More

    ಸಾಮಾಜಿಕ ಅಂತರ ಪಾಲಿಸುವುದು ಅತ್ಯಗತ್ಯ

    ರಾಯಬಾಗ: ವೈಯಕ್ತಿಕ ಮತ್ತು ಕುಟುಂಬದ ಆರೋಗ್ಯದ ಹಿತದೃಷ್ಟಿಯಿಂದ ಲಾಕ್‌ಡೌನ್ ಆದೇಶವನ್ನು ಪ್ರತಿಯೊಬ್ಬರೂ ಕಡ್ಡಾಯವಾಗಿ ಪಾಲಿಸಬೇಕು ಎಂದು ಶಾಸಕ ಡಿ.ಎಂ.ಐಹೊಳೆ ಹೇಳಿದ್ದಾರೆ.

    ಭಾನುವಾರ ಸ್ಥಳೀಯ ಪಪಂ ಬಳಿ ಜೊಲ್ಲೆ ಉದ್ಯೋಗ ಸಮೂಹ ಸಂಸ್ಥೆ ಯಕ್ಸಂಬಾ ಹಾಗೂ ಪಪಂ ರಾಯಬಾಗ ಸಹಯೋಗದಲ್ಲಿ ಸ್ಥಾಪಿಸಿರುವ ಕರೊನಾ ಸೋಂಕು ನಿಯಂತ್ರಣ ದ್ರಾವಣ ಸಿಂಪಡಣಾ ಸುರಂಗ ಮಾರ್ಗಕ್ಕೆ ಚಾಲನೆ ನೀಡಿ ಮಾತನಾಡಿದರು.

    ಅನಗತ್ಯವಾಗಿ ಯಾರೂ ಮನೆಯಿಂದ ಹೊರಗೆ ಬರಬಾರದು. ಅಗತ್ಯ ವಸ್ತುಗಳನ್ನು ಖರೀದಿಸುವಾಗ ಸಾಮಾಜಿಕ ಅಂತರ ಕಾಪಾಡಬೇಕು. ಸಮೀಕ್ಷೆಗೆ ಬರುವ ಅಂಗನವಾಡಿ ಮತ್ತು ಆಶಾ ಕಾರ್ಯಕರ್ತೆಯರಿಗೆ ಸಮರ್ಪಕ ಮಾಹಿತಿ ನೀಡಬೇಕು ಎಂದರು. ಜೊಲ್ಲೆ ಉದ್ಯೋಗ ಸಮೂಹದ ಬಸವಪ್ರಸಾದ ಜೊಲ್ಲೆ ಮಾತನಾಡಿ, ಕರೊನಾ ಸೋಂಕು ನಿಯಂತ್ರಿಸಲು ವೈದ್ಯರು, ಪೊಲೀಸರು, ಪೌರ ಕಾರ್ಮಿಕರು, ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರು ಹಗಲಿರುಳು ಶ್ರಮಿಸುತ್ತಿದ್ದಾರೆ. ಅವರಿಗೆ ಎಲ್ಲರೂ ಸಾಥ್ ನೀಡಬೇಕು ಎಂದು ಕೋರಿದರು. ತಹಸೀಲ್ದಾರ್ ಚಂದ್ರಕಾಂತ ಭಜಂತ್ರಿ, ಪಿಎಸ್‌ಐ ಗಜಾನನ ನಾಯಿಕ, ಪಪಂ ಮುಖ್ಯಾಧಿಕಾರಿ ಎಸ್.ಆರ್.ಮಾಂಗ, ನ್ಯಾಯವಾದಿ
    ಎಲ್.ಬಿ.ಚೌಗುಲೆ, ಸದಾನಂದ ಹಳಿಂಗಳಿ, ರಾಜು ದೇಶಪಾಂಡೆ, ಅಜ್ಜಪ್ಪ ಕುಲಗುಡೆ, ಚಂದ್ರು ಬುರುಡ ಇತರರು ಉಪಸ್ಥಿತರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts