17.5 C
Bangalore
Monday, December 9, 2019

ಸಚಿವೆಯಾಗಿ ಪ್ರಮಾಣ ವಚನ ಸ್ವೀಕರಿಸಿದ ಸಂತಸದ ನಡುವೆಯೂ ಮಾನವೀಯತೆ ಮೆರೆದ ಸ್ಮೃತಿ ಇರಾನಿ!

Latest News

ಚಿದಂಬರಂಗೆ ಸಿಕ್ಕಿದ್ದು ಜಾಮೀನು, ಕ್ಲೀನ್​ಚಿಟ್ ಅಲ್ಲ!

ಚಿದಂಬರಂ ಮಾಡಿರುವ ಎಲ್ಲ ತಪ್ಪುಗಳನ್ನು ಕೊನೆಗೊಮ್ಮೆ ಕಾನೂನು ಕ್ಷಮಿಸಿಬಿಡಬಹುದೇನೋ. ಈ ದೇಶದ ಹಿಂದೂ-ಮುಸಲ್ಮಾನರು ಕ್ಷಮಿಸಲಾರರು. ಅಧಿಕಾರಕ್ಕೆ ಬಂದ ಕೆಲವೇ ವರ್ಷಗಳಲ್ಲಿ ಚಿದು ಮತ್ತವರ ಗೆಳೆಯರು...

ಕ್ಷೇತ್ರದ ಮತದಾರರ ಆಶೀರ್ವಾದ ನನಗಿದೆ: ಮತಎಣಿಕೆ ಆರಂಭದಲ್ಲೇ ಶರತ್​ ಬಚ್ಚೇಗೌಡ ವಿಶ್ವಾಸ

ಚಿಕ್ಕಬಳ್ಳಾಪುರ: ಉಪಚುನಾವಣೆಯ ಮತಎಣಿಕೆ ಪ್ರಕ್ರಿಯೆ ಆರಂಭವಾಗುತ್ತಿದ್ದಂತೆಯೇ ಮಾಧ್ಯಮಗಳಿಗೆ ಪ್ರಕ್ರಿಯಿಸಿದ ಪಕ್ಷೇತರ ಅಭ್ಯರ್ಥಿ ಶರತ್​ ಬಚ್ಚೇಗೌಡ ಕ್ಷೇತ್ರದ ಮತದಾರರ ಆಶೀರ್ವಾದ ನನಗಿದೆ ಎಂದರು. ನಮ್ಮ ತಂದೆ...

ಚಾರುಕೀರ್ತಿ ಶ್ರೀಗಳ ದೀಕ್ಷಾ ಸುವರ್ಣ ಮಹೋತ್ಸವ

ಶ್ರವಣಬೆಳಗೊಳ: ಸಾವಿರಾರು ಭಕ್ತರ ಭಕ್ತಿಭಾವ ಸಂಗಮಕ್ಕೆ ಸಾಕ್ಷಿಯಾದ ಶ್ರೀಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ಅವರ ದೀಕ್ಷಾ ಸುವರ್ಣ ಮಹೋತ್ಸವಕ್ಕೆ ಭಾನುವಾರ ಇಲ್ಲಿನ ಚಾವುಂಡರಾಯ ಸಭಾಮಂಟಪದಲ್ಲಿ ಚಾಲನೆ ದೊರೆಯಿತು. ಮುಂಜಾನೆ...

ಯಶವಂತಪುರ ಕ್ಷೇತ್ರ ಮತ ಎಣಿಕೆ ಕೇಂದ್ರದಲ್ಲಿ ವಿದ್ಯುತ್​ ಸ್ಥಗಿತ: ಎಣಿಕೆ ವಿಳಂಬ

ಬೆಂಗಳೂರು: ಯಶವಂತಪುರ ವಿಧಾನಸಭಾ ಕ್ಷೇತ್ರದ ಮತ ಎಣಿಕೆ ವೇಳೆ ವಿದ್ಯುತ್​ ಪೂರೈಕೆ ಸ್ಥಗಿತಗೊಂಡ ಹಿನ್ನೆಲೆಯಲ್ಲಿ ಮತ ಎಣಿಕೆ ವಿಳಂಬವಾಗಿದೆ. ಮೈಸೂರು ರಸ್ತೆಯ ಆರ್​​ವಿ ಎಂಜಿನಿಯರಿಂಗ್​...

ಬೈಎಲೆಕ್ಷನ್​ ರಿಸಲ್ಟ್​: ಅಂಚೆ ಮತಎಣಿಕೆಯಲ್ಲಿ ಬಿಜೆಪಿ 6, ಕಾಂಗ್ರೆಸ್​ 1 ಮತ್ತು ಜೆಡಿಎಸ್​ 1ರಲ್ಲಿ ಮುನ್ನಡೆ

ಬೆಂಗಳೂರು: ಬಿಜೆಪಿ ಸರ್ಕಾರದ ಅಳಿವು-ಉಳಿವು, ಅನರ್ಹ ಶಾಸಕರ ರಾಜಕೀಯ ಭವಿಷ್ಯ ಹಾಗೂ ಕಾಂಗ್ರೆಸ್​, ಜೆಡಿಎಸ್​ಗೆ ಪ್ರತಿಷ್ಠೆಯ ಕಣವಾಗಿರುವ 15 ಕ್ಷೇತ್ರಗಳ ಉಪಚುನಾವಣೆಯ ಮತಎಣಿಕೆ...

ನವದೆಹಲಿ: ಉತ್ತರ ಪ್ರದೇಶದ ಅಮೇಠಿಯಲ್ಲಿ ಎಐಸಿಸಿ ಅಧ್ಯಕ್ಷ ರಾಹುಲ್​ ಗಾಂಧಿ ವಿರುದ್ಧ ಸ್ಮೃತಿ ಇರಾನಿ ಭರ್ಜರಿ ಜಯ ಸಾಧಿಸಿದ್ದರು. ಅವರು ಗುರುವಾರ ಸಂಜೆ ರಾಷ್ಟ್ರಪತಿ ಭವನದಲ್ಲಿ ನಡೆದ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಕ್ಯಾಬಿನೆಟ್​ ದರ್ಜೆ ಸಚಿವೆಯಾಗಿ ಪ್ರಮಾಣ ವಚನ ಸ್ವೀಕರಿಸಿದರು. ಅವರು ಸಚಿವೆಯಾದ ಸಂಭ್ರಮದ ನಡುವೆಯೂ ತಮ್ಮ ಕರ್ತವ್ಯ ಮತ್ತು ಮಾನವೀಯ ಗುಣವನ್ನು ಮರೆಯದೆ ದೊಡ್ಡತನ ತೋರಿದ್ದಾರೆ.

ರಾಷ್ಟ್ರಪತಿ ಭವನದಲ್ಲಿ ನಡೆದ ಸಮಾರಂಭದಲ್ಲಿ ದೇಶ, ವಿದೇಶದ ಸುಮಾರು 7 ಸಾವಿರಕ್ಕೂ ಹೆಚ್ಚು ಗಣ್ಯರು ಪಾಲ್ಗೊಂಡಿದ್ದರು. ಬಾಲಿವುಡ್​ನ ಹಲವು ಸೆಲೆಬ್ರಿಟಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮೋದಿ ಪ್ರಮಾಣ ವಚನ ಸ್ವೀಕಾರಕ್ಕೆ ಸಾಕ್ಷಿಯಾದರು. ಬಾಲಿವುಡ್​ನ ಹಿರಿಯ ಗಾಯಕಿ 85 ವರ್ಷದ ಆಶಾ ಬೋಸ್ಲೆ ಅವರೂ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಕಾರ್ಯಕ್ರಮ ಮುಗಿದ ನಂತರ ಜನಜಂಗುಳಿಯ ನಡುವೆ ಅವರು ಹೊರಗೆ ತೆರಳಲಾರದೆ ಪರದಾಡುತ್ತಿದ್ದರು. ಅವರ ಸಹಾಯಕ್ಕೆ ಯಾರೂ ಬಂದಿರಲಿಲ್ಲ.

ಆದರೆ, ಸಚಿವೆಯಾಗಿ ಪ್ರಮಾಣ ವಚನ ಸ್ವೀಕರಿಸಿದ ಸಂಭ್ರಮದಲ್ಲಿದ್ದ ಸ್ಮೃತಿ ಇರಾನಿ ಅವರು ಆಶಾ ಬೋಸ್ಲೆ ಒಂಟಿಯಾಗಿ ನಿಂತಿರುವುದನ್ನು ಗಮನಿಸಿದ್ದಾರೆ. ತಕ್ಷಣ ಆಶಾಬೋಸ್ಲೆ ನೆರವಿಗೆ ಆಗಮಿಸಿದ ಸ್ಮೃತಿ ಇರಾನಿ ವಾಹನ ವ್ಯವಸ್ಥೆ ಮಾಡಿ ಅವರು ಸುರಕ್ಷಿತವಾಗಿ ಅಲ್ಲಿಂದ ತೆರಳುವಂತೆ ವ್ಯವಸ್ಥೆ ಮಾಡಿದರು.

ಈ ವಿಷಯವನ್ನು ಸ್ವತಃ ಆಶಾ ಬೋಸ್ಲೆ ಅವರು ಟ್ವೀಟ್​ ಮೂಲಕ ಹಂಚಿಕೊಂಡಿದ್ದಾರೆ. ಆಶಾ ಬೋಸ್ಲೆ ಅವರು ಟ್ವೀಟ್​ ಮಾಡುತ್ತಿದ್ದಂತೆ ನೆಟ್ಟಿಗರು ಸ್ಮೃತಿ ಇರಾನಿ ಅವರ ಮಾನವೀಯ ಗುಣವನ್ನು ಹೊಗಳುತ್ತಿದ್ದಾರೆ. ಜತೆಗೆ ಇವರು 2034 ರಲ್ಲಿ ಭಾರತದ ಪ್ರಧಾನಿಯಾಗಲಿದ್ದಾರೆ ಎಂದು ಭವಿಷ್ಯ ನುಡಿದಿದ್ದಾರೆ. (ಏಜೆನ್ಸೀಸ್​)

Stay connected

278,744FansLike
583FollowersFollow
621,000SubscribersSubscribe

ವಿಡಿಯೋ ನ್ಯೂಸ್

VIDEO: ಏರ್​ಪೋರ್ಟ್​ನಲ್ಲಿ ಬ್ಯಾಗೇಜ್​ಗಳ ಸಭ್ಯ ನಡತೆ ನೋಡಿ ಮನಸೋತ ನೆಟ್ಟಿಗರು;...

ಯಾವುದಾದರೂ ಕ್ಯೂದಲ್ಲಿ ನಿಂತರೂ ನೂಕುನುಗ್ಗಲು ಮಾಡುವ ಮನುಷ್ಯರಗಿಂತ ಈ ಬ್ಯಾಗೇಜ್​ಗಳು ಸಾವಿರ ಪಾಲು ಉತ್ತಮ ! ಅರೆ, ಇದೇನು? ಮನುಷ್ಯರಿಗೂ, ಬ್ಯಾಗೇಜ್​ಗಳಿಗೂ ಎಲ್ಲಿಯ ಹೋಲಿಕೆ ಎನ್ನುತ್ತೀರಾ? ಹಾಗಾದರೆ ಈ ಸುದ್ದಿ ಓದಿ, ವಿಡಿಯೋ ನೋಡಿದರೆ...

VIDEO| ಕೇಸ್ರಿಕ್ ವಿರುದ್ಧ ಸೇಡು ತೀರಿಸಿಕೊಂಡ ಕೊಹ್ಲಿ!

ಹೈದರಾಬಾದ್: ಮೊದಲ ಟಿ20 ಪಂದ್ಯದಲ್ಲಿ ಭರ್ಜರಿ ಬ್ಯಾಟಿಂಗ್ ಮೂಲಕ ಭಾರತ ತಂಡವನ್ನು ಗೆಲ್ಲಿಸಿದ ನಾಯಕ ವಿರಾಟ್ ಕೊಹ್ಲಿ, ಹಳೆಯ ಲೆಕ್ಕವೊಂದನ್ನೂ ಚುಕ್ತಾ ಮಾಡಿದರು. ಭಾರತದ ಚೇಸಿಂಗ್ ವೇಳೆ ಇನಿಂಗ್ಸ್​ನ 16ನೇ...

VIDEO| ವಿಚಾರಣೆಗೆಂದು ನ್ಯಾಯಾಲಯಕ್ಕೆ ಕರೆತಂದಿದ್ದ ಅತ್ಯಾಚಾರ ಆರೋಪಿಯ ಮೇಲೆ ಮುಗಿಬಿದ್ದ...

ಇಂದೋರ್​: ಅಪ್ರಾಪ್ತೆ ಮೇಲಿನ ಅತ್ಯಾಚಾರ ಪ್ರಕರಣದ ಆರೋಪಿ ಮೇಲೆ ನ್ಯಾಯಾಲಯದ ಆವರಣದಲ್ಲೇ ವಕೀಲರ ಗುಂಪು ಹಲ್ಲೆ ನಡೆಸಲು ಯತ್ನಿಸಿರುವ ಘಟನೆ ಮಧ್ಯಪ್ರದೇಶದ ಇಂದೋರ್​ನಲ್ಲಿ ಶನಿವಾರ ನಡೆದಿದೆ. ಘಟನೆಗೆ ಸಂಬಂಧಿಸಿದ ವಿಡಿಯೋ ಸಾಮಾಜಿಕ...

ಸಶಸ್ತ್ರ ಪಡೆಗಳ ಧ್ವಜ ದಿನ; ಭೂ, ವಾಯು, ನೌಕಾ ಪಡೆಗಳ...

ನವದೆಹಲಿ: ಸಶಸ್ತ್ರ ಪಡೆಗಳ ಧ್ವಜ ದಿನವಾದ ಇಂದು ಪ್ರಧಾನಿ ನರೇಂದ್ರ ಮೋದಿಯವರು ಭೂ, ವಾಯು ಹಾಗೂ ನೌಕಾಪಡೆಗಳ ಸಿಬ್ಬಂದಿಗೆ ಶುಭಾಶಯ ತಿಳಿಸಿದರು. ಟ್ವೀಟ್​ ಮೂಲಕ ಶುಭ ಹಾರೈಸಿದ ಅವರು, ಸಶಸ್ತ್ರ ಪಡೆಗಳ ಧ್ವಜ ದಿನಾಚರಣೆಯ...

ಇಂದಿನ ಬಿಗ್​ಬಾಸ್ ಕನ್ನಡ ​ಶೋನಲ್ಲಿ ಕಿಚ್ಚ ಸುದೀಪ್​ ಜತೆ ಇರಲಿದ್ದಾರೆ...

ಬೆಂಗಳೂರು: ಇಂದು ಬಿಗ್​ಬಾಸ್​ನ ವಾರದ ಕತೆ ಕಿಚ್ಚ ಸುದೀಪ್​ ಜತೆ ಎಪಿಸೋಡ್​ನಲ್ಲಿ ಬಾಲಿವುಡ್​ ನಟ ಸಲ್ಮಾನ್​ ಖಾನ್​ ಕೂಡ ಜತೆಯಾಗಲಿದ್ದಾರೆ !ಇದು ಕಿರುತೆರೆ ಇತಿಹಾಸದಲ್ಲಿಯೇ ಪ್ರಥಮ ಎನ್ನಲಾಗಿದ್ದು ಸದ್ಯ ಕಲರ್ಸ್​ ಕನ್ನಡ ಬಿಡುಗಡೆ...

VIDEO| ಎಕ್ಸ್​ಪ್ರೆಸ್​ ರೈಲಿಗೆ ಸಿಲುಕುತ್ತಿದ್ದ ವ್ಯಕ್ತಿಯ ಜೀವ ಉಳಿಸಿದ ಯೋಧ:...

ಥಾಣೆ: ರೈಲ್ವೆ ರಕ್ಷಣಾ ಪಡೆಯ ಯೋಧರೊಬ್ಬರು ಎಕ್ಸ್​ಪ್ರೆಸ್​ ರೈಲಿಗೆ ಸಿಲುಕುತ್ತಿದ್ದ ವ್ಯಕ್ತಿಯೊಬ್ಬನನ್ನು ರಕ್ಷಣೆ ಮಾಡುವ ಮೂಲಕ ಸಮಯಪ್ರಜ್ಞೆ ಮರೆದಿರುವ ಘಟನೆ ಮಹಾರಾಷ್ಟ್ರದ ಥಾಣೆ ರೈಲ್ವೆ ನಿಲ್ದಾಣದಲ್ಲಿ ಬುಧವಾರ ನಡೆದಿದ್ದು, ಇದಕ್ಕೆ...