20.4 C
Bangalore
Monday, December 9, 2019

ಜನಮನದ ಚೇತನ ಭಕ್ತ ಕನಕದಾಸ

Latest News

ಬೈಎಲೆಕ್ಷನ್ ರಿಸಲ್ಟ್| ಹಿರೇಕೆರೂರು ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿಯ ಬಿ ಸಿ ಪಾಟೀಲ್ ಮುನ್ನಡೆ

ಹಾವೇರಿ: ಕುತೂಹಲ ಕೆರಳಿಸಿರುವ ಕರ್ನಾಟಕ ಅಸೆಂಬ್ಲಿಯ ಬೈ ಎಲೆಕ್ಷನ್​ನ ಮತ ಎಣಿಕೆ ನಡೆಯುತ್ತಿದ್ದು, ಮೊದಲ ಎರಡು ಸುತ್ತಿನ ಮತ ಎಣಿಕೆಯಲ್ಲಿ ಬಿಜೆಪಿಯ ಅಭ್ಯರ್ಥಿ...

ಬೈಎಲೆಕ್ಷನ್​ ರಿಸಲ್ಟ್​| ಮೊದಲ ಸುತ್ತಿನ ಮತಎಣಿಕೆ ಮುಕ್ತಾಯ: ಕೆ.ಆರ್​.ಪೇಟೆಯಲ್ಲಿ ಜೆಡಿಎಸ್​, ಹುಣಸೂರಿನಲ್ಲಿ ಕಾಂಗ್ರೆಸ್​ ಮುನ್ನಡೆ

ಹುಣಸೂರು/ಕೆ.ಆರ್​ಪೇಟೆ: ಕೆ.ಆರ್​.ಪೇಟೆ ಕ್ಷೇತ್ರದ ಉಪಚುನಾವಣೆಯ ಅಂಚೆ ಮತಎಣಿಕೆಯಲ್ಲಿ ಮುಂದಿದ್ದ ಬಿಜೆಪಿ ಅಭ್ಯರ್ಥಿ ನಾರಾಯಣಗೌಡ ಮೊದಲ ಸುತ್ತಿನ ಮತಎಣಿಕೆಯಲ್ಲಿ ಹಿಂದೆ ಉಳಿದಿದ್ದು, ಜೆಡಿಎಸ್​ ಅಭ್ಯರ್ಥಿ...

ಬೈಎಲೆಕ್ಷನ್​ ರಿಸಲ್ಟ್​| ಚಿಕ್ಕಬಳ್ಳಾಪುರದಲ್ಲಿ 31 ಅಂಚೆಮತದಲ್ಲಿ 27 ಸ್ವೀಕೃತ, ಬಿಜೆಪಿ ಅಭ್ಯರ್ಥಿ ಸುಧಾಕರ್​ ಮುನ್ನಡೆ

ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ಕ್ಷೇತ್ರದಲ್ಲಿ ನಡೆದ ಅಂಚೆ ಮತಎಣಿಕೆಯಲ್ಲಿ ಚಲಾವಣೆಯಾದ ಒಟ್ಟು 31 ಅಂಚೆಮತದಲ್ಲಿ 27 ಸ್ವೀಕೃತವಾಗಿವೆ. ಅಂಚೆ ಮತೆಣಿಕೆಯಲ್ಲಿ ಬಿಜೆಪಿ ಅಭ್ಯರ್ಥಿ ಕೆ.ಸುಧಾಕರ್​...

ಕಾಗವಾಡ, ಅಥಣಿಯಲ್ಲಿ ಬಿಜೆಪಿ ಅಭ್ಯರ್ಥಿಗಳ ಮುನ್ನಡೆ

ಬೆಳಗಾವಿ: ಕಾಗವಾಡದಲ್ಲಿ ಬಿಜೆಪಿ ಅಭ್ಯರ್ಥಿ ಶ್ರೀಮಂತ ಪಾಟೀಲ ಮೊದಲ ಸುತ್ತಿನ ಎಣಿಕೆಯಲ್ಲಿ ಮುಂದಿದ್ದಾರೆ. ಅಂಚೆಮತಗಳ ಎಣಿಕೆಯಲ್ಲೂ ಮುಂದಿದ್ದ ಅವರು ನಂತರ ಮೊದಲ ಸುತ್ತಿನಲ್ಲೂ...

ಮೊದಲ ಹಂತದ ಮತ ಎಣಿಕೆ ಶಿವರಾಮ ಹೆಬ್ಬಾರಗೆ 5004 ಮತ ಮುನ್ನಡೆ

ಕಾರವಾರ: ಕುತೂಹಲ ಕೆರಳಿಸಿರುವ ವಿಧಾನಸಭೆಯ 15 ಕ್ಷೇತ್ರಗಳ ಉಪಚುನಾವಣೆಯ ಪೈಕಿ ಯಲ್ಲಾಪುರ ಕ್ಷೇತ್ರದ ಮತ ಎಣಿಕೆ ಆರಂಭವಾಗಿದೆ. ಮೊದಲ ಹಂತದ ಮತ ಎಣಿಕೆಯಲ್ಲಿ...

ಚಿಕ್ಕಮಗಳೂರು: ಕನಕದಾಸರು ಕೀರ್ತನೆಗಳ ಮೂಲಕ ಮನುಷ್ಯರ ಮನಸ್ಸಿನಲ್ಲಿದ್ದ ಅಂಧಕಾರ ತೊಲಗಿಸಲು ಕೈಗೊಂಡ ಕಾರ್ಯ ಅವಿಸ್ಮರಣೀಯ ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕಿ ಮಂಜುಳಾ ಹುಲ್ಲಳ್ಳಿ ಹೇಳಿದರು.

ಜಿಲ್ಲಾಧಿಕಾರಿ ಕಚೆೇರಿ ಸಭಾಂಗಣದಲ್ಲಿ ಜಿಲ್ಲಾಡಳಿತ ಮತ್ತು ಕನ್ನಡ ಸಂಸ್ಕೃತಿ ಇಲಾಖೆಯಿಂದ ಶುಕ್ರವಾರ ಆಯೋಜಿಸಿದ್ದ ಕನಕದಾಸ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದರು.

ಕನಕದಾಸರು ಕವಿಯಾಗುವ ಮುನ್ನ ಅಪ್ರತಿಮ ಯೋಧನಾಗಿದ್ದರು. ವ್ಯಾಸರಾಯರ ಶಿಷ್ಯನಾಗಿ ಅವರ ವಿಚಾರಧಾರೆಗಳನ್ನು ಅರಿತುಕೊಂಡು ಸಾಮಾಜಿಕ ನ್ಯಾಯ, ಜಾತಿ, ವರ್ಗ, ಕುಲ ಮುಂತಾದವು ಅವರ ಕಣ್ತೆರೆಸಿ ಜ್ಞಾನದ ಅರಿವು ಹೆಚ್ಚಿಸಿತು ಎಂದರು.

ಇವರ ಕೀರ್ತನೆಗಳು ಭಕ್ತಿ, ದೇವರು ಮತ್ತು ಸಮಾಜ ಎಲ್ಲವನ್ನು ಸಮನಾಗಿ ತೂಗಿಸಿಕೊಂಡು ಹೋಗುವ ಸಾಮರಸ್ಯ ಬೆಳೆಸುತ್ತದೆ. ಸಮಾಜದ ಕವಿಯಾಗಿ ಬೆಳೆದ ಇವರು ಜನರ ಮನಸ್ಸಿನಲ್ಲಿದ್ದ ಅಜ್ಞಾನ, ಜಡತ್ವ ದೂರ ಮಾಡಿ ಜನಮನದ ಚೇತನವಾಗಿ ಇಂದಿಗೂ ಉಳಿಯುವಂತಾಗಿದೆ ಎಂದು ಹೇಳಿದರು.

ಕನಕದಾಸರು ರಚಿಸಿರುವ ಕೀರ್ತನೆಗಳನ್ನು ಅಭ್ಯಾಸ ಮಾಡಿದರೆ ಅವರು ಜೀವಿಸಿದ ರೀತಿ ಮತ್ತು ಆತ್ಮಚರಿತ್ರೆ ಅವಲೋಕಿಸಲು ಸಾಧ್ಯವಾಗುತ್ತದೆ. ದಾಸರು ಕರ್ನಾಟಕ ಸಂಗೀತಕ್ಕೆ ನೀಡಿರುವ ಕೊಡುಗೆ ಅನನ್ಯ. ಸಮಾಜದಲ್ಲಿ ನಡೆಯುವ ದೌರ್ಜನ್ಯಗಳನ್ನು ಪ್ರಶ್ನೆ ಮಾಡುವ ಮನೋಭಾವ ಹುಟ್ಟುಹಾಕುತ್ತದೆ ಎಂದರು

ಜಿಲ್ಲಾಧಿಕಾರಿ ಡಾ. ಬಗಾದಿ ಗೌತಮ್ ಭಕ್ತ ಕನಕದಾಸರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು. ತಾಪಂ ಅಧ್ಯಕ್ಷ ನೆಟ್ಟೆಕೆರೆಹಳ್ಳಿ ಜಯಣ್ಣ, ಮಾಜಿ ಎಂಎಲ್​ಸಿ ಗಾಯತ್ರಿ ಶಾಂತೇಗೌಡ, ಜಿಪಂ ಮಾಜಿ ಅಧ್ಯಕ್ಷ ಎ.ಎನ್.ಮಹೇಶ್, ಜಿಪಂ ಸಿಇಒ ಎಸ್.ಅಶ್ವಥಿ, ಅಪರ ಜಿಲ್ಲಾಧಿಕಾರಿ ಡಾ. ಕುಮಾರ್, ಎಎಸ್ಪಿ ಎನ್.ಎಸ್.ಶ್ರುತಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಡಾ. ಸಿ.ರಮೇಶ್ ಇತರರಿದ್ದರು.

Stay connected

278,743FansLike
583FollowersFollow
621,000SubscribersSubscribe

ವಿಡಿಯೋ ನ್ಯೂಸ್

VIDEO: ಏರ್​ಪೋರ್ಟ್​ನಲ್ಲಿ ಬ್ಯಾಗೇಜ್​ಗಳ ಸಭ್ಯ ನಡತೆ ನೋಡಿ ಮನಸೋತ ನೆಟ್ಟಿಗರು;...

ಯಾವುದಾದರೂ ಕ್ಯೂದಲ್ಲಿ ನಿಂತರೂ ನೂಕುನುಗ್ಗಲು ಮಾಡುವ ಮನುಷ್ಯರಗಿಂತ ಈ ಬ್ಯಾಗೇಜ್​ಗಳು ಸಾವಿರ ಪಾಲು ಉತ್ತಮ ! ಅರೆ, ಇದೇನು? ಮನುಷ್ಯರಿಗೂ, ಬ್ಯಾಗೇಜ್​ಗಳಿಗೂ ಎಲ್ಲಿಯ ಹೋಲಿಕೆ ಎನ್ನುತ್ತೀರಾ? ಹಾಗಾದರೆ ಈ ಸುದ್ದಿ ಓದಿ, ವಿಡಿಯೋ ನೋಡಿದರೆ...

VIDEO| ಕೇಸ್ರಿಕ್ ವಿರುದ್ಧ ಸೇಡು ತೀರಿಸಿಕೊಂಡ ಕೊಹ್ಲಿ!

ಹೈದರಾಬಾದ್: ಮೊದಲ ಟಿ20 ಪಂದ್ಯದಲ್ಲಿ ಭರ್ಜರಿ ಬ್ಯಾಟಿಂಗ್ ಮೂಲಕ ಭಾರತ ತಂಡವನ್ನು ಗೆಲ್ಲಿಸಿದ ನಾಯಕ ವಿರಾಟ್ ಕೊಹ್ಲಿ, ಹಳೆಯ ಲೆಕ್ಕವೊಂದನ್ನೂ ಚುಕ್ತಾ ಮಾಡಿದರು. ಭಾರತದ ಚೇಸಿಂಗ್ ವೇಳೆ ಇನಿಂಗ್ಸ್​ನ 16ನೇ...

VIDEO| ವಿಚಾರಣೆಗೆಂದು ನ್ಯಾಯಾಲಯಕ್ಕೆ ಕರೆತಂದಿದ್ದ ಅತ್ಯಾಚಾರ ಆರೋಪಿಯ ಮೇಲೆ ಮುಗಿಬಿದ್ದ...

ಇಂದೋರ್​: ಅಪ್ರಾಪ್ತೆ ಮೇಲಿನ ಅತ್ಯಾಚಾರ ಪ್ರಕರಣದ ಆರೋಪಿ ಮೇಲೆ ನ್ಯಾಯಾಲಯದ ಆವರಣದಲ್ಲೇ ವಕೀಲರ ಗುಂಪು ಹಲ್ಲೆ ನಡೆಸಲು ಯತ್ನಿಸಿರುವ ಘಟನೆ ಮಧ್ಯಪ್ರದೇಶದ ಇಂದೋರ್​ನಲ್ಲಿ ಶನಿವಾರ ನಡೆದಿದೆ. ಘಟನೆಗೆ ಸಂಬಂಧಿಸಿದ ವಿಡಿಯೋ ಸಾಮಾಜಿಕ...

ಸಶಸ್ತ್ರ ಪಡೆಗಳ ಧ್ವಜ ದಿನ; ಭೂ, ವಾಯು, ನೌಕಾ ಪಡೆಗಳ...

ನವದೆಹಲಿ: ಸಶಸ್ತ್ರ ಪಡೆಗಳ ಧ್ವಜ ದಿನವಾದ ಇಂದು ಪ್ರಧಾನಿ ನರೇಂದ್ರ ಮೋದಿಯವರು ಭೂ, ವಾಯು ಹಾಗೂ ನೌಕಾಪಡೆಗಳ ಸಿಬ್ಬಂದಿಗೆ ಶುಭಾಶಯ ತಿಳಿಸಿದರು. ಟ್ವೀಟ್​ ಮೂಲಕ ಶುಭ ಹಾರೈಸಿದ ಅವರು, ಸಶಸ್ತ್ರ ಪಡೆಗಳ ಧ್ವಜ ದಿನಾಚರಣೆಯ...

ಇಂದಿನ ಬಿಗ್​ಬಾಸ್ ಕನ್ನಡ ​ಶೋನಲ್ಲಿ ಕಿಚ್ಚ ಸುದೀಪ್​ ಜತೆ ಇರಲಿದ್ದಾರೆ...

ಬೆಂಗಳೂರು: ಇಂದು ಬಿಗ್​ಬಾಸ್​ನ ವಾರದ ಕತೆ ಕಿಚ್ಚ ಸುದೀಪ್​ ಜತೆ ಎಪಿಸೋಡ್​ನಲ್ಲಿ ಬಾಲಿವುಡ್​ ನಟ ಸಲ್ಮಾನ್​ ಖಾನ್​ ಕೂಡ ಜತೆಯಾಗಲಿದ್ದಾರೆ !ಇದು ಕಿರುತೆರೆ ಇತಿಹಾಸದಲ್ಲಿಯೇ ಪ್ರಥಮ ಎನ್ನಲಾಗಿದ್ದು ಸದ್ಯ ಕಲರ್ಸ್​ ಕನ್ನಡ ಬಿಡುಗಡೆ...

VIDEO| ಎಕ್ಸ್​ಪ್ರೆಸ್​ ರೈಲಿಗೆ ಸಿಲುಕುತ್ತಿದ್ದ ವ್ಯಕ್ತಿಯ ಜೀವ ಉಳಿಸಿದ ಯೋಧ:...

ಥಾಣೆ: ರೈಲ್ವೆ ರಕ್ಷಣಾ ಪಡೆಯ ಯೋಧರೊಬ್ಬರು ಎಕ್ಸ್​ಪ್ರೆಸ್​ ರೈಲಿಗೆ ಸಿಲುಕುತ್ತಿದ್ದ ವ್ಯಕ್ತಿಯೊಬ್ಬನನ್ನು ರಕ್ಷಣೆ ಮಾಡುವ ಮೂಲಕ ಸಮಯಪ್ರಜ್ಞೆ ಮರೆದಿರುವ ಘಟನೆ ಮಹಾರಾಷ್ಟ್ರದ ಥಾಣೆ ರೈಲ್ವೆ ನಿಲ್ದಾಣದಲ್ಲಿ ಬುಧವಾರ ನಡೆದಿದ್ದು, ಇದಕ್ಕೆ...