More

    ಸ್ಲೋವಾಕಿಯಾದ ಪ್ರಧಾನಿ ರಾಬರ್ಟ್ ಫಿಕೊ ಮೇಲೆ ಗುಂಡಿನ ದಾಳಿ! ಶಂಕಿತನ ಬಂಧನ

    ಹ್ಯಾಂಡ್ಲೋವಾ: ಸ್ಲೋವಾಕಿಯಾ ಪ್ರಧಾನಿ ರಾಬರ್ಟ್ ಫಿಕೊ ಮೇಲೆ ಗುಂಡಿನ ದಾಳಿಯಾಗಿದ್ದು, ಅವರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಇಲ್ಲಿನ ಸರ್ಕಾರ ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದೆ.

    ಇದನ್ನೂ ಓದಿ: 27 ವಾರಗಳ ಗರ್ಭಪಾತ ತೆಗೆಸಲು ಅನುಮತಿ ನಿರಾಕರಿಸಿದ ಕೋರ್ಟ್!: ​ಭ್ರೂಣಕ್ಕೂ ಬದುಕುವ ಮೂಲಭೂತ ಹಕ್ಕು

    ರಾಜಧಾನಿ ಬ್ರಾಟಿಸ್ಲಾವಾದ ಈಶಾನ್ಯದಲ್ಲಿರುವ ಹ್ಯಾಂಡ್ಲೋವಾದಲ್ಲಿ ನಡೆದ ಕ್ಯಾಬಿನೆಟ್ ಸಭೆಯೊಂದರ ಬಳಿಕ ನಡೆದ ಗುಂಡಿನ ದಾಳಿಯಲ್ಲಿ ಪ್ರಧಾನಿ ರಾಬರ್ಟ್ ಫಿಕೊ ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ತಕ್ಷಣ ಕಾರ್ಯೋನ್ಮುಖರಾದ ಪೊಲೀಸರು ಒಬ್ಬ ಶಂಕಿತನನ್ನು ಬಂಧಿಸಿದ್ದಾರೆ.

    ಮಾಧ್ಯಮ ವರದಿಗಳ ಪ್ರಕಾರ, ರಷ್ಯಾದ ಪರ ಪ್ರಧಾನಿ ಅವರು ಕ್ಯಾಬಿನೆಟ್ ಸಭೆ ನಡೆಸುತ್ತಿದ್ದ ಹೌಸ್ ಆಫ್ ಕಲ್ಚರ್ ಹೊರಗೆ 4 ನಾಲ್ಕು ಗುಂಡುಗಳನ್ನು ಹಾರಿಸಲಾಗಿದೆ. ಬುಲೆಟ್​ 59 ವರ್ಷದ ಫಿಕೊ ಅವರ ಹೊಟ್ಟೆಗೆ ತಗುಲಿದೆ. ಪಿಎಂ ಫಿಕೋ ಹೌಸ್‌ನ ಹೊರಗೆ ಜನರೊಂದಿಗೆ ಮಾತನಾಡುತ್ತಿದ್ದರು. ಈ ವೇಳೆ ಗುಂಡಿನ ದಾಳಿ ನಡೆದಿದ್ದು ಇದರ ವಿಡಿಯೋಗಳು ಕೂಡ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿವೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts