More

    ಭೂಮಿ ಫಲವತ್ತತೆಗಾಗಿ ಮಣ್ಣು ಪರೀಕ್ಷೆ ಅವಶ್ಯ

    ಹಿರೇಕೆರೂರ: ರೈತರು ಭೂಮಿ ಫಲವತ್ತತೆ ಅರಿಯಲು ಕಾಲಕಾಲಕ್ಕೆ ಮಣ್ಣಿನ ಪರೀಕ್ಷೆ ಮಾಡಿಸುವುದು ಅವಶ್ಯ ಎಂದು ಕೃಷಿ ಸಚಿವ ಬಿ.ಸಿ. ಪಾಟೀಲ ಹೇಳಿದರು.

    ತಾಲೂಕಿನ ದೂದಿಹಳ್ಳಿ ಗ್ರಾಮದಲ್ಲಿ ಜಿಲ್ಲಾ ಮತ್ತು ತಾಲೂಕು ಕೃಷಿ ಇಲಾಖೆಯಿಂದ ನಿರ್ವಿುಸಿದ ಮಣ್ಣು ಪರೀಕ್ಷೆ ಕೇಂದ್ರವನ್ನು ಶನಿವಾರ ಉದ್ಘಾಟಿಸಿ ಅವರು ಮಾತನಾಡಿದರು.

    ಅಧಿಕ ರಸಗೊಬ್ಬರ, ಔಷಧ ಬಳಕೆಯಿಂದ ಭೂಮಿ ಫಲವತ್ತತೆ ನಶಿಸುತ್ತಿದೆ. ಹೆಚ್ಚಿನ ಇಳುವರಿ ಪಡೆಯಲು ರಸಗೊಬ್ಬರ ಬಳಕೆ ಕಡಿಮೆ ಮಾಡಬೇಕು. ಸಾವಯವ ಕೃಷಿ ಪದ್ಧತಿ ಅಳವಡಿಸಿಕೊಳ್ಳಬೇಕು. ಪ್ರಧಾನಿ ಮೋದಿ ಅವರಿಗೆ ರಾಜ್ಯದ ಪ್ರತಿ ಗ್ರಾಪಂಗೆ ಒಂದು ಮಣ್ಣು ಪರೀಕ್ಷೆ ಕೇಂದ್ರ ಸ್ಥಾಪಿಸುವಂತೆ ಪತ್ರದ ಮೂಲಕ ಮನವಿ ಮಾಡಿದ್ದು, ಹಂತ ಹಂತವಾಗಿ ಈ ವ್ಯವಸ್ಥೆ ಕಲ್ಪಿಸಲಾಗುವುದು ಎಂದರು.

    ಉಗ್ರಾಣ ನಿಗಮ ಅಧ್ಯಕ್ಷ ಯು.ಬಿ. ಬಣಕಾರ ಮಾತನಾಡಿದರು. ಜಿಲ್ಲಾ ಕೃಷಿ ಜಂಟಿ ನಿರ್ದೇಶಕ ಬಿ. ಮಂಜುನಾಥ, ಕೃಷಿ ರಾಣೆಬೆನ್ನೂರ ವಲಯ ಸಹಾಯಕ ಉಪನಿರ್ದೇಶಕಿ ಸ್ಪೂರ್ತಿ ಜಿ.ಎಸ್., ಕೃಷಿ ತಾಲೂಕು ಸಹಾಯಕ ನಿರ್ದೇಶಕ ಎಂ.ವಿ. ಮಂಜುನಾಥ, ವೀರಭದ್ರಯ್ಯ ಮಠದ,

    ಎಸ್.ವಿ. ಚಿಕ್ಕನರಗುಂದಮಠ, ಗ್ರಾಪಂ ಸದಸ್ಯರು, ಗ್ರಾಮಸ್ಥರು ಇದ್ದರು. ಕೃಷಿ ಇಲಾಖೆ ತಾಂತ್ರಿಕ ವ್ಯವಸ್ಥಾಪಕಿ ಶಿಲ್ಪಾ ಗೌಡರ ನಿರ್ವಹಿಸಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts