More

    ಕೇಂದ್ರ ಸಚಿವರನ್ನು ಪ್ರಶಂಸಿಸಿದ ಕಾಂಗ್ರೆಸ್ ಮುಖ್ಯಮಂತ್ರಿ!

    ನವದೆಹಲಿ: ಕೇಂದ್ರ ಸಂಸದೀಯ ವ್ಯವಹಾರಗಳು ಗಣಿ ಮತ್ತು ಕಲ್ಲಿದ್ದಲು ಇಲಾಖೆ ಸಚಿವ ಪ್ರಲ್ಹಾದ ಜೋಶಿಯವರು ರಾಜಸ್ಥಾನ ರಾಜ್ಯದ ವಿದ್ಯುತ್‌ ಸಮಸ್ಯೆ ಬಗೆಹರಿಸುವಲ್ಲಿ ರಚನಾತ್ಮಕ ಹಾಗೂ ಧನಾತ್ಮಕವಾಗಿ ಸ್ಪಂದನೆ ನೀಡಿದ್ದಾರೆಂದು ರಾಜಸ್ಥಾನ ಮುಖ್ಯಮಂತ್ರಿ ಆಶೋಕ್ ಗೆಲ್ಲೋಟ್ ಅವರು ಹೇಳಿದ್ದಾರೆ.

    ಕೇಂದ್ರದ ಕೋಲ್ ಇಂಡಿಯಾ ಲಿ., ಹಾಗೂ ರಾಜಸ್ಥಾನದ ಆ‌.ಆ‌.ವಿ.ಯು.ಎನ್.ಎಲ್. ರಾಜಸ್ಥಾನ್ ವಿದ್ಯುತ್ ಉತ್ಪಾದನಾ ನಿಗಮ ಲಿ., ದೊಂದಿಗೆ 1190 ಮೆಗಾವ್ಯಾಟ್ ವಿದ್ಯುತ್‌ ಉತ್ಪಾದನೆ, ಸಂಬಂಧಿ ನಡೆದ ಪರಸ್ಪರ ಒಡಂಬಡಿಕೆ ಪತ್ರಕ್ಕೆ ಅಂಕಿತ ಹಾಕುವ ಕಾರ್ಯಕ್ರಮದಲ್ಲಿ ಮಾತನಾಡಿದರು.

    ರಾಜಸ್ಥಾನದಲ್ಲಿ ವಿದ್ಯುತ್‌ ಸಮಸ್ಯೆ ಇದ್ದಾಗ ಛತ್ತೀಸ್‌ ಗಡದಲ್ಲಿರುವ ಕಲ್ಲಿದ್ದಲಿನ ಪ್ರಾಧಿಕಾರಗಳೂ ಕೂಡಾ ನೀಡಿದ ಸಹಾಯ ಸಹಕಾರವನ್ನು ಶ್ರೀ ಮೋದಿ ಸರಕಾರದ ಕೇಂದ್ರ ಕಲ್ಲಿದ್ದಲು ಸಚಿವ ಪ್ರಲ್ಹಾದ ಜೋಶಿ ರಾಜಸ್ಥಾನ ಸರಕಾರಕ್ಕೆ ನೀಡುತ್ತಿದ್ದಾರೆ. ರಾಜಸ್ಥಾನದ ವಿದ್ಯುತ್‌ ಬರ ನೀಗಿಸುವಲ್ಲಿ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಸಕಾರಾತ್ಮಕ ಸ್ಪಂದಿಸುತ್ತಿದ್ದಾರೆ ಎಂದು ಹೇಳಿದರು.

    ತಿಳುವಳಿಕೆ ಪತ್ರಕ್ಕೆ ರಾಜಸ್ಥಾನದ ವಿದ್ಯುತ್ ನಿಗಮದ ವ್ಯವಸ್ಥಾಪಕ ನಿರ್ದೇಶಕ ಶ್ರೀ ರಾಜೇಶ್ ಕುಮಾರ್ ಶರ್ಮಾ, ಕೋಲ್ ಇಂಡಿಯಾ ಲಿ., ಸಂಸ್ಥೆಯ ಅಧ್ಯಕ್ಷ ಶ್ರೀ ಪ್ರಮೋದ ಅಗರವಾಲ್ ಹಾಗೂ ಕೇಂದ್ರ ಕಲ್ಲಿದ್ದಲು ಹಾಗೂ ಗಣಿ ಸಚಿವ ಪ್ರಲ್ಹಾದ ಜೋಶಿ ಹಾಗೂ ರಾಜಸ್ಥಾನ ಮುಖ್ಯಮಂತ್ರಿ ಅಶೋಕ್‌ ಗೆಲ್ಲೋಟ್ ಅವರ ಸಮ್ಮುಖದಲ್ಲಿ ಅಂಕಿತ ಹಾಕಿದರು.

    ಈ ಸಂದರ್ಭದಲ್ಲಿ ಮಾತನಾಡಿದ ಸಚಿವ ಪ್ರಲ್ಹಾದ ಜೋಶಿ ಈ ಯೋಜನೆ ಮುಂಬರುವ ರಾಜಸ್ಥಾನದ ಸೋಲಾರ್ ಪಾರ್ಕ್ ಯೋಜನೆಯಡಿ ಬರಲಿದ್ದು, ಇದು ಕೋಲ್ ಇಂಡಿಯಾ ಲಿ. ನ ಸಂಕಲ್ಪಿತ ಗ್ಯಾಸಿಫಿಕೇಶನ್ ಮೂಲಕ ಪರಿಸರ ಪ್ರೇಮಿ ಪರಿಶುದ್ಧ ಸೋಲಾರ್ ವಿದ್ಯುತ್ ಉತ್ಪಾದನಾ ಪ್ರಕ್ರಿಯೆಗೆ ಚಾಲನೆ ದೊರಕಲಿದೆ. ನಮ್ಮ ದೇಶ ಮುಂದಿನ 50 ವರ್ಷಗಳಿಗೆ ಸಾಕಾಗುವಷ್ಟು ಕಲ್ಲಿದ್ದಲು ನಿಕ್ಷೇಪ ಹೊಂದಿದ್ದು ಇದನ್ನು ಪರಿಸರ ಪ್ರೇಮಿ ಕಲ್ಲಿದ್ದಲಿನ ಬಳಕೆಯ ಉದ್ದೇಶ ಹೊಂದಲಾಗಿದೆ ಎಂದು ಹೇಳಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts