

ನವದೆಹಲಿ: ಆಘಾತಕಾರಿ ಘಟನೆಯೊಂದರಲ್ಲಿ ಮಹಿಳೆಯೊಬ್ಬರು ತನ್ನ ಹೆತ್ತ ತಾಯಿಯನ್ನು ಹಿಗ್ಗಾಮುಗ್ಗಾ ಥಳಿಸಿರುವ (Woman Tortures Mother) ಘಟನೆ ಬೆಳಕಿಗೆ ಬಂದಿದೆ. ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ವ್ಯಾಪಕ ಖಂಡನೆಗೆ ಗುರಿಯಾಗಿದೆ.
ವೈರಲ್ ಆಗಿರುವ ವಿಡಿಯೋ ನೋಡುವುದಾದರೆ ಮಹಿಳೆಯೊಬ್ಬರು ತನ್ನ ತಾಯಿಯನ್ನು ಹಿಗ್ಗಾಮುಗ್ಗಾ ಥಳಿಸುತ್ತಿದ್ದು, ಆಕೆ ತನ್ನಮೇಲೆ ಹಲ್ಲೆ ನಡೆಸದಂತೆ ಬೇಡಿಕೊಳ್ಳುತ್ತಿರುವುದನ್ನು ನೋಡಬಹುದಾಗಿದೆ. ಹಲ್ಲೆ ನಡೆಸಿದಲ್ಲದೆ ಆಕೆ ತನ್ನ ತಾಯಿಯನ್ನು ಕಚ್ಚಿದ್ದು, ಹರ್ಯಾನ್ವಿ ಭಾಷೆಯಲ್ಲಿ ಬೈಯುತ್ತಿರುವುದನ್ನು ನೋಡಬಹುದಾಗಿದೆ.
ಸದ್ಯ ಈ ವಿಡಿಯೋ ವೈರಲ್ ಆಗಿದ್ದು, ಹರಿಯಾಣದಲ್ಲಿ ನಡೆದಿರಬಹುದು ಎಂದು ನೆಟ್ಟಿಗರು ಊಹಿಸಿದ್ಧಾರೆ. ಅನೇಕರು ಮಹಿಳೆಯ ನಡೆಯನ್ನು ಖಂಡಿಸಿದ್ದು, ಸಂತ್ರಸ್ತೆಗೆ ನ್ಯಾಯ ಕೊಡಿಸುವಂತೆ ಆಗ್ರಹಿಸಿದ್ದಾರೆ. ದಿನ ಕಳೆದಂತೆ ಈ ರೀತಿಯ ಪ್ರಕರಣಗಳು ಜಾಸ್ತಿಯಾಗುತ್ತಿದ್ದು, ಹರಿಯಾಣದ ಮುಖ್ಯಮಂತ್ರಿ ನಯಾಬ್ ಸಿಂಗ್ ಸೈನಿ ಅವರು ಕೂಡಲೇ ಕ್ರಮ ಜರುಗಸಿಬೇಕೆಂದು ನೆಟ್ಟಿಗರು ಕಮೆಂಟ್ ಮೂಲಕ ಆಗ್ರಹಿಸಿದ್ಧಾರೆ.