More

    ಅಮೇಥಿಯಲ್ಲಿ ಮತ್ತೆ ಸ್ಮೃತಿ-ರಾಹುಲ್ ಹಣಾಹಣಿ? ರಾಯ್ ಬರೇಲಿಯಿಂದ ಪ್ರಿಯಾಂಕಾ ಸ್ಪರ್ಧೆ!

    ನವದೆಹಲಿ: ರಾಯ್‌ಬರೇಲಿ ಮತ್ತು ಅಮೇಥಿ ಕ್ಷೇತ್ರಗಳಿಂದ ಕಾಂಗ್ರೆಸ್‌ ಪಕ್ಷವು ಕ್ರಮವಾಗಿ ಪ್ರಿಯಾಂಕಾ ವಾದ್ರಾ ಮತ್ತು ರಾಹುಲ್‌ ಗಾಂಧಿ ಅವರನ್ನು ಕಣಕ್ಕಿಳಿಸುವ ಸಾಧ್ಯತೆಯಿದೆ.

    ಇದನ್ನೂ ಓದಿ: ಜೆಇಇ ಮೇನ್‌ ಫಲಿತಾಂಶ ಪ್ರಕಟ..56 ಅಭ್ಯರ್ಥಿಗಳಿಗೆ ಶೇ.100 ಅಂಕ!

    ರಾಹುಲ್ ಗಾಂಧಿ ಸ್ಪರ್ಧಿಸುತ್ತಿರುವ ವಯನಾಡಿನಲ್ಲಿ ಚುನಾವಣೆ ನಡೆಯಲಿರುವುದರಿಂದ ಅಲ್ಲಿನ ಮತದಾರರಿಗೆ ತಪ್ಪು ಸಂದೇಶ ರವಾನೆಯಾಗಬಾರದೆಂಬ ಕಾರಣಕ್ಕಾಗಿ ಕಾಂಗ್ರೆಸ್​ ಈ ವಿಷಯವನ್ನು ಬಹಿರಂಗಪಡಿಸಿಲ್ಲ. ಏಪ್ರಿಲ್ 26ರ ನಂತರ ಅಂತಿಮ ನಿರ್ಧಾರ ಹೊರಬೀಳಲಿದ್ದು, ಮುಂದಿನ ವಾರ ನಾಮಪತ್ರ ಸಲ್ಲಿಸಬಹುದು ಎಂದು ಮೂಲಗಳು ತಿಳಿಸಿವೆ.

    ಅಮೇಥಿಯಲ್ಲಿ ಬಿಜೆಪಿಯಿಂದ ಸ್ಪರ್ಧಿಸಿದ್ದ ಸ್ಮೃತಿ ಇರಾನಿ ಅವರು 2019 ರ ಲೋಕಸಭೆ ಚುನಾವಣೆಯಲ್ಲಿ ರಾಹುಲ್ ಗಾಂಧಿಯನ್ನು ಸೋಲಿಸಿದ್ದರು. ಇರಾನಿ ಅವರನ್ನು ಬಿಜೆಪಿ ಮತ್ತೆ ಇದೇ ಕ್ಷೇತ್ರದಿಂದ ಕಣಕ್ಕಿಳಿಸಿದೆ. ಉತ್ತರ ಪ್ರದೇಶದಲ್ಲಿ ಸಮಾಜವಾದಿ ಪಕ್ಷ ಮತ್ತು ಕಾಂಗ್ರೆಸ್ ನಡುವಿನ ಸೀಟು ಒಪ್ಪಂದದ ಪ್ರಕಾರ, ಕಾಂಗ್ರೆಸ್ 17 ಮತ್ತು ಸಮಾಜವಾದಿ ಪಕ್ಷವು ಉಳಿದ 63 ಸ್ಥಾನಗಳಲ್ಲಿ ಸ್ಪರ್ಧಿಸಲಿದೆ. ಇದೇ ಹಿನ್ನೆಲೆಯಲ್ಲಿ ಕಾಂಗ್ರೆಸ್ ತನ್ನ ಸಾಂಪ್ರದಾಯಿಕ ಭದ್ರಕೋಟೆಗಳಾದ ರಾಯ್ ಬರೇಲಿ ಮತ್ತು ಅಮೇಥಿಯ ಹೊರತಾಗಿ ವಾರಣಾಸಿ, ಘಾಜಿಯಾಬಾದ್ ಮತ್ತು ಕಾನ್ಪುರದಲ್ಲೂ ಸ್ಪರ್ಧಿಸುತ್ತಿದೆ. ಇದಕ್ಕೂ ಮುನ್ನ ಅಮೇಥಿಯ ಗೌರಿಗಂಜ್ ಪ್ರದೇಶದಲ್ಲಿ ಬುಧವಾರ ಪಕ್ಷದ ಕಚೇರಿಯ ಹೊರಗೆ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರ ಪತಿ ರಾಬರ್ಟ್ ವಾದ್ರಾ ಅವರನ್ನು ಒಳಗೊಂಡ ಪೋಸ್ಟರ್‌ಗಳು ಕಾಣಿಸಿಕೊಂಡಿದ್ದವು.

    ಇದು ವಾದ್ರಾಗೆ ಟಿಕೆಟ್‌ ಸಾಧ್ಯತೆಯ ಊಹಾಪೋಹಗಳಿಗೆ ಎಡೆಮಾಡಿಕೊಟ್ಟಿತ್ತು. ಆದಾಗ್ಯೂ, ಕಾಂಗ್ರೆಸ್ ತಾನು ಸ್ಪರ್ಧಿಸುವ ಪ್ರತಿಯೊಂದು ಸ್ಥಾನಕ್ಕೂ ಹೋರಾಟವನ್ನು ನಡೆಸಲು ಬಯಸುತ್ತಿರುವಂತೆ ತೋರುತ್ತಿದೆ. ಹೀಗಾಗಿ ರಾಹುಲ್​ ಗಾಂಧಿ, ಪ್ರಿಯಾಂಕಾ ವಾದ್ರಾರನ್ನು ಕಣಕ್ಕಿಳಿಸಲು ನಿರ್ಧರಿಸಿದೆ. ಅಮೇಥಿ ಮತ್ತು ರಾಯ್ ಬರೇಲಿ ಲೋಕಸಭಾ ಕ್ಷೇತ್ರಗಳಲ್ಲಿ ಮೇ 20 ರಂದು ಐದನೇ ಹಂತದ ಚುನಾವಣೆ ನಡೆಯಲಿದೆ.

    ಇನ್ನು ಕೇಂದ್ರ ಸಚಿವೆ ಸ್ಮೃತಿ ಇರಾನಿ ಅವರು ಕ್ಷೇತ್ರದಲ್ಲಿ ವ್ಯಾಪಕ ಪ್ರಚಾರ ನಡೆಸುತ್ತಿರುವುದರಿಂದ ರಾಹುಲ್ ಗಾಂಧಿ ತಮ್ಮ ಪಕ್ಷದ ಈ ಹಿಂದಿನ ಭದ್ರಕೋಟೆಗೆ ಲಗ್ಗೆ ಹಾಕುವುದು ಅಷ್ಟು ಸುಲಭವಲ್ಲ. ಏಪ್ರಿಲ್ 8 ರಂದು ಕೇಂದ್ರ ಸಚಿವೆ ಅಮೇಥಿಗೆ ರಾಹುಲ್ ನಿಷ್ಠೆಯನ್ನು ಪ್ರಶ್ನಿಸಿದ್ದರು.

    ಅಮೇಥಿಯಿಂದ ಚುನಾವಣೆಗೆ ಸ್ಪರ್ಧಿಸಲು ಗಾಂಧಿ ಕುಟುಂಬ ಬರಲಿದೆ ಎಂಬುದು ಬಿಜೆಪಿ ಕಾರ್ಯಕರ್ತರಿಗೆ ಗೊತ್ತಿದೆ.

    ವಯನಾಡಿನ ಜನರು ಹೆಚ್ಚು ನಿಷ್ಠಾವಂತರು ಎಂದು ರಾಹುಲ್​ ಹೇಳಿದ್ದು, ಹಾಗಾದರೆ ಅಮೇಥಿಯ ನಿಷ್ಠೆಯ ಬಗ್ಗೆ ಏನು ಎಂದು ಅವರು ಸುದ್ದಿಗೋಷ್ಠಿಯಲ್ಲಿ ಪ್ರಶ್ನಿಸಿದ್ದಾರೆ.

    ರಾಯ್ ಬರೇಲಿ 1960 ರಿಂದ ಕಾಂಗ್ರೆಸ್ ಭದ್ರಕೋಟೆಯಾಗಿದ್ದು, ಫಿರೋಜ್ ಗಾಂಧಿ ಮತ್ತು ಇಂದಿರಾ ಗಾಂಧಿ ಇಬ್ಬರೂ ಇದನ್ನು ಪ್ರತಿನಿಧಿಸಿದ್ದಾರೆ. ಸೋನಿಯಾ ಗಾಂಧಿ ಅವರು 2006 ರ ಉಪಚುನಾವಣೆಯಲ್ಲಿ ಗೆದ್ದಿದ್ದರು. ಆದರೆ ಸೋನಿಯಾ ಮೇಲ್ಮನೆಗೆ ತೆರಳುವುದರೊಂದಿಗೆ, ಕಾಂಗ್ರೆಸ್ ಪಕ್ಷದ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ವಾದ್ರಾ ಅವರನ್ನು ಕಣಕ್ಕಿಳಿಸುವ ಸಾಧ್ಯತೆಯಿದೆ ಎಂಬ ಮಾತುಗಳು ಕೈ ಪಾಳಯದಲ್ಲಿ ಕೇಳಿ ಬರುತ್ತಿವೆ.

    ಜಾರ್ಖಂಡ್​ನಲ್ಲಿ ಹಕ್ಕಿಜ್ವರ…ಸಹಸ್ರಾರು ಕೋಳಿ, ಮೊಟ್ಟೆ ನಾಶ!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts