Friday, 16th November 2018  

Vijayavani

ಕೋರ್​​ ಕಮಿಟಿ ಸ್ಥಾನಕ್ಕಾಗಿ ಬಿಜೆಪಿಯಲ್ಲಿ ಫೈಟ್- ಶೋಭಾಗೆ ಸ್ಥಾನ ನೀಡಲು ಹೆಗಡೆ ಜತೆ ಬಿಎಸ್​ವೈ ಪೈಪೋಟಿ        ಮೈಸೂರು ಪಾಲಿಕೆ ಮೇಯರ್​, ಉಪ ಮೇಯರ್​ ಸ್ಥಾನಕ್ಕಿಂದು ಚುನಾವಣೆ: ಮೇಯರ್​ ಗಾದಿಗಾಗಿ ದೋಸ್ತಿಗಳ ಫೈಟ್​        ಅಯ್ಯಪ್ಪನ ದರ್ಶನಕ್ಕಾಗಿ ಕೇರಳದ ಕೊಚ್ಚಿಗೆ ಬಂದಿಳಿದ ಹೋರಾಟಗಾರ್ತಿ ತೃಪ್ತಿ ದೇಸಾಯಿಗೆ ಪ್ರತಿಭಟನೆ ಬಿಸಿ        ಗಜ ಚಂಡಮಾರುತ ಅಬ್ಬರ: ತಮಿಳುನಾಡಿನ ಕರಾವಳಿವಳಿಯಲ್ಲಿ ಜನ ತತ್ತರ, ರಾಜ್ಯದ ದಕ್ಷಿಣ ಒಳನಾಡಿನಲ್ಲೂ ಮಳೆ ಸಾಧ್ಯತೆ        ಕಬ್ಬಿಗೆ ಸಮರ್ಪಕ ಬೆಲೆ ನೀಡುವಂತೆ ಆಗ್ರಹಿಸಿ ಮುಧೋಳದಲ್ಲಿ ರೈತರ ಬೃಹತ್​ ಹೋರಾಟ       
Breaking News

ಗೌರಿ ಇಚ್ಛೆಯಂತೆ ಟಿಆರ್ ಮಿಲ್​ ರುದ್ರಭೂಮಿಯಲ್ಲಿ ಅಂತ್ಯಸಂಸ್ಕಾರ

Wednesday, 06.09.2017, 5:07 PM       No Comments

ಬೆಂಗಳೂರು: ಮಂಗಳವಾರ ರಾತ್ರಿ ದುಷ್ಕರ್ಮಿಗಳ ಗುಂಡೇಟಿಗೆ ಬಲಿಯಾಗಿದ್ದ ಪತ್ರಕರ್ತೆ ಗೌರಿ ಲಂಕೇಶ್‌ ಅವರ ಅಂತ್ಯಸಂಸ್ಕಾರ ಇಂದು ಬುಧವಾರ ಸಂಜೆ ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿತು.

ಚಾಮರಾಜಪೇಟೆಯ ಟಿ.ಆರ್​. ಮಿಲ್​ ರುದ್ರಭೂಮಿಯಲ್ಲಿ ಗೌರಿ ಅವರ ಇಚ್ಛೆಯಂತೆ ಅಂತ್ಯಸಂಸ್ಕಾರವನ್ನು ನೆರವೇರಿಸಲಾಗಿದೆ.

Pls download Vijayavani Android App

ಗೌರಿ ಲಂಕೇಶ್‌ ಸಹೋದರ ಇಂದ್ರಜಿತ್‌ ಲಂಕೇಶ್‌ ಅಂತ್ಯಸಂಸ್ಕಾರವನ್ನು ನೆರವೇರಿಸಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಸಂಪುಟದ ಹಲವು ಸಚಿವರು ಸಿಎಂ ಜತೆಗೆ ಪಾಲ್ಗೊಂಡಿದ್ದರು. ಅಪಾರ ಪ್ರಮಾಣದ ಬಂಧುಗಳು, ಸಾರ್ವಜನಿಕರ ಎದುರಲ್ಲಿ ಅಂತ್ಯ ಸಂಸ್ಕಾರ ನೆರವೇರಿತು.

ವೈಚಾರಿಕ ಹಿನ್ನೆಲೆಯುಳ್ಳ ಗೌರಿ ಲಂಕೇಶ್​ ಅವರು ಆಚಾರ-ವಿಚಾರವನ್ನು ನಂಬಿದವರಲ್ಲ. ಹಾಗಾಗಿ ಅವರ ಅಂತ್ಯಕ್ರಿಯೆಯಲ್ಲಿ ಯಾವುದೇ ಧಾರ್ಮಿಕ ವಿಧಿ-ವಿಧಾನವನ್ನು ಅನುಸರಿಸದೆ ಅಂತಿಸಂಸ್ಕಾರ ನಡೆಸಲಾಯಿತು. (ದಿಗ್ವಿಜಯ ನ್ಯೂಸ್‌)

 

Leave a Reply

Your email address will not be published. Required fields are marked *

Back To Top