More

    ತರಿದಾಳು ಗ್ರಾಮದಲ್ಲಿ ಯೋಧ ಸತೀಶ್ ಅಂತ್ಯಸಂಸ್ಕಾರ ; ಕುಟುಂಬಕ್ಕೆ ಸಚಿವ ಡಾ.ಕೆ.ಸುಧಾಕರ್ ಸಾಂತ್ವನ

    ಗೌರಿಬಿದನೂರು: ಕರ್ತವ್ಯನಿರತರಾಗಿದ್ದಾಗ ಉಸಿರಾಟ ಸಮಸ್ಯೆಯಿಂದಾಗಿ ಅಸ್ವಸ್ಥಗೊಂಡು ಚಿಕಿತ್ಸೆ ಲಿಸದೆ ಮೃತಪಟ್ಟಿದ್ದ ಸಿಆರ್‌ಪಿಎಫ್ ಯೋಧ ಟಿ.ಜಿ.ಸತೀಶ್ ಅವರ ಅಂತ್ಯಸಂಸ್ಕಾರ ಸ್ವಗ್ರಾಮ ತಾಲೂಕಿನ ತರಿದಾಳು ಗ್ರಾಮದಲ್ಲಿ ಸೋಮವಾರ ಸಂಜೆ ನೆರವೇರಿತು.

    ನಾಗಾಲ್ಯಾಂಡ್‌ನಲ್ಲಿ ಹವಾಮಾನ ವೈಪರೀತ್ಯದಿಂದ ಉಷ್ಣಾಂಶ ಮೈನಸ್ ಡಿಗ್ರಿಗೆ ತಲುಪಿ ಉಸಿರಾಟದ ಸಮಸ್ಯೆ ಉಂಟಾಗಿದ್ದರಿಂದ ಸತೀಶ್ ಅವರನ್ನು ಸೇನಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಲಿಸದೆ ಭಾನುವಾರ ಬೆಳಗ್ಗೆ 5.30ಕ್ಕೆ ಇಹಲೋಕ ತ್ಯಜಿಸಿದ್ದರು. 39 ವರ್ಷದ ಸತೀಶ್‌ಗೆ ತಂದೆ, ಪತ್ನಿ, ಇಬ್ಬರು ಮಕ್ಕಳು ಇದ್ದಾರೆ.

    ಅಂತಿಮ ಸಂಸ್ಕಾರ: ಸೋಮವಾರ ಮಧ್ಯಾಹ್ನ 3 ಗಂಟೆ ವೇಳೆಗೆ ಸ್ವಗ್ರಾಮಕ್ಕೆ ಆಗಮಿಸಿದ ಪಾರ್ಥಿವ ಶರೀರವನ್ನು ಗ್ರಾಮದಲ್ಲಿ ಮೆರವಣಿಗೆ ನಡೆಸಲಾಯಿತು. ಶ್ರದ್ಧಾಂಜಲಿ ಸಭೆಯಲ್ಲಿ ಜಿಲ್ಲಾಡಳಿತ ಅಧಿಕಾರಿಗಳು, ಗಣ್ಯರು ಹಾಗೂ ಸಾರ್ವಜನಿಕರು ಅಂತಿಮ ದರ್ಶನ ಪಡೆದರು. ಬಳಿಕ ಸಕಲ ಗೌರವಗಳೊಂದಿಗೆ ಅಂತಿಮ ಸಂಸ್ಕಾರ ನೆರವೇರಿಸಲಾಯಿತು.

    ಅಂತಿಮ ದರ್ಶನ ಪಡೆದ ಜಿಲ್ಲಾ ಉಸ್ತುವಾರಿ ಸಚಿವ ಡಾ.ಕೆ.ಸುಧಾಕರ್, ದೇಶದ ರಕ್ಷಣೆಗಾಗಿ ಹಗಲಿರುಳು ದುಡಿಯುವ ಯೋಧರು ಈ ದೇಶದ ಆಸ್ತಿ. ಅಂತಹ ಯೋಧನ ಸಾವಿನಿಂದ ಈ ದೇಶ ಹಾಗೂ ಅವರ ಕುಟುಂಬಕ್ಕೆ ಅಪಾರ ನಷ್ಟವಾಗಿದೆ ಎಂದು ವಿಷಾದ ವ್ಯಕ್ತಪಡಿಸಿದರು. ಬಳಿಕ ಯೋಧನ ಕುಟುಂಬಸ್ಥರಿಗೆ ಸಾಂತ್ವನ ಹೇಳಿ ವೈಯಕ್ತಿಕವಾಗಿ 2 ಲಕ್ಷ ರೂ. ಆರ್ಥಿಕ ನೆರವು ನೀಡಿದ್ದಲ್ಲದೆ, ಮುಂದೆಯೂ ಆಸರೆಯಾಗುವ ಅಭಯ ನೀಡಿದರು.

    ಜಿಲ್ಲಾಧಿಕಾರಿ ಲತಾ, ಶಾಸಕ ಎನ್.ಎಚ್.ಶಿವಶಂಕರರೆಡ್ಡಿ, ಉದ್ಯಮಿ ಕೆ.ಎಚ್.ಪುಟ್ಟಸ್ವಾಮಿಗೌಡ, ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು, ಮುಖಂಡರು ಅಂತಿಮ ದರ್ಶನ ಪಡೆದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts