More

    ಸಾಮಾಜಿಕ ಕ್ರಾಂತಿ ಹರಿಕಾರ ಬಸವಣ್ಣ

    ಕೆ.ಆರ್.ನಗರ: ಬಸವಣ್ಣನವರ ಸಮ ಸಮಾಜದ ತತ್ವಗಳನ್ನು ಡಾ.ಬಿ.ಆರ್.ಅಂಬೇಡ್ಕರ್ ಅವರು ಸಂವಿಧಾನದಲ್ಲಿ ಅಳವಡಿಸುವ ಮೂಲಕ 12ನೇ ಶತಮಾನದಲ್ಲಿ ಸಮಾನತೆಯ ಸಾಮಾಜಿಕ ಕ್ರಾಂತಿ ಹರಿಕಾರ ಬಸವಣ್ಣ ಎಂದು ತೋರಿಸಿಕೊಟ್ಟಿದ್ದಾರೆ ಎಂದು ಶಾಸಕ ಡಿ.ರವಿಶಂಕರ್ ಹೇಳಿದರು.

    ಪಟ್ಟಣದ ತಾಲೂಕು ಆಡಳಿತ ಸೌಧದಲ್ಲಿ ಶನಿವಾರ ತಾಲೂಕು ಆಡಳಿತ, ತಾಲೂಕು ಪಂಚಾಯಿತಿ ಮತ್ತು ಪುರಸಭೆ ವತಿಯಿಂದ ಆಯೋಜಿಸಲಾಗಿದ್ದ ಕರ್ನಾಟಕದ ಸಾಂಸ್ಕೃತಿಕ ನಾಯಕ ಜಗಜ್ಯೋತಿ ಬಸವಣ್ಣ ಅವರ ಭಾವಚಿತ್ರ ಅನಾವರಣ ಕಾರ್ಯಕ್ರಮದಲ್ಲಿ ಮಾತನಾಡಿ, ಎಲ್ಲರೂ ಸಮಾನರು ಎಂಬ ಸಮಾನತೆಯ ತತ್ವವನ್ನು ಜಗತ್ತಿಗೆ ನೀಡಿದವರು ಬಸವಣ್ಣ ಎಂದರು.

    ನಾವು ಬದುಕಿದ್ದಾಗ ಸಮಾಜಕ್ಕೆ ಏನು ಕೊಡುಗೆ ನೀಡುತ್ತಿವೋ ಅದೇ ಶಾಶ್ವತ. ಜಾತಿ ಪದ್ಧತಿ ತೊರೆದು ಬದಲಾವಣೆಯ ಮಾರ್ಗ ಹಿಡಿದ ಮಹನೀಯ ಬಸವಣ್ಣ ಅನುಭವ ಮಂಟಪವನ್ನು ಸ್ಥಾಪಿಸಿ ಅದರಲ್ಲಿ ಎಲ್ಲಾ ವರ್ಗದ ಮುಖಂಡರಿಗೆ , ಮಹಿಳೆಯರಿಗೆ ಸ್ಥಾನಮಾನ ನೀಡಿ ವಚನ ಸಾಹಿತ್ಯದ ಮೂಲಕ ಸಮಾಜಕ್ಕೆ ಸಮಾನತೆಯ ಸಂದೇಶ ನೀಡಿದರು. ಅವರು ಒಂದು ಸಮುದಾಯಕ್ಕೆ ಸೀಮಿತವಲ್ಲ ಎಂದು ಹೇಳಿದರು.ನಮ್ಮ ಮುಖ್ಯಮಂತ್ರಿ ಸಿದ್ದರಾಮಯ್ಯ

    ಅವರ ನೇತೃತ್ವದ ಕಾಂಗ್ರೆಸ್ ಸರ್ಕಾರದ ಹಿಂದಿನ ಅವಧಿಯಲ್ಲೇ ಎಲ್ಲ ಸರ್ಕಾರಿ ಕಚೇರಿಗಳು, ಶಾಲೆ, ಕಾಲೇಜುಗಳಲ್ಲಿ ಬಸವಣ್ಣನವರ ಭಾವಚಿತ್ರವನ್ನು ಕಡ್ಡಾಯವಾಗಿ ಅಳವಡಿಸಲೇಬೇಕು ಎಂಬ ಆದೇಶ ಮಾಡಿತ್ತು. ಈ ಬಾರಿ ಬಸವಣ್ಣನವರನ್ನು ರಾಜ್ಯದ ಸಾಂಸ್ಕೃತಿಕ ನಾಯಕ ಎಂದು ಘೋಷಿಸಿ ಅವರ ಭಾವಚಿತ್ರವನ್ನು ಅನಾವರಣಗೊಳಿಸುವ ಕಾರ್ಯಕ್ರಮಕ್ಕೆ ಚಾಲನೆ ನೀಡಿದ್ದು ಸಂತಸ ತರಿಸಿದೆ ಎಂದರು.

    ಬಸವಣ್ಣನವರ ಸಂದೇಶಗಳು ಇಂದಿಗೂ ಜೀವಂತವಾಗಿದ್ದು, ನಾವೆಲ್ಲ ಅವುಗಳನ್ನು ಕಿಂಚಿತ್ತಾದರು ಅಳವಡಿಸಿಕೊಂಡರೆ ಅವರ ನೆನೆಯುವ ಕಾರ್ಯಗಳಿಗೆ ಒಂದು ಅರ್ಥ ಸಿಗಲಿದೆ ಎಂದು ಶಾಸಕ ಡಿ.ರವಿಶಂಕರ್, ಸಮುದಾಯದ ಮುಖಂಡರ ಕೋರಿಕೆ ಮೇರೆಗೆ ಮುಂದಿನ ದಿನಗಳಲ್ಲಿ ಮುಖಂಡರ ಸಭೆ ಮಾಡಿ ಪಟ್ಟಣ ವ್ಯಾಪ್ತಿಯಲ್ಲಿ ಸೂಕ್ತವಾದ ವೃತ್ತಕ್ಕೆ ಬಸವಣ್ಣನವರ ವೃತ್ತವೆಂದು ನಾಮಕರಣ ಮಾಡಲು ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು.

    ಕಾರ್ಯಕ್ರಮದಲ್ಲಿ ಜಿಪಂ ಮಾಜಿ ಉಪಾಧ್ಯಕ್ಷ ಎ.ಎಸ್.ಚೆನ್ನಬಸಪ್ಪ, ಕಲ್ಯಾಣಪುರ ಮಠದ ಮಾತೆ ಚಿನ್ಮಯಿ ತಾಯಿ, ವೀರಶೈವ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ಎಲ್.ಪಿ.ರವಿಕುಮಾರ್, ಗ್ರೇಡ್-2 ತಹಸೀಲ್ದಾರ್ ಸುಬ್ರಹ್ಮಣ್ಯ ಮಾತನಾಡಿದರು. ಪುರಸಭೆ ಸದಸ್ಯ ಸೈಯದ್ ಸಿದ್ದಿಕ್, ಮಾಜಿ ಅಧ್ಯಕ್ಷ ನರಸಿಂಹರಾಜು, ಮಾಜಿ ಸದಸ್ಯ ರಾಜಾ ಶ್ರೀಕಾಂತ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಂ.ಎಸ್.ಮಹದೇವ್, ನಗರಾಧ್ಯಕ್ಷ ಎಂ.ಜೆ.ರಮೇಶ್, ವೀರಶೈವ ಮಹಾಸಭಾದ ತಾಲೂಕು ಅಧ್ಯಕ್ಷ ಕೆಂಪರಾಜು, ನೌಕರರ ಬಳಗದ ತಾಲೂಕು ಅಧ್ಯಕ್ಷ ರಾಜಶೇಖರ್, ನಿವೃತ್ತ ನೌಕರರ ಸಂಘದ ಅಧ್ಯಕ್ಷ ಸಣ್ಣಲಿಂಗಪ್ಪ, ಮುಖಂಡರಾದ ಗಡ್ಡಮಹೇಶ್, ತಂದ್ರೆ ದಿಲೀಪ್, ತಿಮ್ಮಶೆಟ್ಟಿ, ಚೌಕಳ್ಳಿಗಣೇಶ್ ಮತ್ತಿತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts