More

  ಮರಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಸಾಮಾಜಿಕ ಕಾರ್ಯಕರ್ತನ ಶವ ಪತ್ತೆ

  ಬಂಟ್ವಾಳ: ಸಾಮಾಜಿಕ ಕಾರ್ಯಕರ್ತ, ಕಾಂಗ್ರೆಸ್ ಜಿಲ್ಲಾ ಹಿಂದುಳಿದ ವರ್ಗಗಳ ಸಮಿತಿ ಉಪಾಧ್ಯಕ್ಷ ಪದ್ಮನಾಭ ಸಾಮಂತ್(32) ಆತ್ಮಹತ್ಯೆ ಮಾಡಿಕೊಂಡ ರೀತಿಯಲ್ಲಿ ಅವರ ಶವ ಭಾನುವಾರ ಬೆಳಗ್ಗೆ ಪತ್ತೆಯಾಗಿದೆ.

  ವಾಮದಪದವಿನ ತಿಮರಡ್ಕದ ಅವರ ಮನೆ ಬಳಿಯ ಗುಡ್ಡದ ಮರದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಶವ ಪತ್ತೆಯಾಗಿದೆ. ವಿವಿಧ ಸಾಮಾಜಿಕ ಹೋರಾಟಗಳಲ್ಲಿ ತೊಡಗಿಸಿಕೊಂಡಿದ್ದ ಪದ್ಮನಾಭ ಸಾಮಂತ್ ಅವರ ಸಾವು ಅನೇಕ ಊಹಾಪೋಹಗಳಿಗೆ ಕಾರಣವಾಗಿದೆ. ಇತ್ತೀಚೆಗೆ ಉದ್ಯೋಗ ಕೊಡಿಸುವ ನೆಪದಲ್ಲಿ ಯುವಕನಿಂದ ಹಣ ಪಡೆದು ವಂಚಿಸಿದ್ದರು ಎನ್ನುವ ಆರೋಪದಡಿ ಪದ್ಮನಾಭ ಸಾಮಂತ್ ವಿರುದ್ಧ ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಬಳಿಕ ಅವರು ಠಾಣೆಗೂ ಹಾಜರಾಗದೆ, ಯಾರ ಸಂಪರ್ಕಕ್ಕೂ ಸಿಕ್ಕಿರಲಿಲ್ಲ ಎಂದು ತಿಳಿದು ಬಂದಿದೆ.

  ಬಂಟ್ವಾಳದ ಅನೇಕ ಹಗರಣ, ಮಾಫಿಯಾಗಳನ್ನು ಬಯಲಿಗೆಳೆದು ನಿರ್ಭೀತವಾಗಿ ಸಾಮಾಜಿಕ ಜಾಲತಾಣದಲ್ಲಿ ಭಿತ್ತರಿಸುತ್ತಿದ್ದರು. ಸಾಮಾಜಿಕ ಹೋರಾಟಗಳಲ್ಲಿ ತೊಡಗಿಸಿಕೊಂಡಿದ್ದ ಅವರು ಅನೇಕ ವಿರೋಧಿಗಳನ್ನು ಕಟ್ಟಿಕೊಂಡಿದ್ದರು ಎನ್ನಲಾಗಿದೆ. ಇದೀಗ ಕೊಳೆತ ಸ್ಥಿತಿಯಲ್ಲಿ ಪದ್ಮನಾಭ ಸಾಮಂತ್ ಮೃತದೇಹ ಸಿಕ್ಕಿದ್ದು ಯಾವ ಕಾರಣಕ್ಕಾಗಿ ಆತ್ಮಹತ್ಯೆ ಮಾಡಿಕೊಂಡರು ಎನ್ನುವುದು ತನಿಖೆಯಿಂದ ತಿಳಿದು ಬರಬೇಕಾಗಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

  ಸಿನಿಮಾ

  ಲೈಫ್‌ಸ್ಟೈಲ್

  ಟೆಕ್ನಾಲಜಿ

  Latest Posts