More

    ಸಮಾಜ ಸೇವಕರ ಕಾರ್ಯ ಅನನ್ಯ

    ಬೆಳಗಾವಿ: ಜನರಿಗೆ ಸರ್ಕಾರಿ ಯೋಜನೆ ತಲುಪಿಸುವಲ್ಲಿ ಸಮಾಜ ಕಾರ್ಯಕರ್ತರ ಸೇವಾಕಾರ್ಯ ಪ್ರಮುಖವಾದುದಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಬಸವರಾಜ ವರವಟ್ಟಿ ಶ್ಲಾಸಿದರು.

    ನಗರದ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದಲ್ಲಿ ಮಂಗಳವಾರ ಏರ್ಪಡಿಸಿದ್ದ ಸಮಾಜ ಕಾರ್ಯ ವಿಭಾಗದ ಸಮಾಜ ಕಾರ್ಯಕರ್ತರ ಸಂಘಟನೆ ಉದ್ಘಾಟಿಸಿ ‘ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿಯ ಸರ್ಕಾರಿ ಯೋಜನೆಗಳಲ್ಲಿ ಸಮಾಜ ಕಾರ್ಯಕರ್ತರ ಪಾತ್ರ’ ವಿಷಯದ ಕುರಿತು ಅವರು ಉಪನ್ಯಾಸ ನೀಡಿದರು.

    ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ವಿವಿಧ ಯೋಜನೆಗಳಿವೆ. ಅವುಗಳ ಮೂಲಕ ಮಹಿಳಾ ಮತ್ತು ಮಕ್ಕಳ ಸರ್ವತೋಮುಖ ಅಭಿವೃದ್ಧಿ ಸಾಧಿಸುವತ್ತ ಪ್ರಯತ್ನ ಮಾಡಲಾಗುತ್ತಿದೆ. ಈ ಸಂದರ್ಭದಲ್ಲಿ ಯೋಜನೆಗಳ ಅನುಷ್ಠಾನದಲ್ಲಿ ಸಮಾಜ ಕಾರ್ಯಕರ್ತರು ಪ್ರಾಮಾಣಿಕವಾಗಿ ತಮ್ಮ ಪಾತ್ರ ನಿಭಾಯಿಸಿ, ಸಮಾಜದ ಏಳಿಗೆಗೆ ದುಡಿಯಬೇಕಾಗಿದೆ ಎಂದರು.

    ವಿವಿಯ ಸಮಾಜ ವಿಜ್ಞಾನಗಳ ನಿಕಾಯ ಅಧ್ಯಕ್ಷ ಪ್ರೊ. ಕೆಎಲ್‌ಎನ್ ಮೂರ್ತಿ ಮಾತನಾಡಿ, ಸಮಾಜ ಕಾರ್ಯ ವಿದ್ಯಾರ್ಥಿಗಳು
    ಸಮಾಜದ ಕುರಿತು ಕಾಳಜಿ ಹೊಂದಿರುತ್ತಾರೆ. ವೃತ್ತಿ ಜೀವನದಲ್ಲಿ ಮೌಲ್ಯ ಅಳವಡಿಸಿಕೊಂಡು ಸಮಾಜದ ಏಳಿಗೆಗೆ ಶ್ರಮಿಸಬೇಕು ಎಂದು ಸಲಹೆ ನೀಡಿದರು.

    ಸಮಾಜಕಾರ್ಯ ವಿಭಾಗದ ಮುಖ್ಯಸ್ಥ ಪ್ರೊ.ಅಶೋಕ ಡಿಸೋಜಾ ಅಧ್ಯಕ್ಷತೆ ವಹಿಸಿದ್ದರು. ಬೆಳಗಾವಿ ಜಿಲ್ಲೆಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಜಿಲ್ಲಾ ಕಾರ್ಯಕ್ರಮ ನಿರೂಪಣಾ ಅಧಿಕಾರಿ ನವೀನಕುಮಾರ ಮತ್ತು ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಅಧಿಕಾರಿ ರಾಮಮೂರ್ತಿ ಕೆ.ವಿ., ಸಮಾಜ ಕಾರ್ಯ ವಿದ್ಯಾರ್ಥಿ ಸಂಘಟನೆಯ ಸಂಯೋಜಕ ಡಾ. ಸಂತೋಷ ಪಾಟೀಲ, ಸಮಾಜಕಾರ್ಯ ವಿಭಾಗದ ಸಹಾಯಕ ಪ್ರಾಧ್ಯಾಪಕ ಡಾ.ಚಂದ್ರಶೇಖರ ಬನಸೊಡೆ, ದೇವತಾ ಗಸ್ತಿ, ವಿದ್ಯಾರ್ಥಿ ಪ್ರತಿನಿಧಿಗಳಾದ ಪ್ರಕಾಶ ಕಾಂಬಳೆ, ರಾಧಿಕಾ ಬಾಲಗೋಳ ಇತರರು ಇದ್ದರು.

    ವಿದ್ಯಾರ್ಥಿಗಳಾದ ಪ್ರವೀಣ ಪಾಟೀಲ ಮತ್ತು ಕಾವೇರಿ ಲಮಾಣಿ ನಿರೂಪಿಸಿದರು. ಕಿರಣ ಎಸ್. ವಂದಿಸಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts