

ಪಡುಬಿದ್ರಿ: ಕಾಪು ತಾಲೂಕು ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಸಮುದಾಯ ಅಭಿವೃದ್ಧಿ ವಿಭಾಗದಿಂದ ಆಯೋಜಿಸಿದ್ದ ಸರ್ಕಾರಿ ಶಾಲೆಗಳಿಗೆ ಬೆಂಚು ಡೆಸ್ಕ್ ವಿತರಣೆ ಕಾರ್ಯಕ್ರಮವನ್ನು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಕರಂದಾಡಿ ಶ್ರೀರಾಮ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಗೆ ಹಸ್ತಾಂತರಿಸುವ ಮೂಲಕ ಗುರುವಾರ ಉದ್ಘಾಟಿಸಿದರು.
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಉಡುಪಿ ಜಿಲ್ಲಾ ನಿರ್ದೇಶಕ ನಾಗರಾಜ ಶೆಟ್ಟಿ, ಜನಜಾಗೃತಿ ವೇದಿಕೆ ನಿಕಟಪೂರ್ವ ಜಿಲ್ಲಾಧ್ಯಕ್ಷ ನವೀನ್ ಅಮೀನ್, ವಲಯ ಅಧ್ಯಕ್ಷ ಪ್ರಸಾದ್ ಆಚಾರ್ಯ ಉಚ್ಚಿಲ, ಶಿಕ್ಷಕ ರಕ್ಷಕ ಸಂಘ ಅಧ್ಯಕ್ಷ ನಿರ್ಮಲ್‌ಕುಮಾರ್ ಹೆಗ್ಡೆ, ಕಾಪು ತಾಲೂಕು ಯೋಜನಾಧಿಕಾರಿ ಮಮತಾ ಶೆಟ್ಟಿ, ಕಲ್ಪವೃಕ್ಷ ಕನ್ನಡ ಶಾಲೆ ಅಧ್ಯಕ್ಷ ಶ್ರೀಧರ್ ಶೆಟ್ಟಿಗಾರ್, ರವಿರಾಜ ಹೆಗ್ಡೆ, ವಾಸುದೇವ ರಾವ್, ಹಳೇ ವಿದ್ಯಾರ್ಥಿ ಸಂಘ ಅಧ್ಯಕ್ಷ ಪದ್ಮನಾಭ ಶಾನ್‌ಭಾಗ್, ಎಸ್‌ಡಿಎಂಸಿ ಅಧ್ಯಕ್ಷ ಅಬ್ದುಲ್ ಕರೀಂ, ಮಹಮ್ಮದ್ ಅಶ್ರಫ್, ಗ್ರಾಪಂ ಸದಸ್ಯೆ ಶರ್ಮಿಳಾ ಆಚಾರ್ಯ, ಸಮಿತಿ ಸದಸ್ಯ ನಾಗಭೂಷಣ್ ರಾವ್, ಮೇಲ್ವಿಚಾರಕರು, ಸೇವಾ ಪ್ರತಿನಿಧಿಗಳು ಉಪಸ್ಥಿತರಿದ್ದರು.
ಕಾಪು ಮಹಾದೇವಿ ಶಾಲೆಯಲ್ಲಿ ಬೆಂಚು ಡೆಸ್ಕ್ ವಿತರಣೆ ಕಾರ್ಯಕ್ರಮದಲ್ಲಿ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಉಡುಪಿ ಜಿಲ್ಲಾ ನಿರ್ದೇಶಕ ನಾಗರಾಜ ಶೆಟ್ಟಿ, ಜಿಲ್ಲಾ ಜನಜಾಗೃತಿ ವೇದಿಕೆ ನಿಕಟಪೂರ್ವ ಅಧ್ಯಕ್ಷ ನವೀನ್ ಅಮೀನ್, ತಾಲೂಕು ಅಧ್ಯಕ್ಷ ದಯಾನಂದ ಹೆಜಮಾಡಿ, ಕಾಪು ಗ್ರಾಮೋದ್ಯೋಗ ಅಧ್ಯಕ್ಷ ಶೇಖರ್ ಎಲ್.ಸಾಲಿಯಾನ್, ಕಾರ್ಯದರ್ಶಿ ಮಾಧವ ಪಾಲನ್, ಶಾಲಾ ಸಂಚಾಲಕ ವಿದ್ಯಾಧರ ಪುರಾಣಿಕ್, ಮುಖ್ಯ ಶಿಕ್ಷಕಿ ಜ್ಯೋತಿ, ಯೋಜನಾಧಿಕಾರಿ ಮಮತಾ ಶೆಟ್ಟಿ, ಒಕ್ಕೂಟ ಅಧ್ಯಕ್ಷ ಯೋಗೀಶ್ ಆಚಾರ್ಯ ಉಪಸ್ಥಿತರಿದ್ದರು.