20.4 C
Bengaluru
Monday, January 20, 2020

ನವನಗರದಲ್ಲಿ ಯುದ್ಧ ಸ್ಮಾರಕ ನಿರ್ವಿುಸಿ

Latest News

ಸಿಎಎ ಬೆಂಬಲಿಸಿ ರ‌್ಯಾಲಿ

ಬಾದಾಮಿ: ವಿಶ್ವದ ದೊಡ್ಡ ಹಿಂದು ರಾಷ್ಟ್ರವಾದ ಭಾರತದ ಸಂಸ್ಕೃತಿ ಉಳಿಸಿ ಬೆಳೆಸಲು ಕೇಂದ್ರ ಸರ್ಕಾರ ಪೌರತ್ವ ತಿದ್ದ್ದುಪಡಿ ಕಾಯ್ದೆ ಜಾರಿಗೆ ತಂದಿದೆ. ಇದರಿಂದ...

ಕೋಟೆನಗರಿಯಲ್ಲಿ ಆಕರ್ಷಕ ಪಥ ಸಂಚಲನ

ಬಾಗಲಕೋಟೆ: ಸಂಕ್ರಾಂತಿ ಹಬ್ಬದ ಅಂಗವಾಗಿ ಆರ್‌ಎಸ್‌ಎಸ್ ಅಂಗ ಸಂಸ್ಥೆ ರಾಷ್ಟ್ರ ಸೇವಿಕಾ ಸಮಿತಿ ನೇತೃತ್ವದಲ್ಲಿ ಭಾನುವಾರ ಹಮ್ಮಿಕೊಳ್ಳಲಾಗಿದ್ದ ಸ್ವಯಂ ಸೇವಕಿಯರ ಘೋಷ ಸಹಿತ...

ಧರ್ಮದಲ್ಲಿ ರಾಜಕೀಯ ಸಲ್ಲ

ತೇರದಾಳ: ಧರ್ಮ ಶ್ರೇಷ್ಠವಾಗಿದ್ದು, ಧರ್ಮದಲ್ಲಿ ರಾಜಕೀಯ ಬೆರೆಸಬೇಡಿ. ವೀರಶೈವರು ಲಿಂಗವನ್ನು ತ್ರಿಕಾಲಗಳಲ್ಲಿ ಪೂಜೆಗೈಯುತ್ತ ಜೀವನ ಸಾರ್ಥಕ ಮಾಡಿಕೊಳ್ಳಬೇಕು. ಧರ್ಮ ಮತ್ತು ಗುರು ಜೀವನ...

ಕಲಾದಗಿಯಲ್ಲಿ ಆರ್ಥಿಕ ಗಣತಿಗೆ ಅಸಹಕಾರ

ಕಲಾದಗಿ: ಗ್ರಾಮದಲ್ಲಿ ರಾಷ್ಟ್ರೀಯ 7ನೇ ಆರ್ಥಿಕ ಗಣತಿ ಕಾರ್ಯ ಒಂದು ವಾರದಿಂದ ಸ್ಥಗಿತಗೊಂಡಿದ್ದು, ಪ್ರಬಲ ಕೋಮಿನ ನೂರಾರು ಮನೆಯವರು ಆರ್ಥಿಕ ಗಣತಿದಾರರಿಗೆ ಮಾಹಿತಿ...

ವೇಗ ಕಾಣದ ಫಾಸ್ಟ್ಯಾಗ್​ !

ಹೀರಾನಾಯ್ಕ ಟಿ. ವಿಜಯಪುರ: ವಾಹನಗಳಿಗೆ ಕಡ್ಡಾಯವಾಗಿ ಫಾಸ್ಟ್ಯಾಗ್ ​ಅಳವಡಿಸಲು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಆದೇಶಿಸಿದೆ. ಆದರೆ, ಸಾಕಷ್ಟು ವಾಹನಗಳಿಗೆ ಫಾಸ್ಟ್ಯಾಗ್  ಅಳವಡಿಸದೆ ಇರುವುದರಿಂದ...

ಬಾಗಲಕೋಟೆ: ನವನಗರದಲ್ಲಿ ಯುದ್ಧ ಸ್ಮಾರಕ, ಮಾಜಿ ಸೈನಿಕರ ಆಸ್ಪತ್ರೆ ನಿರ್ಮಾಣ ಮಾಡಬೇಕು. ಮಾಜಿ ಸೈನಿಕರ ಬಡಾವಣೆ ನಿರ್ವಣಕ್ಕೆ ಅಗತ್ಯ ಜಮೀನು ಒದಗಿಸಬೇಕು ಎಂದು ಜಿಲ್ಲಾ ಸೈನಿಕ ಮಂಡಳಿ ಸದಸ್ಯರು ಮನವಿ ಮಾಡಿದರು.

ಜಿಲ್ಲಾಧಿಕಾರಿ ಸಭಾಂಗಣದಲ್ಲಿ ಸೋಮವಾರ ಜರುಗಿದ ಜಿಲ್ಲಾ ಸೈನಿಕ ಮಂಡಳಿ ಸಭೆಯಯಲ್ಲಿ ವಿವಿಧ ಬೇಡಿಕೆ ಇಟ್ಟರು.

ಅಧ್ಯಕ್ಷತೆ ವಹಿಸಿದ್ದ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಸೈನಿಕ ಮಂಡಳಿ ಅಧ್ಯಕ್ಷ ಶಾಂತಾರಾಮ ಕೆ.ಜಿ. ಮಾತನಾಡಿ, ಜಿಲ್ಲಾ ಸೈನಿಕ ಮಂಡಳಿಯನ್ನು ಮುಂದಿನ ಮೂರು ವರ್ಷಕ್ಕೆ ಪುನರ್ ರಚಿಸಿ ಸರ್ಕಾರ ಅಧಿಸೂಚನೆ ಹೊರಡಿಸಿದ್ದು, ವಿವಿಧ ಕೆಲಸ ಕಾರ್ಯಗಳಲ್ಲಿ ಮಾಜಿ ಸೈನಿಕರಿಗೆ ಆದ್ಯತೆ ನೀಡುವಂತೆ ಹಾಗೂ ಯಾವುದೇ ಇಲಾಖೆಗೆ ಕೆಲಸ ಕಾರ್ಯಗಳಿಗೆ ಬಂದಾಗ ಅವರಿಗೆ ಗೌರವ ನೀಡುವ ನಿಟ್ಟಿನಲ್ಲಿ ಅಧಿಕಾರಿಗಳಿಗೆ ಸೂಚಿಸಲಾಗುವುದು ಎಂದರು.

ಸೈನಿಕ ಇಲಾಖೆಯವರು 2017ರ ನವೆಂಬರ್ 20ರಂದು ಜಾರಿಗೆ ತಂದಿರುವ ಸೇವಾ ಶುಲ್ಕ ರದ್ದು ಪಡಿಸಬೇಕು. ಸರ್ಕಾರದ ಅದೇಶದಂತೆ ಮಹಾನಗರ ಪಾಲಿಕೆ, ನಗರಸಭೆ, ನಗರ ಪಾಲಿಕೆಗಳಲ್ಲಿ ವಾಸವಾಗಿರುವ ಮಾಜಿ ಸೈನಿಕರ ಮನೆ ಕರವನ್ನು ಶೇ.50ರಷ್ಟು ರದ್ದುಪಡಿಸಲಾಗಿದೆ. ಆದರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ವಾಸಿಸುವ ಮಾಜಿ ಸೈನಿಕರ ಮನೆಗಳಲ್ಲಿ ಈ ನಿಯಮ ಪಾಲನೆಯಾಗುತ್ತಿಲ್ಲ. ಇನ್ನು ಅನೇಕ ಕಡೆ ಮಾಜಿ ಸೈನಿಕರ ಪತ್ನಿಯರ ಹೆಸರಿನಲ್ಲಿ ಮನೆ ಇವೆ. ಅದಕ್ಕೂ ಕರ ವಿನಾಯಿತಿ ನೀಡಬೇಕು. ಜಿಲ್ಲಾ ಸೈನಿಕ ಕಲ್ಯಾಣ ಇಲಾಖೆಯಲ್ಲಿ ಖಾಲಿ ಹುದ್ದೆ ಭರ್ತಿ ಮಾಡಬೇಕು ಎಂದು ಆಗ್ರಹಿಸಿದರು.

ಸೇನೆಯಲ್ಲಿ ಸೇವೆ ಸಲ್ಲಿಸುತ್ತಿರುವಾಗ ಅಥವಾ ಯುದ್ಧದಲ್ಲಿ ಸೈನಿಕರು ಮೃತರಾದರೆ ಅವರ ಪರಿವಾರದ ಒಬ್ಬ ಸದಸ್ಯರಿಗೆ ಅನುಕಂಪದ ಆಧಾರದ ಮೇಲೆ ಕೇಂದ್ರದಲ್ಲಿರುವಂತೆ ರಾಜ್ಯ ಸರ್ಕಾರವೂ ನೌಕರಿ ಕೊಡುವ ಕಾನೂನು ಜಾರಿಗೊಳಿಸಬೇಕು ಎಂದು ಸಭೆಯಲ್ಲಿ ಮಾಜಿ ಸೈನಿಕರು ಒತ್ತಾಯಿಸಿದರು.

ಡಿಸಿ ಶಾಂತಾರಾಮ ಪ್ರತಿಕ್ರಿಯೆ ನೀಡಿ, ಅನುಕಂಪ ನೌಕರಿ ನೀಡುವುದು ಸರ್ಕಾರದ ಹಂತದಲ್ಲಿ ನಡೆಯಬೇಕಾದ ಪ್ರಕ್ರಿಯೆ. ಈ ಕುರಿತು ಸರ್ಕಾರಕ್ಕೆ ಪತ್ರ ಬರೆಯುತ್ತೇನೆ. ಮಾಜಿ ಸೈನಿಕರ ಬಡಾವಣೆ ನಿರ್ವಣಕ್ಕೆ ಬಿಟಿಡಿಎ ಅವರೊಂದಿಗೆ ಜಮೀನು ಮಂಜೂರಾತಿಗಾಗಿ ರ್ಚಚಿಸುವುದಾಗಿ ತಿಳಿಸಿದರು.

ಸಭೆಯಲ್ಲಿ ಜಿಲ್ಲಾ ಮಾಜಿ ಸೈನಿಕರ ಪರವಾಗಿ ಬಂದ ಮನವಿಗಳ ಬಗ್ಗೆ ಸಭೆಯಲ್ಲಿ ರ್ಚಚಿಸಲಾಯಿತು. ಸಭೆಯಲ್ಲಿ ಜಿಲ್ಲಾ ಸೈನಿಕ ಕಲ್ಯಾಣ ಇಲಾಖೆ ಉಪನಿರ್ದೇಶಕ ರಮೇಶ ಜಾಗಾಪುರ, ಜಿಲ್ಲಾ ಸೈನಿಕ ಮಂಡಳಿ ಉಪಾಧ್ಯಕ್ಷ ನಿವೃತ್ತ ಮೇಜರ್ ಎ.ಎಸ್.ನಿಂಬಾಳ್ಕರ್, ಸದಸ್ಯರಾದ ಡಿಡಿಪಿಐ ಎಂ.ಆರ್.ಕಾಮಾಕ್ಷಿ, ಮಾಜಿ ಹವಾಲ್ದಾರ ಹನುಮಂತ ಕುಲಕರ್ಣಿ, ಅಹ್ಮದ ರಸೂಲ್ ದಂಡಿಯಾ, ಸಿದ್ದರಾಮಪ್ಪ ಕರಣಿ, ಅರ್ಜುನ ಕೋರೆ ಹಾಗೂ ನಿವೃತ್ತ ಶಿಕ್ಷಣಾಧಿಕಾರಿ ವಿಠಲ ಭೀಮಪ್ಪ ಗೋವಿಂದಪ್ಪ ಇತರರು ಉಪಸ್ಥಿತರಿದ್ದರು.

ವಿಡಿಯೋ ನ್ಯೂಸ್

Fact Check| ಮಹಿಳೆ, ಮಕ್ಕಳ ಮೇಲೆ ಪೊಲೀಸ್​ ದೌರ್ಜನ್ಯ: ವೈರಲ್...

ನವದೆಹಲಿ: ಪುರುಷ, ಮಹಿಳೆ ಹಾಗೂ ಮಕ್ಕಳ ಮೇಲೆ ಪೊಲೀಸ್​ ಸಿಬ್ಬಂದಿ ಹಲ್ಲೆ ಮಾಡುತ್ತಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ ರಾಷ್ಟ್ರೀಯ ಪೌರತ್ವ ನೋಂದಣಿ ಅಡಿಯಲ್ಲಿ ಜನರನ್ನು ಮನೆಯಿಂದ ಒಕ್ಕಲೆಬ್ಬಿಸಲಾಗುತ್ತಿದೆ ಎಂದು...

VIDEO| ಉಪಮುಖ್ಯಮಂತ್ರಿಗಳ ಕೈಬಿಡುವ ವಿಚಾರ ವರಿಷ್ಠರಿಗೆ ಬಿಟ್ಟದ್ದು, ಸಿಎಂ ವಾಪಸ್​...

ಬೆಂಗಳೂರು: ಹಾಲಿ ಇರುವ ಇಬ್ಬರು ಉಪ ಮುಖ್ಯಮಂತ್ರಿಗಳನ್ನು ಕೈ ಬಿಟ್ಟು ಹೊಸ ಡಿಸಿಎಂಗಳ ನೇಮಕ ವಿಚಾರವಾಗಿ ಪಕ್ಷದ ವರಿಷ್ಠರು ಮತ್ತು ಮುಖ್ಯಮಂತ್ರಿ ಯಡಿಯೂರಪ್ಪ ಅವರು ನಿರ್ಧಾರ ತೆಗೆದುಕೊಳ್ಳಲಿದ್ದಾರೆ ಎಂದು ಡಿಸಿಎಂ ಡಾ. ಅಶ್ವತ್ಥ...

VIDEO| ವಂದೇ ಮಾತರಂ ಹೇಳದವರಿಗೆ ಭಾರತದಲ್ಲಿ ಬದುಕುವುದಕ್ಕೆ ಹಕ್ಕಿಲ್ಲ: ಕೇಂದ್ರ...

ಅಹಮದಾಬಾದ್​: ಒಂದೊಮ್ಮೆ ನೀವು ವಂದೇಮಾತರಂ ಹೇಳುವುದಿಲ್ಲ ಎಂದಾದರೆ ಭಾರತದಲ್ಲಿ ಬದುಕುವ ಹಕ್ಕು ಇರುವುದಿಲ್ಲ ಎಂದು ಕೇಂದ್ರ ಸಚಿವ ಪ್ರತಾಪ್ ಚಂದ್ರ ಸಾರಂಗಿ ಸೂರತ್​ನಲ್ಲಿ ಹೇಳಿದ್ದು ಈಗ ವಿವಾದಕ್ಕೀಡಾಗಿದೆ.    ಅವರು ಶನಿವಾರ ಪೌರತ್ವ...

VIDEO| ಜಮ್ಮು-ಕಾಶ್ಮೀರದ ಉಧಂಪುರದಲ್ಲೊಂದು ಚೈಲ್ಡ್ ಫ್ರೆಂಡ್ಲಿ ಪೊಲೀಸ್ ಸ್ಟೇಷನ್ !

ಉಧಂಪುರ: ಜಮ್ಮು-ಕಾಶ್ಮೀರದ ಉಧಂಪುರದಲ್ಲಿ ಇದೇ ಮೊದಲ ಬಾರಿಗೆ ಚೈಲ್ಡ್ ಫ್ರೆಂಡ್ಲಿ ಪೊಲೀಸ್ ಸ್ಟೇಷನ್ ಕಾರ್ಯಾಚರಣೆ ಆರಂಭಿಸಿದೆ. ಈ ವಿಶೇಷ ಜುವೆನಿಲ್ ಪೊಲೀಸ್ ಘಟಕವನ್ನು ಭಾನುವಾರ ಉದ್ಘಾಟಿಸಲಾಗಿದೆ. ಮಕ್ಕಳಲ್ಲಿ ಪೊಲೀಸ್ ಠಾಣೆ...

VIDEO| ತನ್ನ ಆಹಾರವನ್ನು ಮೀನು ಬಾಯಿಗಿಡುವ ಬಾತುಕೋಳಿ: ವೈರಲ್​ ವಿಡಿಯೋ...

ನವದೆಹಲಿ: ಪ್ರಾಣಿಗಳ ನಡುವಿನ ಅನ್ಯೋನ್ಯತೆಗೆ ಸಂಬಂಧಿಸಿದ ಸಾಕಷ್ಟು ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ನೋಡಿದ್ದೇವೆ. ಅದರಲ್ಲೂ ಪರಸ್ಪರ ವೈರುಧ್ಯವುಳ್ಳ ಜೀವಿಗಳೆರಡು ಒಂದಕ್ಕೊಂದು ಪೋಷಿಸುವುದನ್ನು ನೋಡಿದರೆ ಅಚ್ಚರಿಯಾಗದೇ ಇರದು. ಅಂತಹದ್ದೇ ವಿಡಿಯೋವೊಂದು ಇದೀಗ...

VIDEO| ನಾವೆಲ್ಲ ಕಾಳಿಯನ್ನು ಪೂಜಿಸುವವರು, ನಮಗೆ ಮೃತ್ಯು ಬಹಳ ದೊಡ್ಡ...

ಬೆಂಗಳೂರು: ಯುವ ಬ್ರಿಗೇಡ್​ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆ ಹಾಗೂ ಸಂಸದ ತೇಜಸ್ವಿಸೂರ್ಯ ಸೇರಿದಂತೆ ಹಿಂದು ಮುಖಂಡರ ಹತ್ಯೆಗೆ ಸಂಚು ನಡೆಸಿರುವ ಆಘಾತಕಾರಿ ಘಟನೆ ಬಯಲಾಗಿ, 6 ಮಂದಿಯನ್ನು ಬಂಧಿಸದ ಬೆನ್ನಲ್ಲೇ...