ಒಂದು ಸಣ್ಣ ತಪ್ಪು ಸರ್ಕಾರವನ್ನು ಪತನಗೊಳಿಸಬಹುದು ಎಂದಿದ್ದೇಕೆ ಕಾಂಗ್ರೆಸ್​​ ನಾಯಕ ರಾಹುಲ್​ ಗಾಂಧಿ

Untitled-design-2024-06-18T141414.293
Published on

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಮೈತ್ರಿಕೂಟ (ಎನ್‌ಡಿಎ)ವು ಸರ್ಕಾರ ರಚಿಸಿದೆ. ಕಾಂಗ್ರೆಸ್​ ನಾಯಕ ರಾಹುಲ್​ಗಾಂಧಿ ಸರ್ಕಾರ ಪತನವಾಗಲಿದೆ ಎಂದು ಭವಿಷ್ಯ ನುಡಿದಿದ್ದಾರೆ. ಎನ್‌ಡಿಎಯ ಸಂಖ್ಯಾಬಲ ಬಹಳ ದುರ್ಬಲವಾಗಿದ್ದು, ಒಂದು ಸಣ್ಣ ತಪ್ಪು ಸರ್ಕಾರವನ್ನು ಪತನಗೊಳಿಸಬಹುದು. ಮೋದಿಯವರ ಪಾಳಯದಲ್ಲಿ ಸಾಕಷ್ಟು ಅತೃಪ್ತಿ ಇದೆ ಎಂದು ಅವರು ಹೇಳಿದ್ದಾರೆ. ಅಲ್ಲದೆ ಯಾವುದೇ ವಿವರಗಳನ್ನು ಬಹಿರಂಗಪಡಿಸದೆ, ಮೋದಿ ಪಾಳಯದೊಳಗಿರುವ ಜನರು ನಮ್ಮೊಂದಿಗೆ ಸಂಪರ್ಕದಲ್ಲಿದ್ದಾರೆ ಎಂದಿದ್ದಾರೆ.

ಲೋಕಸಭಾ ಚುನಾವಣೆ ಬಳಿಕ ಮೊದಲ ಬಾರಿಗೆ ಫೈನಾನ್ಷಿಯಲ್ ಟೈಮ್ಸ್‌ಗೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ ರಾಹುಲ್​​ ಗಾಂಧಿ, ಭಾರತೀಯ ರಾಜಕೀಯ ವ್ಯವಸ್ಥೆಯಲ್ಲಿ ಈಗ ಅನೇಕ ಸಾಧ್ಯತೆಗಳು ತೆರೆದುಕೊಂಡಿವೆ. 2014ರಲ್ಲಿ ಮೋದಿ ಅಧಿಕಾರಕ್ಕೆ ಬಂದ ನಂತರ ಬಿಜೆಪಿ ಮೊದಲ ಬಾರಿಗೆ ಬಹುಮತ ಕಳೆದುಕೊಂಡಿದೆ. ಇದರಿಂದಾಗಿ ದೇಶದ ರಾಜಕೀಯದಲ್ಲಿ ದೊಡ್ಡ ಬದಲಾವಣೆಯಾಗಿದೆ ಎಂದು ಹೇಳಿದ್ದಾರೆ.

ಕಳೆದ ವಾರ ಪ್ರಧಾನಿ ಮೋದಿ ಪ್ರಮಾಣ ವಚನ ಸ್ವೀಕರಿಸಿದರು, ಜವಾಹರಲಾಲ್ ನೆಹರು ನಂತರ ಸತತ ಮೂರು ಬಾರಿ ಗೆದ್ದ ಭಾರತದ ಎರಡನೇ ಪ್ರಧಾನಿಯಾಗಿದ್ದಾರೆ. ಆದರೆ ಅವರ ಮೈತ್ರಿಯ ಸ್ಥಿರತೆಯ ಬಗ್ಗೆ ರಾಜಕೀಯ ವಿಶ್ಲೇಷಕರು ಪ್ರಶ್ನೆಗಳನ್ನು ಎತ್ತಿದ್ದಾರೆ. ಕಳೆದ ದಶಕದ ಸರ್ಕಾರಗಳಿಗೆ ಹೋಲಿಸಿದರೆ ಈಗಿನ ಸಮ್ಮಿಶ್ರ ಸರ್ಕಾರ ದುರ್ಬಲವಾಗಿರಲಿದೆ ಎಂಬುದು ವಿಶ್ಲೇಷಕರ ಮಾತು. ಬಿಜೆಪಿ ಅಧಿಕಾರದಲ್ಲಿ ಉಳಿಯಲು ಸಣ್ಣ ಮೈತ್ರಿಕೂಟಗಳನ್ನು ಅವಲಂಬಿಸಬೇಕೆಂಬುದು ಇದರ ಹಿಂದಿನ ಕಾರಣ ಆಗಿದೆ ಎಂದಿದ್ದಾರೆ.

ಲೋಕಸಭೆ ಚುನಾವಣೆ ಬಳಿಕ ಎಕ್ಸಿಟ್​​ ಪೋಲ್​​ಗಳು ಭವಿಷ್ಯಕ್ಕಿಂತ ಪ್ರತಿಪಕ್ಷಗಳ ಮೈತ್ರಿಕೂಟ I.N.D.I.A ಬಣವು ನಿರೀಕ್ಷೆಗಿಂತ ಉತ್ತಮ ಸಾಧನೆ ಮಾಡಿದೆ ಎಂದು ಹೇಳಿದರು. (ಏಜೆನ್ಸೀಸ್​​)

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net