More

    ಮಣ್ಣಿನ ಸಂರಕ್ಷಣೆ ನಮ್ಮೆಲ್ಲರ ಕರ್ತವ್ಯ

    ಚನ್ನಗಿರಿ: ಮಣ್ಣಿನ ಸಂರಕ್ಷಣೆ ಮಾಡುವುದು ಪ್ರತಿಯೊಬ್ಬರ ಕರ್ತವ್ಯವಾಗಬೇಕು ಎಂದು ದಾವಣಗೆರೆ ನಿವೃತ್ತ ಸಹಾಯಕ ಕೃಷಿ ನಿರ್ದೇಶಕ ಎಸ್.ವಿ. ರಾಜಶೇಖರಪ್ಪ ಹೇಳಿದರು.

    ತಾಲೂಕಿನ ಕತ್ತಲಗೆರೆ ಗ್ರಾಮದ ಕೃಷಿ ಮತ್ತು ತೋಟಗಾರಿಕೆ ಸಂಶೋಧನಾ ಕೇಂದ್ರದಲ್ಲಿ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಿಗಳ ವಿವಿ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಸಮಸ್ಯಾತ್ಮಕ ಮಣ್ಣಿನ ಸುಧಾರಣಾ ಕ್ರಮಗಳ ಕುರಿತು ಒಂದು ದಿನದ ತರಬೇತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

    ಹೆಚ್ಚೆಚ್ಚು ರಾಸಾಯನಿಕ ಬಳಕೆಯಿಂದ ಮಣ್ಣಿನ ಸತ್ವ ಹಾಳಾಗುತ್ತಿದೆ. ನಿರಂತರ ಗೊಬ್ಬರದ ಬಳಕೆಯಿಂದ ಮಣ್ಣಿನಲ್ಲಿ ಇರುವಂತ 16ಕ್ಕೂ ಹೆಚ್ಚಿನ ಪೋಷಕಾಂಶಗಳು ಹಾಗೂ ಭೌತಿಕ ಗುಣಮಟ್ಟ ಕಡಿಮೆಯಾಗುತ್ತಿದೆ. ಆದ್ದರಿಂದ ಸಾಧ್ಯವಾದಷ್ಟು ರಾಸಾಯನಿಕ ಗೊಬ್ಬರ ಬಳಕೆ ನಿಲ್ಲಿಸಿ ಎಂದು ಮನವಿ ಮಾಡಿದರು.

    ಸಂಪನ್ಮೂಲ ವ್ಯಕ್ತಿ ಡಾ.ಸರ್ವಜ್ಞ ಸಾಲಿಮಠ ಮಾತನಾಡಿದರು. ಕೃಷಿ ಮತ್ತು ತೋಟಗಾರಿಕೆ ಸಂಸ್ಕರಣಾ ಕೇಂದ್ರದ ಮುಖ್ಯಸ್ಥ ಡಾ.ಬಿ.ಎಂ. ಅನಂದಕುಮಾರ್ ಅಧ್ಯಕ್ಷತೆ ವಹಿಸಿದ್ದರು.

    ಡಾ.ಗಂಗಪ್ಪಗೌಡ ಬಿರದಾರ, ಡಾ.ಎ.ವೈ. ಹೂಗಾರ, ಡಾ.ಮಂಜುನಾಥ್, ಡಾ.ನಿರಂಜನ್, ಡಾ.ಶರಣಪ್ಪ ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts