ಕೋಟ: ನಿರಂತರವಾಗಿ ಸಮಾಜಮುಖಿ ಕಾರ್ಯಗಳು ಪಂಚವರ್ಣ ಸಂಸ್ಥೆಯ ಸಾಧನೆಗೆ ಕೈಗನ್ನಡಿ ಎಂದು ಸಾಲಿಗ್ರಾಮ ಶ್ರೀ ಗುರುನರಸಿಂಹ ದೇಗುಲ ಆಡಳಿತ ಟ್ರಸ್ಟಿ ಕೆ.ಅನಂತಪದ್ಮನಾಭ ಐತಾಳ್ ಹೇಳಿದರು.
ಕೋಟದ ಪಂಚವರ್ಣ ಯುವಕ ಮಂಡಲ, ಪಂಚವರ್ಣ ಮಹಿಳಾ ಮಂಡಲ ಆಶ್ರಯದಲ್ಲಿ ಪಂಚವರ್ಣ ಮಹಿಳಾ ಮಂಡಲದ ಅಧ್ಯಕ್ಷೆ ಲಲಿತಾ ಪೂಜಾರಿ ಅವರ ಜನ್ಮದಿನದ ಪ್ರಯುಕ್ತ ಉಡುಪಿಯ ಹೊಸಬದುಕು ಆಶ್ರಮಕ್ಕೆ ದಿನಸಿ ವಸ್ತುಗಳ ಹಸ್ತಾಂತರಿಸಿ ಮಾತನಾಡಿದರು.
ಹೊಸಬದುಕು ಆಶ್ರಮದ ಮುಖ್ಯಸ್ಥ ಹ.ರಾ.ವಿನಯಚಂದ್ರ ರಾಜೇಶ್ವರ ಸಾಸ್ತಾನ, ಲಲಿತಾ ಪೂಜಾರಿ, ಪ್ರಮುಖರಾದ ಸತೀಶ್ ಎಚ್.ಕುಂದರ್, ಅಜಿತ್ ದೇವಾಡಿಗ, ಮನೋಹರ್ ಪೂಜಾರಿ, ಶೇವಧಿ ಸುರೇಶ್ ಗಾಣಿಗ ಉಪಸ್ಥಿತರಿದ್ದರು. ಅಜಿತ್ ಆಚಾರ್ ವಂದಿಸಿದರು. ರವೀಂದ್ರ ಕೋಟ ಸಂಯೋಜಿಸಿದರು. ಸುಜಾತ ಬಾಯರಿ ನಿರೂಪಿಸಿದರು.
