More

    ವಾರದ ಸಂತೆಗಳಿಗೆ ಹೈಟೆಕ್ ಸ್ಪರ್ಶ

    ಬೆಳಗಾವಿ: ಕುಂದಾನಗರಿಯಲ್ಲಿ ಹಲವು ದಶಕಗಳಿಂದ ವಾರದ ಸಂತೆ ಎಂದು ಖ್ಯಾತಿ ಪಡೆದಿರುವ ಖಾಸಬಾಗದ ಬಸವೇಶ್ವರ ಚೌಕ್ ಮತ್ತು ಶಹಾಪುರದ ನಾಥ್ ಪೈ ಚೌಕ್‌ವರೆಗಿನ ಪ್ರದೇಶದಲ್ಲಿ ಬೀದಿ ಬದಿ ವ್ಯಾಪಾರಿಗಳಿಗಾಗಿ ಹೈಟೆಕ್ ಮಾರುಕಟ್ಟೆ ತಲೆ ಎತ್ತಲಿದೆ.

    ನಗರದಲ್ಲಿನ ಬೀದಿ ಬದಿ ವ್ಯಾಪಾರಿಗಳಿಗೆ ಮತ್ತು ಗ್ರಾಹಕರ ಅನುಕೂಲಕ್ಕಾಗಿ ಹಾಗೂ ವಾರದ ಸಂತೆಯನ್ನು ಉಳಿಸಿ ಬೆಳಸುವ ಉದ್ದೇಶದಿಂದ ಕೇಂದ್ರ ಸರ್ಕಾರದ ಸ್ಮಾರ್ಟ್ ಸಿಟಿ ಯೋಜನೆಯಡಿ ಖಾಸಬಾಗದಿಂದ ನಾಥ ಪೈ ವೃತ್ತದವರೆಗೆ ಸುಸಜ್ಜಿತ ಮಾರುಕಟ್ಟೆ ನಿರ್ಮಾಣಗೊಳ್ಳಲಿದೆ. ಮಾರುಕಟ್ಟೆಯಲ್ಲಿ 200ಕ್ಕೂ ಅಧಿಕ ಬೀದಿ ಬದಿ ವ್ಯಾಪಾರಿಗಳು ವ್ಯಾಪಾರ ವಹಿವಾಟು ನಡೆಸಬಹುದು.

    ಈಗಾಗಲೇ ಸ್ಮಾರ್ಟ್ ಸಿಟಿ ಯೋಜನೆಯಡಿ ವಾರದ ಸಂತೆಗಳಿಗೆ ಹೈಟೆಕ್ ಸ್ಪರ್ಶ ನೀಡುವ ಉದ್ದೇಶದಿಂದ 10 ಕೋಟಿ ರೂ. ವೆಚ್ಚದ ಯೋಜನೆ ರೂಪಿಸಲಾಗಿದೆ. ಜತೆಗೆ ರಸ್ತೆ, ಚರಂಡಿಗಳನ್ನು ನಿರ್ಮಾಣ ಮಾಡಲಾಗುತ್ತಿದೆ. ಕಾಮಗಾರಿ ಸಂದರ್ಭದಲ್ಲಿ ಸಮಸ್ಯೆ ಉಂಟಾಗಬಾರದು ಎಂದು ಪಾಲಿಕೆ, ಪೊಲೀಸ್, ಜಲಮಂಡಳಿ, ಹೆಸ್ಕಾಂ ಅಧಿಕಾರಿಗಳೊಂದಿಗೆ ಸೇರಿ ಸ್ಥಳ ಪರಿಶೀಲನೆ ನಡೆಸಿ ಮಾಹಿತಿ ಸಂಗ್ರಹಿಸಿಕೊಳ್ಳಲಾಗಿದೆ ಎಂದು ಸ್ಮಾರ್ಟ್ ಸಿಟಿ ಯೋಜನೆ ಇಂಜಿನಿಯರ್‌ಗಳು ತಿಳಿಸಿದ್ದಾರೆ.

    ಬೀದಿ ಬದಿ ವ್ಯಾಪಾರಿಗಳಿಗೆ ಸುಸಜ್ಜಿತ ಮಾರುಕಟ್ಟೆ ಸೌಲಭ್ಯ ಕಲ್ಪಿಸುವ ಉದ್ದೇಶದಿಂದ ಸ್ಮಾರ್ಟ್ ಸಿಟಿ ಯೋಜನೆಯಡಿ 10 ಕೋಟಿ ರೂ. ಡಿಪಿಆರ್ ಸಿದ್ಧಪಡಿಸಲಾಗಿದ್ದು, ಶೀಘ್ರದಲ್ಲಿ ಟೆಂಡರ್ ಕರೆಯಲಾಗುವುದು. ಈಗಾಗಲೇ ನಗರ ಪೊಲೀಸರು, ಪಾಲಿಕೆ ಮತ್ತು ಸ್ಮಾರ್ಟ್ ಸಿಟಿ ಅಧಿಕಾರಿಗಳ ನೇತೃತ್ವದಲ್ಲಿ ಕಾಮಗಾರಿ ಸ್ಥಳ ಪರಿಶೀಲನೆ ನಡೆಸಲಾಗಿದೆ.
    | ಶಶಿಧರ ಕುರೇರ ಸ್ಮಾರ್ಟ್ ಸಿಟಿ, ಎಂ.ಡಿ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts