

ಕುಂದಾಪುರ: ಬ್ರಹ್ಮಶ್ರೀ ನಾರಾಯಣ ಗುರುಗಳ ತತ್ವಾದರ್ಶದಲ್ಲಿ ಕಾರ್ಯನಿರ್ವಹಿಸುತ್ತಿರುವ ಬಿಲ್ಲವ ಸಂಘಟನೆಗಳು ಹೆಚ್ಚು ಹೆಚ್ಚು ಸಮಾಜಮುಖಿ ಕಾರ್ಯಕ್ರಮ ಹಮ್ಮಿಕೊಳ್ಳಬೇಕು. ಆ ಮೂಲಕ ಇತರ ಸಮುದಾಯಗಳಿಗೆ ಮಾದರಿಯಾಗಬೇಕು ಎಂದು ಕುಂದಾಪುರ ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷ ಅಶೋಕ್ ಪೂಜಾರಿ ಬೀಜಾಡಿ ಹೇಳಿದರು.
ಕುಂದಾಪುರ ಬಿಲ್ಲವ ಸಮಾಜ ಸೇವಾ ಸಂಘದ ವತಿಯಿಂದ ಇಲ್ಲಿನ ನಾರಾಯಣಗುರು ಮಂದಿರದಲ್ಲಿ ಶನಿವಾರ ಬೈಂದೂರು ಮತ್ತು ಕುಂದಾಪುರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ವಿವಿಧ ಬಿಲ್ಲವ ಸಂಘಟನೆಗಳ ಚಿಂತನ ಮಂಥನ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಕುಂದಾಪುರ ತಾಲೂಕು ವೈದ್ಯಾಧಿಕಾರಿ ಪ್ರೇಮಾನಂದ ಮಾತನಾಡಿ, ಸಮುದಾಯದಲ್ಲಿ ಆರೋಗ್ಯದ ಕಾಳಜಿ ಮೂಡಿಸಬೇಕು ಜನತೆಗೆ ಆರೋಗ್ಯದ ಅರಿವು ನೀಡುವ ಕೆಲಸ ಹಮ್ಮಿಕೊಳ್ಳಬೇಕು ಎಂದರು.
ಬಿಲ್ಲವ ಸಂಘದ ಮಹಿಳಾ ಘಟಕ ಅಧ್ಯಕ್ಷೆ ಗಿರಿಜಾ ಮಾಣಿಗೋಪಾಲ್, ಬಿಲ್ಲವ ಸಂಘದ ಉಪಾಧ್ಯಕ್ಷರಾದ ಮುಲ್ಲಿ ರಾಮ ಪೂಜಾರಿ ಹಾಗೂ ಶಿವರಾಮ ಪೂಜಾರಿ, ಬೈಂದೂರು ತಾಲೂಕು ಬಿಲ್ಲವ ಸಂಘದ ಅಧ್ಯಕ್ಷ ಗಣೇಶ್ ಪೂಜಾರಿ, ಕಾರ್ಯದರ್ಶಿ ಯೋಗೀಶ್ ಪೂಜಾರಿ ಕೋಡಿ, ಯುವಕ ಮಂಡಲ ಅಧ್ಯಕ್ಷ ಸಂದೇಶ ಪೂಜಾರಿ, ಕೋಶಾಧಿಕಾರಿ ವಿನಯ್ ಪೂಜಾರಿ ಬನ್ನಾಡಿ ಉಪಸ್ಥಿತರಿದ್ದರು.
ಗುಲಾಬಿ ಜಯಸೂರ್ಯ ಪೂಜಾರಿ ಪ್ರಾರ್ಥಿಸಿದರು. ಕಾರ್ಯದರ್ಶಿ ಯೋಗೀಶ್ ಪೂಜಾರಿ ಕೋಡಿ ಸ್ವಾಗತಿಸಿದರು. ಶ್ರೀ ನಾರಾಯಣ ಗುರು ಶೈಕ್ಷಣಿಕ ಮತ್ತು ಸಾಂಸ್ಕೃತಿಕ ದತ್ತಿ ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ರಾಜೇಶ್ ಕಡ್ಗಿಮನೆ ಕಾರ್ಯಕ್ರಮ ನಿರ್ವಹಿಸಿದರು.