More

    ಆಧ್ಯಾತ್ಮಿಕ ಚಿಂತನೆಯಿಂದ ಸಮಾಜ ಉತ್ತಮ

    ಚಿಕ್ಕಮಗಳೂರು: ಆಧ್ಯಾತ್ಮಿಕ ಚಿಂತನೆಗಳ ಮೂಲಕ ಸಮಾಜದ ಸ್ವಾಸ್ಥ್ಯಕಾಪಾಡುವಲ್ಲಿ ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಪ್ರಮುಖ ಪಾತ್ರ ವಹಿಸಿದೆ ಎಂದು ಕನ್ನಡ ಪೂಜಾರಿ ಹಿರೇಮಗಳೂರು ಕಣ್ಣನ್ ತಿಳಿಸಿದರು.

    ಉಪ್ಪಳ್ಳಿಯಲ್ಲಿ ಶ್ರೀ ಕ್ಷೇತ್ರ ಗ್ರಾಮಾಭಿವೃದ್ಧಿ ಯೋಜನೆಯಿಂದ ಬುಧವಾರ ಏರ್ಪಡಿಸಿದ್ದ ಸಾಮೂಹಿಕ ಸತ್ಯನಾರಾಯಣ ಪೂಜೆ ಮತ್ತು ಧಾರ್ಮಿಕ ಕಾರ್ಯಕ್ರಮದಲ್ಲಿ ಮಾತನಾಡಿದರು.
    ಧರ್ಮ ನಡೆಯುವುದು, ಸತ್ಯ ನುಡಿಯುವುದನ್ನು ಅರ್ಥಮಾಡಿಕೊಂಡು ಬದುಕನ್ನು ಸಾರ್ಥಕಪಡಿಸಿಕೊಳ್ಳಬೇಕು. ಕಾಯಕದಿಂದ ಭವಿಷ್ಯ ರೂಪಿಸಿಕೊಳ್ಳಬೇಕು. ಆಧ್ಯಾತ್ಮಿಕ ಚಟುವಟಿಕೆಗಳ ಮೂಲಕ ಸಮಾಜದಲ್ಲಿ ಹೇಗೆ ಬದುಕಬೇಕೆಂಬುದನ್ನು ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆ ಕಲಿಸಿಕೊಡುತ್ತಿದೆ ಎಂದರು.
    ಉಪ್ಪಳ್ಳಿ ಮಾಡೆಲ್ ಇಂಗ್ಲಿಷ್ ಶಾಲೆ ಪ್ರಾಚಾರ್ಯ ಎಂ.ಎನ್.ಷಡಕ್ಷರಿ ಮಾತನಾಡಿ, ಸಾಮಾನ್ಯ ಜನರನ್ನು ಸಮೂಹ ಚಿಂತನೆಯಲ್ಲಿ ತೊಡಗಿಸುವ ಕೆಲಸವನ್ನು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮಾಡುತ್ತಿದೆ ಎಂದು ಹೇಳಿದರು.
    ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಜಿಲ್ಲಾ ನಿರ್ದೇಶಕ ಪ್ರಕಾಶ್‌ರಾವ್ ಮಾತನಾಡಿ, ಸ್ವಸಹಾಯ ಸಂಘಗಳಲ್ಲಿ 10 ರೂ. ಉಳಿತಾಯದ ಮೂಲಕ 3.5 ಸಾವಿರ ಕೋಟಿ ರೂ. ಸಂಗ್ರಹಿಸಿದೆ. ವಿದ್ಯಾದಾನ, ಅನ್ನದಾನ, ಔಷಧ ದಾನ ಮತ್ತು ಅಭಯ ದಾನ ಪ್ರತಿ ಹಳ್ಳಿಯಲ್ಲೂ ಆಗಬೇಕು ಎಂಬ ಪರಿಕಲ್ಪನೆ ಮೂಲಕ ಕೆಲಸ ಮಾಡುತ್ತಿದೆ ಎಂದರು.
    ಉಪ್ಪಳ್ಳಿ ಸ್ವಸಹಾಯ ಸಂಘಗಳ ಒಕ್ಕೂಟ ಅಧ್ಯಕ್ಷೆ ಬೀನಾ ಅನುರಾಜೇಗೌಡ, ಭೂ ದಾಖಲೆಗಳ ಇಲಾಖೆಯ ನಿವೃತ್ತ ಸಹಾಯಕ ನಿರ್ದೇಶಕ ಎಂ.ಎಸ್.ಜಯಚಂದ್ರ, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ತಾಲೂಕು ಯೋಜನಾಧಿಕಾರಿ ಕೊರಗಪ್ಪ ಪೂಜಾರಿ, ಮೇಲ್ವಿಚಾರಕಿ ವಿಶಾಲಾಕ್ಷಿ, ರಚನಾ ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts