25.5 C
Bangalore
Monday, December 16, 2019

ಸ್ಮಾರ್ಟ್‌ಸಿಟಿ ಯೋಜನೆಗೆ ವೇಗ

Latest News

ರಾಜರಾಜೇಶ್ವರಿ ನಗರದ ಸಮಸ್ಯೆ ಬಗೆಹರಿಸುವಂತೆ ಬಿಜೆಪಿ ನಾಯಕರ ಬೆನ್ನುಹತ್ತಿರುವ ಅನರ್ಹ ಶಾಸಕ ಮುನಿರತ್ನ

ಬೆಂಗಳೂರು: ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದ ಸಮಸ್ಯೆ ಬಗೆ ಹರಿಸಿ ಶೀಘ್ರವೇ ಉಪ ಚುನಾವಣೆ ನಡೆಯುವಂತೆ ಮಾಡಬೇಕು ಎಂದು ಅನರ್ಹ ಶಾಸಕ ಮುನಿರತ್ನ...

ಪೌರತ್ವ ತಿದ್ದುಪಡಿ ಕಾಯ್ದೆ, ಎನ್​ಆರ್​ಸಿ ವಿರುದ್ಧ ಕೋಲ್ಕತ್ತದಲ್ಲಿ ಬೃಹತ್​ ರ‍್ಯಾಲಿ; ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನೇತೃತ್ವ

ಕೋಲ್ಕತ್ತ: ಪೌರತ್ವ ತಿದ್ದುಪಡಿ ಕಾಯ್ದೆ ಈಗಾಗಲೇ ದೇಶದ ಕೆಲವು ರಾಜ್ಯಗಳಲ್ಲಿ ಕಿಡಿ ಹೊತ್ತಿಸಿದೆ. ದೇಶದ ಈಶಾನ್ಯ ಭಾಗದಲ್ಲಿ ಪ್ರಾರಂಭವಾದ ಪ್ರತಿಭಟನೆ ಈಗ ದೆಹಲಿ, ಉತ್ತರ ಪ್ರದೇಶ...

ಅಯ್ಯಪ್ಪ ಮಾಲಾಧಾರಿಗಳಿಗೆ ಅನ್ನದಾನ ಮಾಡಿದ : ಸಾಮರಸ್ಯದ ಕಾರ್ಯಕ್ರಮ

ಬಳ್ಳಾರಿ: ನಗರದ ಹೊಸಪೇಟೆ ರಸ್ತೆಯಲ್ಲಿರುವ ಏಳು ಮಕ್ಕಳ ದೇವಸ್ಥಾನದಲ್ಲಿ ಅಯ್ಯಪ್ಪ ಮಾಲಾಧಾರಿಗಳಿಗೆ ಸೋಮವಾರ ಮುಸ್ಲಿಂರು ಊಟ ಬಡಿಸುವ ಮೂಲಕ ಸಾಮರಸ್ಯಕ್ಕೆ ಮುನ್ನುಡಿ ಬರೆದರು....

ಒಂದೂವರೆ ತಾಸು ಶಸ್ತ್ರಚಿಕಿತ್ಸೆ ನಡೆಸಿ ಎದೆಗೆ ನಾಟಿದ್ದ ಕಬ್ಬಿಣ ರಾಡ್​ ಹೊರತೆಗೆದ ವೈದ್ಯರು: ಪ್ರಾಣಾಪಾಯದಿಂದ ವ್ಯಕ್ತಿ ಪಾರು

ರಾಯಚೂರು: ಎದೆಗೆ ಕಬ್ಬಿಣದ ರಾಡ್ ತೂರಿದ್ದ ವ್ಯಕ್ತಿಗೆ ರಾಯಚೂರಿನ ಖಾಸಗಿ ಆಸ್ಪತ್ರೆಯ ವೈದ್ಯರು ಸತತ ಒಂದೂವರೆ ತಾಸು ಶಸ್ತ್ರಚಿಕಿತ್ಸೆ ನಡೆಸಿ ಪ್ರಾಣಾಪಾಯದಿಂದ ಪಾರು...

