ಅರಣ್ಯ ಒತ್ತುವರಿಗೆ ಸಣ್ಣ ರೈತರು ಗುರಿ: ಆರಗ ಆಕ್ರೋಶ

Araga

ಶಿವಮೊಗ್ಗ: ಅರಣ್ಯ ಒತ್ತುವರಿ ತೆರವು ಆದೇಶ ಪಾಲನೆ ನೆಪದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ಬಗರ್‌ಹುಕುಂ ಸಾಗುವಳಿದಾರರ ನಿದ್ದೆಗೆಡಿಸಿದ್ದಾರೆ. ಬಿಜೆಪಿ ಎಂದಿಗೂ ಬಗರ್‌ಹುಕುಂ ಸಾಗುವಳಿದಾರರ ಪರವಾಗಿ ನಿಂತಿದೆ. ಮುಂದೆಯೂ ನಿಲ್ಲಲಿದೆ ಎಂದು ಶಾಸಕ ಆರಗ ಜ್ಞಾನೇಂದ್ರ ಹೇಳಿದರು.

ಭೂಕುಸಿತ ಪ್ರಕರಣಗಳಿಗೂ ಬಗರ್‌ಹುಕುಂ ಸಾಗುವಳಿಗೂ ಸಂಬಂಧವಿಲ್ಲ. ಅವೈಜ್ಞಾನಿಕ ಕಾಮಗಾರಿಗಳಿಂದ ಗುಡ್ಡ ಕುಸಿತ ಉಂಟಾಗುತ್ತಿದೆ. ಇಂಗುಗುಂಡಿ ನಿರ್ಮಾಣವೂ ಕುಸಿತಕ್ಕೆ ಕಾರಣವಾಗಿದೆ. ಆದರೆ ಇದರಲ್ಲಿ ಜೀವನೋಪಾಯಕ್ಕಾಗಿ ಸಾಗುವಳಿ ಮಾಡುತ್ತಿರುವ ಸಣ್ಣ ರೈತರನ್ನು ಗುರಿ ಮಾಡಿರುವುದು ದುರದೃಷ್ಟಕರ ಎಂದು ಸೋಮವಾರ ಸುದ್ದಿಗೋಷ್ಠಿಯಲ್ಲಿ ಅಸಮಾಧಾನ ವ್ಯಕ್ತಪಡಿಸಿದರು.
ಅರಣ್ಯ ಸಚಿವ ಈಶ್ವರ ಖಂಡ್ರೆ ಬಯಲುಸೀಮೆ ಪ್ರದೇಶದವರು. ಅವರಿಗೆ ಮಲೆನಾಡಿನ ಸಮಸ್ಯೆಗಳ ಬಗ್ಗೆ ಅರಿವಿಲ್ಲ. ಅವರು ಮೊದಲು ಮಲೆನಾಡು ಭಾಗದ ಶಾಸಕರ ಸಭೆ ಕರೆದು ಚರ್ಚಿಸಬೇಕು. ಮಲೆನಾಡಿನಲ್ಲಿ ಅರಣ್ಯ ಹಾಗೂ ಕಂದಾಯ ಭೂಮಿ ಸಮಸ್ಯೆ ವ್ಯಾಪಕವಾಗಿದೆ. ಮೊದಲು ಇದನ್ನು ಬಗೆಹರಿಸಲಿ ಎಂದು ಒತ್ತಾಯಿಸಿದರು.
ಅರಣ್ಯ ಸಚಿವರು ನೀಡಿರುವ ಅರಣ್ಯ ಒತ್ತುವರಿ ತೆರವು ಆದೇಶದಿಂದ ರೈತರ ಅನ್ನ ಕಸಿಯುವ ಕೆಲಸ ಮಾಡಲಾಗುತ್ತಿದೆ. ಅರಣ್ಯ ಹಾಗೂ ಕಂದಾಯ ಭೂಮಿ ಮಾಲೀಕತ್ವದ ಬಗ್ಗೆಯೇ ಗೊಂದಲವಿದೆ. ಇಂಡೀಕರಣದಿಂದ ಸಾವಿರಾರು ಎಕರೆ ಕಂದಾಯ ಭೂಮಿ ಅರಣ್ಯ ಇಲಾಖೆಗೆ ಸೇರಿದೆ. ಈಗ ಬಗರ್‌ಹುಕುಂ ಸಾಗುವಳಿದಾರರಿಗೆ ಇದು ಸಮಸ್ಯೆಯಾಗಿ ಪರಿಣಮಿಸಿದೆ ಎಂದರು.
ಶಾಸಕ ಎಸ್.ಎನ್.ಚನ್ನಬಸಪ್ಪ, ವಿಧಾನಪರಿಷತ್ ಸದಸ್ಯ ಡಿ.ಎಸ್.ಅರುಣ್, ಜಿಲ್ಲಾ ಕಾರ್ಯದರ್ಶಿ ಎಂ.ಬಿ.ಹರಿಕೃಷ್ಣ, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಶಿವರಾಜ್, ಮಾಲತೇಶ್, ಪ್ರಮುಖರಾದ ವಿನ್ಸೆಂಟ್ ರೋಡ್ರಿಗಸ್, ಭವಾನಿ ರಾವ್ ಮೋರೆ, ಚಂದ್ರಶೇಖರ್, ಅಣ್ಣಪ್ಪ ಇತರರಿದ್ದರು.

Share This Article

ಬಿಕ್ಕಳಿಕೆ ಏಕೆ ಬರುತ್ತದೆ? ಕಿರಿಕಿರಿ ಉಂಟುಮಾಡುವ ಅದನ್ನು ನಿಯಂತ್ರಿಸುವುದು ಹೇಗೆ?

 ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…

ಈ ದಿನಾಂಕದಂದು ಜನಿಸಿದವರು ದಾನದಲ್ಲಿ ಕರ್ಣನನ್ನು ಮೀರಿಸುತ್ತಾರೆ! ನೀವೂ ಹುಟ್ಟಿದ್ದು ಇದೇ ದಿನಾನಾ?

ಜ್ಯೋತಿಷ್ಯಶಾಸ್ತ್ರದಲ್ಲಿ ಸಂಖ್ಯಾಶಾಸ್ತ್ರವೂ ಒಂದು. ಇದರ ಪ್ರಕಾರ ವ್ಯಕ್ತಿಯ ಜನ್ಮ ದಿನಾಂಕವು ಅವನ ವ್ಯಕ್ತಿತ್ವದ ಬಗ್ಗೆ ಮತ್ತು…

ಗೋಲ್ಡನ್ ಅವರ್ ರಹಸ್ಯ: ಮುಂಜಾನೆ ಬೇಗ ಏಳುವುದರಿಂದ ಇದೆ 6 ಪ್ರಯೋಜನಗಳು

 ಬೆಂಗಳೂರು: ಮನೆಯಲ್ಲಿ ಕೆಲವರು ಸೂರ್ಯೋದಯಕ್ಕೂ ಮೊದಲೇ ಏಳುವ ಅಭ್ಯಾಸ ಇಟ್ಟುಕೊಂಡಿರುತ್ತಾರೆ. ಮುಂಜಾನೆ ಬೇಗ ಏಳುವುದನ್ನು ರೂಢಿ…