ಕೋಟ: ಲಕ್ಷ್ಮೀ ಸೋಮ ಬಂಗೇರ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಕೋಟ-ಪಡುಕರೆ ಮತ್ತು ನರೇನ್ ಅಕಾಡೆಮಿ ಬ್ರಹ್ಮಾವರ ಸಹಭಾಗಿತ್ವದಲ್ಲಿ ಗ್ರಾಮೀಣ ಪ್ರದೇಶದ ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ನಾಗರಿಕ ಸೇವೆ ಹಾಗೂ ಇತರ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಪೂರ್ವಸಿದ್ಧತೆ ಸಂಬಂಧಿಸಿ 30 ಗಂಟೆಗಳ ಕೌಶಲಾಭಿವೃದ್ಧಿ ತರಬೇತಿ ಕಾರ್ಯಕ್ರಮ ಉದ್ಘಾಟನೆ ಇತ್ತೀಚೆಗೆ ನಡೆಯಿತು.
ಗೀತಾನಂದ ಫೌಂಡೇಶನ್ ಪ್ರವರ್ತಕ ಆನಂದ ಸಿ.ಕುಂದರ್ ಮಣೂರು ಉದ್ಘಾಟಿಸಿದರು. ಸಂಪನ್ಮೂಲ ವ್ಯಕ್ತಿ ಬ್ರಹ್ಮಾವರ ನರೇನ್ ಅಕಾಡೆಮಿ ಚಂದ್ರಕಾಂತ್, ವಿದ್ಯಾರ್ಥಿಗಳಿಗೆ ಸರ್ಕಾರಿ ಹುದ್ದೆಗಳ ಮಾಹಿತಿ ನೀಡಿದರು.
ಪ್ರಾಂಶುಪಾಲೆ ಪ್ರೊ.ಸುನೀತಾ ವಿ. ಅಧ್ಯಕ್ಷತೆ ವಹಿಸಿದ್ದರು. ಸಂಘಟಕ ಡಾ.ಸುಬ್ರಮಣ್ಯ ಎ. ಪ್ರಾಸ್ತಾವಿಕವಾಗಿ ಮಾತನಾಡಿದರು. ಇತಿಹಾಸ ವಿಭಾಗ ಮುಖ್ಯಸ್ಥ ರಾಜಣ್ಣ ಎಂ. ಕಾರ್ಯಕ್ರಮ ನಿರೂಪಿಸಿದರು. ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಪ್ರೊ.ರಮೇಶ ಆಚಾರ್ವ ವಂದಿಸಿದರು.