ಜಿಲ್ಲೆಯಲ್ಲಿ ಲಾಕ್​ಡೌನ್​ ಇದೆ ಎಂದು ಬೇರೆ ಜಿಲ್ಲೆಯಿಂದ ಅಕ್ರಮವಾಗಿ ಮದ್ಯ ಸಾಗಾಣಿಕೆ! ಸಿಕ್ಕಿಬಿದ್ದ ಕಳ್ಳರು

ಯಾದಗಿರಿ: ಕರೊನಾ ಹಿನ್ನೆಲೆಯಲ್ಲಿ ಆಯಾ ಜಿಲ್ಲೆಗಳು ಸೋಂಕು ನಿಯಂತ್ರಣಕ್ಕೆ ಕಠಿಣ ಕ್ರಮ ತೆಗೆದುಕೊಂಡಿವೆ. ಅನೇಕ ಜಿಲ್ಲೆಗಳು ಮದ್ಯ ಮಾರಾಟಕ್ಕೂ ಬ್ರೇಕ್​ ಹಾಕಿವೆ. ಆ ಹಿನ್ನೆಲೆಯಲ್ಲಿ ಕೆಲವರು ಬೇರೆ ಬೇರೆ ಜಿಲ್ಲೆಗಳಿಂದ ಅಕ್ರಮವಾಗಿ ಮದ್ಯ ಸಾಗಾಟ ಮಾಡಿ ಮಾರಾಟ ಮಾಡುವ ಪ್ರಯತ್ನವನ್ನೂ ಮಾಡಲಾರಂಭಿಸಿದ್ದಾರೆ. ಯಾದಗಿರಿ ಜಿಲ್ಲೆಯ ಹುಣಸಗಿ ತಾಲೂಕಿನ ನಾರಾಯಣಪುರ ಚೆಕ್ ಪೊಸ್ಟ್ ಬಳಿ ಇದೇ ರೀತಿ ಅಕ್ರಮವಾಗಿ ಮದ್ಯ ಸಾಗಾಟ ಮಾಡುತ್ತಿದ್ದ ಗ್ಯಾಂಗ್​ ಒಂದನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ರಾಯಚೂರು ಹಾಗೂ ಯಾದಗಿರಿ ಜಿಲ್ಲೆಯಲ್ಲಿ ಕಟ್ಟುನಿಟ್ಟಿನ ಲಾಕ್​ಡೌನ್ … Continue reading ಜಿಲ್ಲೆಯಲ್ಲಿ ಲಾಕ್​ಡೌನ್​ ಇದೆ ಎಂದು ಬೇರೆ ಜಿಲ್ಲೆಯಿಂದ ಅಕ್ರಮವಾಗಿ ಮದ್ಯ ಸಾಗಾಣಿಕೆ! ಸಿಕ್ಕಿಬಿದ್ದ ಕಳ್ಳರು