21 C
Bengaluru
Thursday, January 23, 2020

ನಿದ್ದೆ ಪ್ರಿಯರಿಗೆ ಕಹಿ ಸುದ್ದಿ; ಹೆಚ್ಚು ನಿದ್ರಿಸಿದರೆ ಈ ಕಾಯಿಲೆ ಸಾಧ್ಯತೆಯಿದೆ ಎನ್ನುತ್ತದೆ ಈ ಆಧ್ಯಯನ !

Latest News

ಮೊಕದ್ದಮೆ ಹಿಂಪಡೆಯಲು ಒತ್ತಾಯ

ಮೈಸೂರು: ಮಾನಸಗಂಗೋತ್ರಿಯಲ್ಲಿ ಎನ್‌ಆರ್‌ಸಿ, ಸಿಎಎ ವಿರೋಧಿಸಿ ನಡೆದ ಪ್ರತಿಭಟನೆ ಸಂದರ್ಭ ‘ಫ್ರೀ ಕಾಶ್ಮೀರ’ ಫಲಕ ಪ್ರದರ್ಶನಕ್ಕೆ ಸಂಬಂಧಿಸಿದಂತೆ ವಿದ್ಯಾರ್ಥಿಗಳ ಮೇಲೆ ಹೂಡಿರುವ ಮೊಕದ್ದಮೆ...

ವಿದ್ಯಾಭ್ಯಾಸದ ಸಂದರ್ಭ ಪ್ರತಿಭಟನೆ ಬೇಡ

ಮೈಸೂರು: ಶಿಕ್ಷಣಕ್ಕೆ ಸಂಬಂಧಿಸಿದ ಸಮಸ್ಯೆಗಳಿದ್ದಲ್ಲಿ ವಿಶ್ವವಿದ್ಯಾಲಯಗಳ ಒಳಗೆ ಬಗೆಹರಿಸಿಕೊಳ್ಳಬೇಕೇ ಹೊರತು, ವಿದ್ಯಾಭ್ಯಾಸದ ಸಂದರ್ಭದಲ್ಲಿ ಪ್ರತಿಭಟನೆಗಳಿಗೆ ಮುಂದಾಗಬಾರದು ಎಂದು ಲೋಕಾಯುಕ್ತ ನಿವೃತ್ತ ನ್ಯಾಯಮೂರ್ತಿ ಸಂತೋಷ್...

ಮಹಿಳೆಯರಿಗೆ ಶೇ.50ರಷ್ಟು ಮೀಸಲಾತಿ ಜಾರಿಗೊಳಿಸಿ

ಮೈಸೂರು: ವಿಧಾನಸಭೆ, ಲೋಕಸಭೆಯಲ್ಲಿ ಮಹಿಳೆಯರಿಗೆ ಶೇ. 50ರಷ್ಟು ಮೀಸಲಾತಿ ಜಾರಿಗೊಳಿಸಬೇಕು ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಒತ್ತಾಯಿಸಿದರು. ಕರ್ನಾಟಕ ಪ್ರದೇಶ ಮಹಿಳಾ...

ಕೇಂದ್ರದ ಬಿಜೆಪಿ ಸರ್ಕಾರ ಬಿದ್ದ ದಿನ ಪೌರತ್ವ ತಿದ್ದುಪಡಿ ಕಾಯ್ದೆಯೂ ರದ್ದಾಗುತ್ತದೆ: ನಿವೃತ್ತ ಐಎಎಸ್​ ಅಧಿಕಾರಿ ಕಣ್ಣನ್​ ಗೋಪಿನಾಥನ್​

ಧಾರವಾಡ: ಪೌರತ್ವ ತಿದ್ದುಪಡಿ ಕಾಯ್ದೆ ಇಡೀ ರಾಷ್ಟ್ರಕ್ಕೆ ಸಂಬಂಧಿಸಿದ ಹಿನ್ನೆಲೆಯಲ್ಲಿ ಎಲ್ಲ ರಾಜ್ಯಗಳಲ್ಲೂ ಹೋರಾಟ ತೀವ್ರಗೊಂಡಿದೆ ಎಂದು ನಿವೃತ್ತ ಐಎಎಸ್​ ಅಧಿಕಾರಿ ಕಣ್ಣನ್​...

ಕಾಲೇಜ್ ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ

ಹಾವೇರಿ: ಇಲ್ಲಿನ ಪಿಬಿ ರಸ್ತೆಯಲ್ಲಿರುವ ಜಿಎಚ್ ಕಾಲೇಜ್​ನಲ್ಲಿ ಹೆಜ್ಜೇನು ದಾಳಿಯಿಂದ 30ಕ್ಕೂ ಹೆಚ್ಚು ವಿದ್ಯಾರ್ಥಿಗಳು ಗಾಯಗೊಂಡಿರುವ ಘಟನೆ ಬುಧವಾರ ಮಧ್ಯಾಹ್ನ ಸಂಭವಿಸಿದೆ.

ನಿದ್ದೆ ಮನುಷ್ಯನ ಆರೋಗ್ಯಕ್ಕೆ ಉತ್ತಮ. ಆದರೆ, ನಿಗದಿತ ಸಮಯಕ್ಕಿಂತ ಹೆಚ್ಚು ನಿದ್ದೆ ಮಾಡುವುದು ಪಾರ್ಶ್ವವಾಯು ಆಹ್ವಾನಕ್ಕೆ ದಾರಿ ಎನ್ನುತ್ತದೆ ಇಲ್ಲೊಂದು ಸಂಶೋಧನೆ!

ವಾಷಿಂಗ್ಟನ್​​ನಲ್ಲಿ ಪ್ರಕಟಗೊಂಡ ಮೆಡಿಕಲ್​ ಜರ್ನಲ್​ ನ್ಯೂರಾಲಜಿ ಇಂತಹ ಸಾಧ್ಯತೆಯನ್ನು ಗುರುತಿಸಿದೆ.

ಅಧ್ಯಯನದ ಪ್ರಕಾರ ಮಧ್ಯಾಹ್ನದಲ್ಲಿ ಯಾರು ನಿರಂತರವಾಗಿ 90 ನಿಮಿಷಕ್ಕಿಂತ ಹೆಚ್ಚು ನಿದ್ದೆ ಮಾಡುತ್ತಾರೆ ಅವರಿಗೆ ಪಾರ್ಶ್ವವಾಯು ತಗುಲುವ ಸಾಧ್ಯತೆ ಇದೆ. ಇದು ಮಧ್ಯಾಹ್ನ ಕೇವಲ 30 ನಿಮಿಷ ಮಲಗುವವರಿಗಿಂತ ಶೇ.25 ಹೆಚ್ಚು ಸಾಧ್ಯತೆ ಇದೆಯಂತೆ.

ಮಧ್ಯಾಹ್ನ ನಿದ್ದೆ ಮಾಡದೆ ಇರುವವರಿಗೆ 30 ನಿಮಿಷ ಮಲಗುವವರಿಗಿಂತ ಪಾರ್ಶ್ವವಾಯು ತಗುಲುವ ಸಾಧ್ಯತೆ ಕಡಿಮೆ ಎನ್ನುವುದು ಆ ಅಧ್ಯಯನದ ಸಾರಾಂಶ.

ಈ ಬಗ್ಗೆ ಅಧ್ಯಯನ ನಡೆಸಿದ ವುಹಾನ್​ನ ಹ್ಯೂಜಂಗ್​ ವಿಜ್ಞಾನ ಮತ್ತು ತಂತ್ರಜ್ಞಾನ ವಿಶ್ವ ವಿದ್ಯಾಲಯದ ಕ್ಸಿಯೊಮಿನಂಗ್​ ಎಂಬುವವರು ತಮ್ಮ ಲೇಖನದಲ್ಲಿ ತಿಳಿಸಿದಂತೆ ಮಧ್ಯಾಹ್ನ ಮತ್ತು ರಾತ್ರಿ ಸುದೀರ್ಘ ನಿದ್ದೆ ಮಾಡುವವರಲ್ಲಿ ಕೊಲೆಸ್ಟ್ರಾಲ್​ ಪ್ರಮಾಣದಲ್ಲಿ ವ್ಯತ್ಯಯವಾಗುವುದು. ಜತೆಗೆ ಸೊಂಟದ ಸುತ್ತಳತೆಯಲ್ಲೂ ವ್ಯತ್ಯಾಸವಾಗುವುದು. ಈ ವ್ಯತ್ಯಾಸಗಳು ಪಾರ್ಶ್ವವಾಯು ಬರುವುದಕ್ಕೆ ಕಾರಣಗಳು ಎನ್ನುತ್ತಾರೆ ಅವರು.

ಮಧ್ಯಾಹ್ನದ ನಿದ್ದೆ ಮತ್ತು ರಾತ್ರಿ ಅತಿ ಹೆಚ್ಚು ಹೊತ್ತು ನಿದ್ದೆ ಮಾಡುವುದು, ನಿಷ್ಕ್ರಿಯತೆಯ ಲಕ್ಷಣಗಳು ಆದ್ದರಿಂದಲೂ ಪಾರ್ಶ್ವವಾಯು ಸಾಧ್ಯತೆ ಇದೆ ಎಂದು ಎಚ್ಚರಿಸುತ್ತಾರೆ.

ಸರಾಸರಿ 62 ವರ್ಷದವರನ್ನು ಒಳಗೊಂಡ ಈ ಅಧ್ಯಯನವನ್ನು ಚೀನಾದಲ್ಲಿ ನಡೆಸಲಾಗಿತ್ತು. ಆರಂಭದಲ್ಲಿ ಅಧ್ಯಯನಕ್ಕೊಳಪಟ್ಟ ಒಟ್ಟು 31,750 ಜನರಿಗೆ ಪಾರ್ಶ್ವವಾಯುವಿನ ಯಾವ ಲಕ್ಷಣಗಳು ಇರಲಿಲ್ಲ. ಅಧ್ಯಯನದ ತಂಡವು ಅಧ್ಯಯಳಕ್ಕೊಳಪಟ್ಟ ಅಷ್ಟೂ ಜನರನ್ನು ಅಂದಾಜು 6 ವರ್ಷಗಳ ಕಾಲ ನಿರಂತರವಾಗಿ ನಿಗಾ ವಹಿಸಿತ್ತು.

ರಾತ್ರಿ 9 ಗಂಟೆ ಅಥವಾ ಹೆಚ್ಚು ನಿದ್ದೆ ಮಾಡುವವರು, ಇದಕ್ಕಿಂತ ಕಡಿಮೆ ನಿದ್ದೆ ಮಾಡುವವರಿಗಿಂತ ಶೇ.23 ಪಾರ್ಶ್ವವಾಯುವಿನ ಸಾಧ್ಯತೆ ಇದೆ ಎಂದು ತಿಳಿದು ಬಂದಿದೆ.

ರಾತ್ರಿ ಮತ್ತು ಹಗಲಿನಲ್ಲಿ ಸುದೀರ್ಘ ನಿದ್ದೆ ಮಾಡುವವರಿಗೆ ಶೇ.85ರಷ್ಟು ಪಾರ್ಶ್ವವಾಯುವಿನ ಸಂಭವ ಹೆಚ್ಚು ಇದೆ ಎಂದು ಅಧ್ಯಯನ ಕಂಡುಕೊಂಡಿದೆ. (ಏಜೆನ್ಸಿಸ್​)

ವಿಡಿಯೋ ನ್ಯೂಸ್

VIDEO: ಮಾವುತನ ಊಟದ ಎಲೆಯಿಂದ ತುತ್ತು ಅನ್ನ ತಿಂದು, ನೆಟ್ಟಿಗರ...

ತಿರುವನಂತಪುರ: ಆನೆಗಳ ಆಟ, ದಾಳಿ, ಮರ ಹತ್ತುವುದು ಹೀಗೆ ಹಲವು ವಿಡಿಯೋಗಳು ಈಗಾಗಲೇ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿವೆ. ಆದರೆ ಈಗ ವೈರಲ್​ ಆಗಿರುವ ಆನೆಯ ವಿಡಿಯೋ ಸಾಮಾಜಿಕ ಬಳಕೆದಾರರ ಮನಸ್ಸು ಗೆದ್ದಿದೆ. ಹಸಿದ...

VIDEO| ರಾಷ್ಟ್ರಪತಿ ರಾಮನಾಥ್​ ಕೋವಿಂದ್​ರಿಂದ ಪ್ರಧಾನಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ...

ನವದೆಹಲಿ: ದೆಹಲಿಯ ರಾಷ್ಟ್ರಪತಿ ಭವನದಲ್ಲಿ ಇಂದು ನಡೆದ ಕಾರ್ಯಕ್ರಮದಲ್ಲಿ ರಾಷ್ಟ್ರಪತಿ ರಾಮನಾಥ್​ ಕೋವಿಂದ್​ ಅವರು ಪ್ರಧಾನಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ ಪ್ರಶಸ್ತಿ ಪ್ರದಾನ ಮಾಡಿದರು. ವಿವಿಧ ಕ್ಷೇತ್ರಗಳಲ್ಲಿ ಅದ್ವಿತೀಯ ಸಾಧನೆ ಮಾಡಿದ...

VIDEO| ಬೇಲಿಯೇ ಎದ್ದು ಹೊಲ ಮೇಯ್ದಂತೆ ಎಂಬ ಗಾದೆ ಮಾತಿಗೆ...

ಲಖನೌ: ಬೇಲಿಯೇ ಎದ್ದು ಹೊಲ ಮೇಯ್ದಂತೆ ಎಂಬ ಗಾದೆ ಮಾತಿಗೆ ಪೂರಕವಾದ ಘಟನೆ ಇದಾಗಿದೆ. ಉತ್ತರ ಪ್ರದೇಶದ ನೋಯ್ಡಾದಲ್ಲಿ ನಡೆದ ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದೆ. ನೋಯ್ಡಾದಲ್ಲಿ ಅಂಗಡಿ ಹೊರಭಾಗದಲ್ಲಿ ಇಟ್ಟಿದ್ದ ಬಾಕ್ಸ್​ನಿಂದ...

VIDEO| ನಟಿಯಾಗಿರೋ ಆಲಿಯಾ ಇದೀಗ ಶೆಫ್​: ಬಾಲಿವುಡ್​ ಬ್ಯೂಟಿಯ ಅಡುಗೆ...

ಮುಂಬೈ: ಬಾಲಿವುಡ್​ ಬ್ಯೂಟಿ ಆಲಿಯಾ ಭಟ್ ನಟನೆ ಜತೆಗೆ ಹೊಸ ಸಾಹಸಕ್ಕೆ ಕೈಹಾಕಿದ್ದಾರೆ. ನಟಿಯಾಗಿರುವ ಆಲಿಯಾ ಇದೀಗ ಶೆಫ್ ಆಗಿದ್ದು, ಹೊಸ ಬಗೆಯ ಅಡುಗೆ ಪರಿಚಯಿಸಲು ಮುಂದಾಗಿದ್ದಾರೆ. ಯೂಟ್ಯೂಬ್​ನಲ್ಲಿ ಆಲಿಯಾ ಭಟ್...

VIDEO| ಅತಿವೇಗದ ಎಸೆತ, ಮಥೀಶಾ ಪಥಿರಣ ವಿಶ್ವದಾಖಲೆ!

ಬ್ಲೂಮ್​ಫಾಂಟೆನ್: ಶ್ರೀಲಂಕಾ ವಿರುದ್ಧ ಭಾನುವಾರ ನಡೆದ 19 ವಯೋಮಿತಿ ಏಕದಿನ ವಿಶ್ವಕಪ್ ಟೂರ್ನಿಯ ಮುಖಾಮುಖಿಯಲ್ಲಿ ಭಾರತ ತಂಡ 90 ರನ್​ಗಳಿಂದ ಗೆಲುವು ಸಾಧಿಸಿತು. ಆದರೆ, ಲಂಕಾ ಕಡೆಯಿಂದಲೂ ಸ್ಮರಣೀಯ ದಾಖಲೆಯೊಂದು...

VIDEO| ತಮಿಳಿನ ಕೌನ್​ ಬನೇಗಾ ಕರೋಡ್​ಪತಿ ಶೋನಲ್ಲಿ 1 ಕೋಟಿ...

ಚೆನ್ನೈ: ತಮಿಳು ಆವೃತ್ತಿಯ ಕೌನ್​ ಬನೇಗಾ ಕರೋಡ್​ಪತಿ(ಕೊಡೀಶ್ವರಿ) ರಿಯಾಲಿಟಿ ಶೋನಲ್ಲಿ ವಿಕಲಾಂಗ ಮಹಿಳೆಯೊಬ್ಬಳು ಬರೋಬ್ಬರಿ 1 ಕೋಟಿ ರೂ. ಬಹುಮಾನ ಮೊತ್ತವನ್ನು ಗೆದ್ದು ಎಲ್ಲರ ಗಮನ ಸೆಳೆದಿದ್ದಾಳೆ.ಮದುರೈ ನಿವಾಸಿಯಾಗಿರುವ ಕೌಶಲ್ಯ...