ಹೊಸನಗರ: ಬೇಸಿಗೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲಾದ್ಯಂತ ವಿದ್ಯುತ್ ವ್ಯತ್ಯಯ ಆರಂಭವಾಗಿದೆ ಎಂಬ ದೂರು ಬಂದ ಹಿನ್ನೆಲೆಯಲ್ಲಿ, ಜಿಲ್ಲಾ ಮಟ್ಟದ ಅಧಿಕಾರಿಗಳ ಜತೆ ಸಭೆ ಕರೆಯಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಹೇಳಿದರು.
ಗೋರನಗದ್ದೆ ನಿವಾಸಿ, ಯೋಧ ಜಿ.ಎಸ್.ಮಂಜುನಾಥ್ ಅವರ ನಿವಾಸಕ್ಕೆ ಭೇಟಿ ನೀಡಿದ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮೆಸ್ಕಾಂ ಎಂಡಿ ಜತೆ ಈ ಬಗ್ಗೆ ಚರ್ಚಿಸಿ, ಸಮಸ್ಯೆಗಳ ಶೀಘ್ರ ಪರಿಹಾರಕ್ಕೆ ಅಗತ್ಯ ಕ್ರಮ ಕೈಗೊಳ್ಳಲು ತೀರ್ಮಾನಿಸಿದ್ದೇನೆ ಎಂದರು.
ಸರ್ಕಾರದ ಹಲವು ಗ್ಯಾರಂಟಿಗಳ ಅನುಷ್ಠಾನದ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಅಭಿವೃದ್ಧಿಯ ಕಾರ್ಯಗಳು ಮಂದಗತಿಯಲ್ಲಿ ಸಾಗಿದ್ದವು. ಆದರೆ ಪ್ರಸಕ್ತ ಸಾಲಿನ ಬಜೆಟ್ ನಂತರದಲ್ಲಿ ಅಭಿವೃದ್ಧಿ ಕಾರ್ಯಗಳಿಗೆ ಹೆಚ್ಚಿನ ಅನುದಾನ ಬಿಡುಗಡೆ ಆಗಲಿದೆ ಎಂದು ತಿಳಿಸಿದರು.
ಭದ್ರಾವತಿ ತಾಲೂಕಿನಲ್ಲಿ ಅಕ್ರಮ ಮರಳು ಗಣಿಗಾರಿಕೆ ಅಡ್ಡೆ ಮೇಲೆ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಮಹಿಳಾ ಅಧಿಕಾರಿಯೋರ್ವರು ದಾಳಿ ನಡೆಸಿದಾಗ ಕರ್ತವ್ಯಕ್ಕೆ ಅಡ್ಡಿಪಡಿಸಿದ ಪ್ರಕರಣ ಕುರಿತ ಪ್ರಶ್ನೆಗೆ ಉತ್ತರಿಸಿದ ಸಚಿವರು, ಸರ್ಕಾರಿ ಅಧಿಕಾರಿಗಳನ್ನು ರಕ್ಷಣೆ ಮಾಡುವುದು ಸರ್ಕಾರದ ಆದ್ಯ ಕರ್ತವ್ಯ ಹಾಗೂ ಜವಾಬ್ದಾರಿ. ಅದರಲ್ಲೂ ಓರ್ವ ಮಹಿಳಾ ಅಧಿಕಾರಿ ಪ್ರಕರಣಕ್ಕೆ ಸರ್ಕಾರ ಹೆಚ್ಚಿನ ಒತ್ತು ನೀಡಬೇಕು. ಪ್ರಕರಣಕ್ಕೆ ಸಂಬಂಧಿಸಿ ಈಗಾಗಲೇ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. ಇಂಥ ವಿಚಾರಗಳಲ್ಲಿ ಯಾವುದೇ ರಾಜಿ ಇಲ್ಲ ಎಂದು ಹೇಳಿದರು.
ಕಾಂಗ್ರೆಸ್ ಜಿಲ್ಲಾಧ್ಯಕ್ಷ ಆರ್.ಪ್ರಸನ್ನಕುಮಾರ್, ಜಿಪಂ ಮಾಜಿ ಅಧ್ಯಕ್ಷ ಕಲಗೋಡು ರತ್ನಾಕರ, ಪ್ರಮುಖರಾದ ಬಂಡಿ ರಾಮಚಂದ್ರ, ಚಂದ್ರಮೌಳಿ, ಬಿ.ಜಿ.ನಾಗರಾಜ್, ಸದಾಶಿವ ಶ್ರೇಷ್ಠಿ, ಅಮೀರ್ ಹಂಜಾ, ಗುರುರಾಜ್, ಅಶ್ವಿನ್‌ಕುಮಾರ್, ಏರಗಿ ಉಮೇಶ್ ಇದ್ದರು.
ವಿದ್ಯುತ್ ವ್ಯತ್ಯಯ ಸಮಸ್ಯೆ ಬಗೆಹರಿಸುವೆ

You Might Also Like
ಬೇಸಿಗೆಯಲ್ಲಿ ಹೆಚ್ಚೆಚ್ಚು ಎಳನೀರು ಕುಡಿಯುತ್ತೀರಾ? ಈ ಅಡ್ಡಪರಿಣಾಮಗಳಿವೆ ಎಚ್ಚರ! ಇವರಂತೂ ಕುಡಿಯಲೇಬಾರದು… Coconut water
Coconut water : ದಿನದಿಂದ ದಿನಕ್ಕೆ ಬೇಸಿಗೆಯ ಬಿಸಿ ಹೆಚ್ಚುತ್ತಿದೆ. ಮನೆಯಿಂದ ಹೊರಬಂದರೆ ಸಾಕು ಸೂರ್ಯನ…
ಹಣದ ಸಮಸ್ಯೆಗಳಿಂದ ಮುಕ್ತಿ ಪಡೆಯಲು 1 ದಿನ: ಈ ದಿವಸ ನೀವಿದನ್ನು ಮಾಡಿದ್ರೆ ದುಡ್ಡಿನ ತೊಂದರೆ ಮಾಯ! Money Problems
Money Problems : ಸಾಮಾನ್ಯವಾಗಿ ಪ್ರತಿಯೊಬ್ಬರ ಜೀವನದಲ್ಲಿ ಹಣವು ಪ್ರಮುಖ ಪಾತ್ರ ವಹಿಸುತ್ತದೆ. ಹಣದ ಬೇಡಿಕೆಯು…
ಬೇಸಿಗೆಯ ಆರೋಗ್ಯಕ್ಕಾಗಿ ಇವುಗಳಿಗೆ ವಿದಾಯ ಹೇಳಿ! ಇಲ್ಲದಿದ್ದರೆ ಅನಾರೋಗ್ಯಕ್ಕೊಳಗಾಗುವುದು ಖಂಡಿತ Summer Foods
Summer Foods : ಬೇಸಿಗೆ ಕಾಲ ಆರಂಭವಾಗುತ್ತಿದ್ದಂತೆ ದೇಹದ ಉಷ್ಣತೆಯು ಸ್ವಾಭಾವಿಕವಾಗಿ ಹೆಚ್ಚಾಗುತ್ತದೆ. ಆದ್ದರಿಂದ ದೇಹವನ್ನು…