More

    ಮಡಿವಾಳರನ್ನು ಪರಿಶಿಷ್ಟ ಜಾತಿಗೆ ಸೇರಿಸಿ

    ಹೊಸದುರ್ಗ: ಆರ್ಥಿಕವಾಗಿ ಹಾಗೂ ಸಾಮಾಜಿಕವಾಗಿ ಹಿಂದುಳಿದಿರುವ ಮಡಿವಾಳ ಸಮುದಾಯವನ್ನು ಸರ್ಕಾರ ಪರಿಶಿಷ್ಟ ಜಾತಿ ಪಟ್ಟಿಗೆ ಸೇರಿಸುವ ಮೂಲಕ ನ್ಯಾಯ ದೊರಕಿಸಬೇಕು ಎಂದು ಮಡಿವಾಳ ಸಮಾಜದ ಮುಖಂಡ ಬಿ.ಆರ್.ರಾಮಕೃಷ್ಣಪ್ಪ ಹೇಳಿದರು.

    ಪಟ್ಟಣದ ಕನ್ನಡ ಭವನದಲ್ಲಿ ಶ್ರೀ ವೀರಮಡಿವಾಳ ಮಾಚಿದೇವ ಯುವ ಸೇನಾ ಪಡೆ ಮಂಗಳವಾರ ಆಯೋಜಿಸಿದ್ದ ಜಿಲ್ಲಾ ಮಟ್ಟದ ಪ್ರತಿಭಾ

    ಪುರಸ್ಕಾರ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಅತ್ಯಂತ ಹಿಂದುಳಿದ ಮಡಿವಾಳರ ಅಭಿವೃದ್ಧಿಗೆ ಸರ್ಕಾರ ಮುಂದಾಗುವ ಮೂಲಕ ಸಮಾಜದ ಮುಖ್ಯವಾಹಿನಿಗೆ ತರಲು ಸಹಕರಿಸಬೇಕು ಎಂದರು.

    ಮಡಿವಾಳರು ಸಂಘಟಿತರಾಗಿ ಜಾಗೃತಗೊಳ್ಳದಿದ್ದರೆ ಅವನತಿಯತ್ತ ಸಾಗುವ ಅಪಾಯವಿದೆ. ಪ್ರತಿಯೊಬ್ಬರೂ ಸಮುದಾಯದ ಏಳಿಗೆಯ ಜವಾಬ್ದಾರಿ ಹೊಂದಬೇಕು.

    ಮಕ್ಕಳು ಶೈಕ್ಷಣಿಕ ಪ್ರಗತಿ ಸಾಧಿಸುವ ಜತೆಗೆ ಉತ್ತಮ ಸಂಸ್ಕಾರ ಹೊಂದಿದರೆ ಸಮಾಜಕ್ಕೆ ಆಸ್ತಿಯಾಗುತ್ತಾರೆ. ಈ ನಿಟ್ಟಿನಲ್ಲಿ ಪಾಲಕರು ಯೋಚಿಸಬೇಕು ಎಂದು ತಿಳಿಸಿದರು.

    ವೀರ ಮಡಿವಾಳ ಮಾಚಿದೇವ ಯುವ ಸೇನಾ ಪಡೆ ಅಧ್ಯಕ್ಷ ನಾಗತಿಹಳ್ಳಿ ಮಂಜುನಾಥ್ ಮಾತನಾಡಿ, ಸಮುದಾಯವನ್ನು ಸಂಘಟಿಸುವ ಉದ್ದೇಶದಿಂದ ಈ ಸೇನಾ ಪಡೆಯನ್ನು ಸ್ಥಾಪಿಸಲಾಗಿದೆ.

    ಮಡಿವಾಳ ಸಮುದಾಯವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಒತ್ತಾಯಿಸಿ ಗುರುಪೀಠದ ಶ್ರೀಗಳ ನೇತೃತ್ವದಲ್ಲಿ ಹೋರಾಟ ನಡೆಸಲಾಗುತ್ತಿದೆ ಎಂದರು.

    ಪರಿಶಿಷ್ಟ ಜಾತಿಯ ಸ್ಥಾನಮಾನ ದೊರೆತರೆ ಮಾತ್ರ ಸಮುದಾಯದ ಅಭಿವೃದ್ಧಿ ಸಾಧ್ಯವಾಗಲಿದೆ. ಈ ನಿಟ್ಟಿನಲ್ಲಿ ಸಂಘಟಿತರಾಗಿ ಹೋರಾಟ ನಡೆಸುವ ಅಗತ್ಯವಿದೆ.

    ಸರ್ಕಾರ ಹಿಂದುಳಿದ ಮಡಿವಾಳ ಸಮುದಾಯಕ್ಕೆ ನ್ಯಾಯ ದೊರಕಿಸಿಕೊಡಬೇಕು ಎಂದರು.

    ಕಸಾಪ ತಾಲೂಕಾಧ್ಯಕ್ಷ ಬಿ.ಪಿ.ಓಂಕಾರಪ್ಪ, ಮಡಿವಾಳ ಸಮಾಜದ ಮುಖಂಡ ಲೋಕೇಶ್ವರಪ್ಪ, ಶಿವಣ್ಣ, ಸುರೇಶ, ಬೆನಕನಹಳ್ಳಿ ಶಿವಣ್ಣ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts