ಮಹಿಳಾ ಕಾಲೇಜಿನ ಟಾಯ್ಲೆಟ್​ ಒಳಗೆ ವಿಷಕಾರಿ ಹಾವುಗಳ ರಾಶಿ! ಸಿಡಿದೆದ್ದ ನಟ, ಸಂಗೀತ ನಿರ್ದೇಶಕ ಜಿವಿ ಪ್ರಕಾಶ್​

GV Prakash

ಚೆನ್ನೈ: ತಮಿಳುನಾಡಿನ ಮಹಿಳಾ ಕಾಲೇಜೊಂದರ ದುರಾಡಳಿತಕ್ಕೆ ಸಂಬಂಧಿಸಿದ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿದ್ದು, ನೆಟ್ಟಿಗರ ಕೆಂಗಣ್ಣಿಗೆ ಗುರಿಯಾಗಿದೆ. ವಿಡಿಯೋದಲ್ಲಿ ತಿರುವಣ್ಣಾಮಲೈ ಮಹಿಳಾ ಸರ್ಕಾರಿ ಕಾಲೇಜಿನ ಶೌಚಾಲಯದಲ್ಲಿ ವಿಷಕಾರಿ ಹಾವುಗಳ ರಾಶಿಯೇ ಕಾಣಿಸಿಕೊಂಡಿದೆ.

ವಿಡಿಯೋ ಗಮನಕ್ಕೆ ಬರುತ್ತಿದ್ದಂತೆ ಖ್ಯಾತ ಸಂಗೀತ ನಿರ್ದೇಶಕ ಹಾಗೂ ನಟ ಜಿ.ವಿ.ಪ್ರಕಾಶ್ ಕುಮಾರ್ ಸುದ್ದಿಯನ್ನು ಹಂಚಿಕೊಂಡು ಅಧಿಕಾರಿಗಳ ಮೇಲೆ ಟೀಕಾ ಪ್ರಹಾರ ನಡೆಸಿದ್ದಾರೆ. ಮಹಿಳಾ ಶಿಕ್ಷಣಕ್ಕೆ ಯಾವುದೇ ಅಡ್ಡಿ ಇರಬಾರದು ಎಂಬ ಮಾತಿದೆ. ಆದರೆ, ಇಲ್ಲಿನ ವ್ಯವಸ್ಥೆ ಕೊಳೆತು ನಾರುತ್ತಿದೆ. ಸರಿಯಾಗಿ ತಮ್ಮ ಜವಾಬ್ದಾರಿ ನಿರ್ವಹಿಸದವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಸರ್ಕಾರಕ್ಕೆ ಆಗ್ರಹಿಸಿದ್ದಾರೆ.

ಅಂದಹಾಗೆ ವೈರಲ್​ ವಿಡಿಯೋ ತಿರುವಣ್ಣಾಮಲೈನಲ್ಲಿರುವ ಕಿರ್ಗಾರ್ ಅಣ್ಣಾ ಸರ್ಕಾರ್ ಕಾಲೇಜಿಗೆ ಸಂಬಂಧಿಸಿದೆ. ಈ ಕಾಲೇಜಿನಲ್ಲಿ ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿನಿಯರು ಓದುತ್ತಿದ್ದು, ಹಾವುಗಳ ರಾಶಿ ಕಂಡ ಬಳಿಕ ವಿದ್ಯಾರ್ಥಿನಿಯರ ಸುರಕ್ಷತೆಯ ಪ್ರಶ್ನೆ ಎದ್ದಿದೆ.

ಶೌಚಾಲಯಗಳನ್ನು ಶುಚಿಗೊಳಿಸಿ ತಿಂಗಳುಗಳೇ ಕಳೆದಿದೆ. ಕಾಲೇಜಿನ ಸುತ್ತ ಅರಣ್ಯ ಪ್ರದೇಶವಿದ್ದು, ವಿಷಕಾರಿ ಹಾವುಗಳು ಸೇರಿದಂತೆ ಇನ್ನಿತರ ಜೀವಿಗಳ ತೊಂದರೆ ಇದೆ ಎಂದು ವಿದ್ಯಾರ್ಥಿನಿಯರು ಆತಂಕ ಹೊರಹಾಕಿದ್ದಾರೆ. ಇದೇ ವೇಳೆ ಯಾರಿಗಾದರೂ ಹಾವು ಕಚ್ಚಿದೆಯೇ ಎಂಬುದು ಸ್ಪಷ್ಟವಾಗಿಲ್ಲ. ಕೂಡಲೇ ಕ್ರಮಕೈಗೊಳ್ಳಬೇಕು ಎಂದು ವಿದ್ಯಾರ್ಥಿನಿಯರು ಆಗ್ರಹಿಸಿದ್ದಾರೆ. ಶೌಚಾಲಯಗಳನ್ನು ಸ್ವಚ್ಛಗೊಳಿಸಿ ಕನಿಷ್ಠ ನಿರ್ವಹಣೆ ಮಾಡುವಂತೆ ಮನವಿ ಮಾಡಿದ್ದಾರೆ.

ಇನ್ನು ಟಾಯ್ಲೆಟ್​ನಲ್ಲಿ ಹಾವುಗಳ ರಾಶಿಯೇ ಇರುವ ವಿಡಿಯೋ ವೈರಲ್​ ಆದ ಬೆನ್ನಲ್ಲೇ ತಮಿಳುನಾಡಿನ ಸ್ಟಾಲಿನ್ ಸರ್ಕಾರದ ದುರಾಡಳಿತದ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಭಾರಿ ಟೀಕೆ ವ್ಯಕ್ತವಾಗುತ್ತಿದೆ. (ಏಜೆನ್ಸೀಸ್​)

ನಿಮ್ಮ ಅಂಗೈನಲ್ಲಿ M ಚಿಹ್ನೆ ಇದೆಯಾ ನೋಡಿ… ಇದರ ಅರ್ಥ ತಿಳಿದ್ರೆ ನಿಮ್ಮ ಹುಬ್ಬೇರೋದು ಖಚಿತ!

ಹಾವು ರಕ್ಷಿಸುವ ಹಾಟ್​ ಬ್ಯೂಟಿ: ಈಕೆಯ ಸೌಂದರ್ಯಕ್ಕೆ ಮಾತ್ರವಲ್ಲ ಧೈರ್ಯಕ್ಕೂ ನೆಟ್ಟಿಗರು ಫಿದಾ!

Share This Article

ಸುಖವಾದ ನಿದ್ದೆ ಬೇಕೆಂದರೆ ಯೋಗದ ಮೊರೆಹೋಗಿ

ಪ್ರ:ಸರಿಯಾಗಿ ನಿದ್ರೆ ಬರುವುದಿಲ್ಲ. ರಾತ್ರಿ 2-3 ತಾಸು ನಿದ್ರೆ ಬಂದರೆ ಹೆಚ್ಚು. ಸುಖನಿದ್ರೆಗಾಗಿ ಯಾವ ಯೋಗ…

ಪುರುಷರೇ ಎಡಗೈ, ಮಹಿಳೆಯರ ಬಲ ಅಂಗೈ ತುರಿಕೆಯಾದ್ರೆ ಕಾದಿದೆ ಈ ಗಂಡಾಂತರ!

ಬೆಂಗಳೂರು: ಅಂಗೈ ತುರಿಕೆಯಾಗಿದೆ ಎಂದರೆ ಹಣ ಬರುತ್ತದೆ ಎಂದು ಹಲವರು ಹೇಳುತ್ತಾರೆ. ಕೆಲವರು ಹಣ ಕಳೆದುಕೊಳ್ಳುತ್ತಿದ್ದಾರೆ…

ಈ ದಿನಾಂಕದಂದು ಜನಿಸಿದವರು ಜೀವನದಲ್ಲಿ ರಾಜರಂತೆ ಬದುಕುತ್ತಾರೆ… ನೀವೂ ಇದೇ ದಿನ ಹುಟ್ಟಿದ್ದೀರಾ ನೋಡಿ!

ಜ್ಯೋತಿಷ್ಯಶಾಸ್ತ್ರದಲ್ಲಿ ಸಂಖ್ಯಾಶಾಸ್ತ್ರವೂ ಒಂದು. ಇದರ ಪ್ರಕಾರ ವ್ಯಕ್ತಿಯ ಜನ್ಮ ದಿನಾಂಕವು ಅವನ ವ್ಯಕ್ತಿತ್ವದ ಬಗ್ಗೆ ಮತ್ತು…