ಹಿಂದು ರಾಷ್ಟ್ರದಲ್ಲಿ ಹಿಂದುಗಳ ಮೇಲೆ ದೌರ್ಜನ್ಯ ಮಿತಿಮೀರಿದೆ

ಕೊಡಗು: ಹಿಂದು ರಾಷ್ಟ್ರದಲ್ಲಿ ಹಿಂದುಗಳ ಮೇಲೆ ದೌರ್ಜನ್ಯ ಮಿತಿಮೀರಿದೆ ಎಂದು ವಕೀಲ ಪಿ. ಕೃಷ್ಣಮೂರ್ತಿ ಆಕ್ರೋಶ ವ್ಯಕ್ತ ಪಡಿಸಿದ್ದಾರೆ. ಹಿಂದು ಜನಜಾಗೃತಿ ಸಮಿತಿಯಿಂದ ಕುಶಾಲನಗರದ ಗಾಯತ್ರಿ ಕಲ್ಯಾಣ...

ಪಿ.ಬಿ.ಹರೀಶ್ ರೈ ಮಂಗಳೂರು

- Advertisement -

ಮಂಗಳೂರು ಸ್ಮಾರ್ಟ್‌ಸಿಟಿ ಯೋಜನೆಗೆ ಕೊನೆಗೂ ವೇಗ ದೊರೆತಿದೆ. 45 ಸ್ಮಾರ್ಟ್ ರಸ್ತೆಗಳು, ಕದ್ರಿ ಪಾರ್ಕ್‌ನ ಸಮಗ್ರ ಅಭಿವೃದ್ಧಿ, ಎಮ್ಮೆಕೆರೆಯಲ್ಲಿ ಅಂತಾರಾಷ್ಟ್ರೀಯ ಈಜುಕೊಳ, ಸರ್ಕಾರಿ ಶಾಲೆಗಳಿಗೆ ಇ ಸ್ಮಾರ್ಟ್ ವ್ಯವಸ್ಥೆ, ಕಮಾಂಡ್ ಕಂಟ್ರೋಲ್ ಕಟ್ಟಡ ಸಹಿತ 326 ಕೋಟಿ ರೂ. ವೆಚ್ಚದ ಕಾಮಗಾರಿಗಳಿಗೆ ಮುಂದಿನ ತಿಂಗಳು ಚಾಲನೆ ದೊರೆಯಲಿದೆ.

ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆಯಾದ ಸ್ಮಾರ್ಟ್‌ಸಿಟಿಯಿಂದ ಮಂಗಳೂರು ನಗರದಲ್ಲಿ ಅಭಿವೃದ್ಧಿಯ ಹೊಸ ಶಕೆ ನಿರೀಕ್ಷಿಸಲಾಗಿತ್ತು. ಆದರೆ ಮೂರು ವರ್ಷದಿಂದ ಯೋಜನೆ ನಿರೀಕ್ಷಿತ ವೇಗ ಪಡೆದಿರಲಿಲ್ಲ. ಕ್ಲಾಕ್ ಟವರ್, ಬಸ್ ತಂಗುದಾಣ, ಮೈದಾನ್ ರಸ್ತೆಯ ಅಭಿವೃದ್ಧಿ.. ಹೀಗೆ ಮೊದಲ ಹಂತದಲ್ಲಿ ಕೈಗೊಂಡ ಕಾಮಗಾರಿಗಳು ಕೂಡ ಕುಂಟುತ್ತಾ ಸಾಗಿತ್ತು. 77.83 ಕೋಟಿ ರೂ. ವೆಚ್ಚದ 11 ಕಾಮಗಾರಿ ಸದ್ಯ ಪ್ರಗತಿಯಲ್ಲಿದೆ.

ವಿಳಂಬಕ್ಕೆ ಕಾರಣ
ಚುನಾವಣೆ ಹಾಗೂ ರಾಜ್ಯ ರಾಜಕೀಯ ಅಸ್ಥಿರತೆಯಿಂದ ಸ್ಮಾರ್ಟ್‌ಸಿಟಿ ಯೋಜನೆಯ ಅನುಷ್ಠಾನ ವಿಳಂಬವಾಯಿತು. ನಗರವನ್ನು ಸ್ಮಾರ್ಟ್ ಆಗಿಸುವ ವಿಶಿಷ್ಟ ಯೋಜನೆಗಳ ಬದಲು ಕೆಲವು ಜನಪ್ರತಿನಿಧಿಗಳು ಕ್ಲಾಕ್ ಟವರ್, ಕಸಾಯಿಖಾನೆಯಂತಹ ಯೋಜನೆಗಳನ್ನು ಒತ್ತಾಯ ಪೂರ್ವಕವಾಗಿ ಅಳವಡಿಸಿದ್ದು, ಕೂಡ ವಿವಾದಕ್ಕೆ ಕಾರಣವಾಯಿತು.

ಅನುದಾನ ಬಿಡುಗಡೆ
ಮಂಗಳೂರು ಸ್ಮಾರ್ಟ್‌ಸಿಟಿ ಯೋಜನೆಗೆ ಪ್ರಥಮ ಹಂತದಲ್ಲಿ 222 ಕೋಟಿ ರೂ. ಹಾಗೂ ದ್ವಿತೀಯ ಹಂತದಲ್ಲಿ 180 ಕೋಟಿ ರೂ. ಬಿಡುಗಡೆಯಾಗಿದೆ. ಪಾಲಿಕೆಯ 8 ವಾರ್ಡ್‌ಗಳ 1629 ಎಕರೆ ಪ್ರದೇಶವನ್ನು ಸ್ಮಾರ್ಟ್ ಸಿಟಿಯ ಯೋಜನೆಯ ಪ್ರದೇಶಾಧಾರಿತ ಅಭಿವೃದ್ಧಿಗಾಗಿ ಗುರುತಿಸಲಾಗಿದ್ದು, ಈ ವಾರ್ಡ್‌ಗಳಲ್ಲಿ ಸುಮಾರು 15 ಕೋಟಿ ರೂ. ವೆಚ್ಚದ ಒಳಚರಂಡಿ ಕಾಮಗಾರಿ ಪ್ರಗತಿಯಲ್ಲಿದೆ. 23 ಕೋಟಿ ರೂ. ವೆಚ್ಚದಲ್ಲಿ ಕರ್ನಾಟಕ ಮುನ್ಸಿಪಲ್ ಡಾಟಾ ಸೊಸೈಟಿಯ ಕಮಾಂಡ್ ಕಂಟ್ರೋಲ್ ಸೆಂಟರ್ ನಿರ್ಮಾಣ ಹಂತದಲ್ಲಿದೆ.

ಸ್ಮಾರ್ಟ್ ರಸ್ತೆಗಳು
ಕಾಂಕ್ರಿಟೀಕರಣಗೊಂಡ ರಸ್ತೆಗಳಿಗೆ ಫುಟ್‌ಪಾತ್ ನಿರ್ಮಾಣ ಸಹಿತ ಅಂದಗೊಳಿಸುವ ಕಾಮಗಾರಿ ನಡೆಯಲಿದೆ. ಒಟ್ಟು 7 ಪ್ಯಾಕೇಜ್‌ಗಳಲ್ಲಿ 45 ಅಧಿಕ ರಸ್ತೆಗಳು ಸ್ಮಾರ್ಟ್ ರಸ್ತೆಗಳಾಗಲಿವೆ. ಈ ಯೋಜನೆಗೆ ಸುಮಾರು 250 ಕೋಟಿ ರೂ. ವೆಚ್ಚವಾಗಲಿದೆ. 12 ಕೋಟಿ ರೂ. ವೆಚ್ಚದಲ್ಲಿ ಕದ್ರಿ ಪಾರ್ಕ್ ಅಭಿವೃದ್ಧಿ, 10 ಕೋಟಿ ರೂ. ವೆಚ್ಚದಲ್ಲಿ ಶೇ. ನೂರು ನೀರು ಪೂರೈಕೆ ಯೋಜನೆ, ನೀರಿನ ಮೀಟರ್ ಅಳವಡಿಕೆ 24.94 ಕೋಟಿ ರೂ. ವೆಚ್ಚದಲ್ಲಿ ಎಮ್ಮೆಕೆರೆಯಲ್ಲಿ ಅಂತಾರಾಷ್ಟ್ರೀಯ ಮಟ್ಟದ ಈಜುಕೊಳ ನಿರ್ಮಾಣ ಸಹಿತ ಹಲವು ಕಾಮಗಾರಿಗಳ ಟೆಂಡರ್ ಪ್ರಕ್ರಿಯೆ ನಡೆದಿದ್ದು, ಮುಂದಿನ ತಿಂಗಳು ಕಾಮಗಾರಿ ಶುರುವಾಗಲಿದೆ.

ಸ್ಮಾರ್ಟ್ ಸಿಟಿ ಯೋಜನೆಯಡಿ ಈಗ 77.83 ಕೋಟಿ ರೂ. ವೆಚ್ಚದ 11 ಕಾಮಗಾರಿ ಪ್ರಗತಿಯಲ್ಲಿದೆ. ದ್ವಿತೀಯ ಹಂತದಲ್ಲಿ ನಡೆಯುವ 236ಕೋಟಿ ರೂ. ವೆಚ್ಚದ 7 ಕಾಮಗಾರಿಗಳ ಟೆಂಡರ್ ಪ್ರಕ್ರಿಯೆ ಪೂರ್ಣಗೊಂಡಿದ್ದು, ಕಾಮಗಾರಿ ಆರಂಭಿಸಲು ಅನುಮತಿ ನೀಡಲಾಗಿದೆ. 90.46 ಕೋಟಿ ರೂ. ವೆಚ್ಚದ 5 ಕಾಮಗಾರಿಗಳ ಟೆಂಡರ್ ಶೀಘ್ರ ಅಂತಿಮಗೊಳ್ಳಲಿದೆ. ಮುಂದಿನ ತಿಂಗಳು ಎಲ್ಲ ಕಾಮಗಾರಿಗಳಿಗೆ ಚಾಲನೆ ನೀಡಲಾಗುವುದು.
ಬಿ.ಎಚ್.ನಾರಾಯಣಪ್ಪ, ವ್ಯವಸ್ಥಾಪಕ ನಿರ್ದೇಶಕರು, ಮಂಗಳೂರು ಸ್ಮಾರ್ಟ್ ಸಿಟಿ ಲಿಮಿಟೆಡ್

Stay connected

278,752FansLike
588FollowersFollow
629,000SubscribersSubscribe

ವಿಡಿಯೋ ನ್ಯೂಸ್

VIDEO| ಕ್ರಿಕೆಟ್​​ ಮೈದಾನಕ್ಕೆ ಎಂಟ್ರಿ ಕೊಟ್ಟು ಪಂದ್ಯವನ್ನೇ ಕೆಲಕಾಲ ನಿಲ್ಲಿಸಿದ...

ಹೈದರಾಬಾದ್​: ಮಳೆಯ ಕಾರಣದಿಂದಾಗಿ ಕ್ರಿಕೆಟ್​ ಪಂದ್ಯಗಳು ಕೆಲಕಾಲ ಸ್ಥಗಿತಗೊಳ್ಳುವುದನ್ನು ನಾವು ನೋಡಿದ್ದೇವೆ. ಆದರೆ, ಹಾವಿನಿಂದಾಗಿ ಪಂದ್ಯ ಕೆಲಕಾಲ ನಿಲ್ಲುವುದನ್ನು ಎಂದಾದರೂ ನೋಡಿದ್ದೀರಾ? ಇಲ್ಲ ಎಂದಾದಲ್ಲಿ ನಾವು ತೋರಿಸುತ್ತೇವೆ ನೋಡಿ.... ಡಿಸೆಂಬರ್​ 9ರ...

VIDEO: ನಮಾಮಿ ಗಂಗಾ ಯೋಜನೆ ಪ್ರಗತಿ ಪರಿಶೀಲನೆ ಮುಗಿಸಿ ವಾಪಸ್​...

ಲಖನೌ: ಪ್ರಧಾನಿ ನರೇಂದ್ರ ಮೋದಿಯವರು ನ್ಯಾಷನಲ್ ಗಂಗಾ ಕೌನ್ಸಿಲ್​ನ ಮೊದಲ ಸಭೆಯನ್ನು ಇಂದು ಕಾನ್ಪುರದಲ್ಲಿ ನಡೆಸಿದ್ದಾರೆ. ಸಭೆಯಲ್ಲಿ ನಮಾಮಿ ಗಂಗಾ ಯೋಜನೆಯ ಮುಂದಿನ ಹಂತಗಳು, ನದಿ ಸ್ವಚ್ಛತೆಗೆ ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ನರೇಂದ್ರ ಮೋದಿ...

ವಿಡಿಯೋ | ಪತ್ನಿಗಾಗಿ ಆತ ಮಾಡಿದ ಆ ಕೆಲಸಕ್ಕೆ ನೆಟ್ಟಿಗರ...

ಈತ ತನ್ನ ಮಡದಿಗಾಗಿ ಮಾಡಿದ ಆ ಕೆಲಸದಿಂದ ಸಾಮಾಜಿಕ ಜಾಲತಾಣಗಳಲ್ಲಿ ಅಪಾರ ಪ್ರಶಂಸೆ ಪಡೆದಿದ್ದಾನೆ. ಚೀನಾದ ಹೆಗಾಂಗ್​ನ ಪೊಲೀಸರು ಇಂತಹ ವೀಡಿಯೊಂದನ್ನು ಹಂಚಿಕೊಂಡಿದ್ದಾರೆ. ಈ ವಿಡಿಯೋ ವೀಕ್ಷಿಸಿದ ಸಾವಿರಾರು ಮಂದಿ ಅದಕ್ಕೆ ಮೆಚ್ಚುಗೆ ಸೂಚಿಸಿದ್ದಾರೆ. ಆ...

VIDEO: ಕಾನ್ಪುರದಲ್ಲಿ ನ್ಯಾಷನಲ್​ ಗಂಗಾ ಕೌನ್ಸಿಲ್​ ಮೊದಲ ಸಭೆ: ಅಟಲ್​...

ಕಾನ್ಪುರ: ಪ್ರಧಾನಿ ನರೇಂದ್ರ ಮೋದಿಯವರು ಇಂದು ಕಾನ್ಪುರಕ್ಕೆ ತೆರಳಿದ್ದು ನ್ಯಾಷನಲ್​ ಗಂಗಾ ಕೌನ್ಸಿಲ್​ನ ಮೊದಲ ಸಭೆ ನಡೆಸಿದ್ದಾರೆ. ಉತ್ತರ ಪ್ರದೇಶದ ಕಾನ್ಪುರಕ್ಕೆ ತಲುಪಿದ ಅವರನ್ನು ಅಲ್ಲಿನ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ ಅವರು ಸ್ವಾಗತಿಸಿದರು. ಬಳಿಕ...

ಮನೆಗೆಲಸದ ಯುವತಿ ಮೇಲೆ ಮೌಲ್ವಿಯಿಂದ ಅತ್ಯಾಚಾರ: ಐರನ್​ ಬಾಕ್ಸ್​ನಿಂದ ಮೈಯೆಲ್ಲ...

ಬೆಂಗಳೂರು: ಮನೆಯ ಕೆಲಸಕ್ಕಿದ್ದ ಯುವತಿಯ ಮೇಲೆ ಅತ್ಯಾಚಾರ ಎಸಗಿ, ಐರನ್​ ಬಾಕ್ಸ್​ನಿಂದ ಮೈಯೆಲ್ಲಾ ಸುಟ್ಟು ಮೌಲ್ವಿಯೊಬ್ಬ ವಿಕೃತ ಮೆರೆದಿರುವ ಆರೋಪ ರಾಜ್ಯ ರಾಜಧಾನಿಯಲ್ಲಿ ಕೇಳಿಬಂದಿದೆ. ನಗರದ ಕೋರಮಂಗಲದಲ್ಲಿ ಪೈಶಾಚಿಕ ಕೃತ್ಯ ನಡೆದಿದೆ...

ಕಾಂಗ್ರೆಸ್​ನಿಂದ ಭಾರತ್​ ಬಚಾವೋ ಬೃಹತ್​ ರ‍್ಯಾಲಿ: ಬಿಜೆಪಿ ವಿರುದ್ಧ ಹರಿಹಾಯ್ದ...

ನವದೆಹಲಿ: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಹಲವು ಕ್ರಮಗಳು ಹಾಗೂ ದೇಶದಲ್ಲಿ ಕುಸಿಯುತ್ತಿರುವ ಅರ್ಥ ವ್ಯವಸ್ಥೆ ಹಾಗೂ ಉದ್ಯೋಗಾವಕಾಶಗಳ ಬಗ್ಗೆ ಜನರಿಗೆ ತಿಳಿಸಲು ಕಾಂಗ್ರೆಸ್,​ ರಾಷ್ಟ್ರ ರಾಜಧಾನಿಯಲ್ಲಿ "ಭಾರತ್​ ಬಚಾವೋ"...