ಮಂಜೇಶ್ವರ ತಾಲೂಕು ಆಸ್ಪತ್ರೆ ಹಾಗೂ ಮಂಗಳೂರಿನ ಆಸ್ಪತ್ರೆಗಳಿಗೆ ಕೊಂಡೊಯ್ಯಲಾಗಿದೆ. ಅಪಘಾತದಿಂದ ಆಟೋರಿಕ್ಷಾ ಸಂಪೂರ್ಣ ನಜ್ಜುಗುಜ್ಜಾಗಿದೆ. ಅಪಘಾತದ ಸಿಸಿ ಕ್ಯಾಮರಾ ದೃಶ್ಯಾವಳಿ ಲಭ್ಯವಾಗಿದ್ದು, ಬಸ್ ವೇಗದಿಂದ ಸಂಚರಿಸುತ್ತಿತ್ತೆಂದು ಸ್ಥಳೀಯ ನಿವಾಸಿಗಳು ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net