More

    ಗ್ರಾಮ ಪಂಚಾಯಿತಿ ಮಟ್ಟದಲ್ಲೇ ನೀರಿನ ಸಮಸ್ಯೆ ಬಗೆಹರಿಸಿ

    ಎನ್.ಆರ್.ಪುರ: ತಾಲೂಕಿನ ಎಲ್ಲಾ ಗ್ರಾಪಂಗಳಲ್ಲೂ ಗ್ರಾಪಂ ಹಂತದಲ್ಲೇ ಕುಡಿಯುವ ನೀರಿನ ಸಮಸ್ಯೆ ಬಗೆಹರಿಸಲು ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಇಒ ಎಚ್.ಡಿ.ನವೀನ್‌ಕುಮಾರ್ ಹೇಳಿದರು.
    ಬುಧವಾರ ತಾಪಂ. ಸಾಮರ್ಥ್ಯ ಸೌಧದಲ್ಲಿ ನಡೆದ ಕುಡಿಯುವ ನೀರು ಮತ್ತು ಬರ ಕುರಿತ ಸಭೆಯಲ್ಲಿ ಮಾತನಾಡಿ, ಸದ್ಯ ತಾಲೂಕಿನಲ್ಲಿ ಕುಡಿಯುವ ನೀರಿನ ಸಮಸ್ಯೆ ಇಲ್ಲ. ಆದರೆ ಮುಂದೆ ಮಳೆಯಾಗದಿದ್ದರೆ ತೀವ್ರ ಸಮಸ್ಯೆ ಎದುರಾಗಲಿದೆ. ನೀರಿನ ಸಮಸ್ಯೆಯಾಗುವ ಗ್ರಾಮಗಳು, ಪರ್ಯಾಯವಾಗಿ ಹತ್ತಿರದಲ್ಲಿರುವ ಖಾಸಗಿ ಬೋರ್‌ವೆಲ್ ಮಾಲೀಕರ ಮಾಹಿತಿ ಸಂಗ್ರಹಿಸಿಡಬೇಕು. ಗ್ರಾಮಸ್ಥರಿಗೆ ಕುಡಿಯುವ ನೀರಿಗೆ ತೊಂದರೆಯಾಗದಂತೆ ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕು ಎಂದರು.
    ಗ್ರಾಮಗಳಲ್ಲಿ ಕುಡಿಯುವ ನೀರಿನ ಪ್ರಮಾಣ ಕಡಿಮೆಯಾಗಿದ್ದು, ಖಾಸಗಿ ಬೋರ್‌ವೆಲ್ ಕೂಡ ಲಭ್ಯವಿಲ್ಲದಿದ್ದರೆ ಟ್ಯಾಂಕರ್ ಮೂಲಕವೇ ನೀರನ್ನು ಒದಗಿಸುವ ಪರಿಸ್ಥಿತಿ ನಿರ್ಮಾಣವಾಗ ಬಹುದಾದ ಸಮಸ್ಯೆಗಳನ್ನು ಗಮನಕ್ಕೆ ತರಬೇಕು. ಅದಕ್ಕೆ ಎಲ್ಲ ರೀತಿಯ ದಾಖಲೆಗಳನ್ನು ಸಲ್ಲಿಸಿದರೆ ಅಂತಹ ಪ್ರಸ್ತಾವನೆಯನ್ನು ತಹಸೀಲ್ದಾರ್‌ಗೆ ಸಲ್ಲಿಸಲಾಗುವುದು. ನಂತರ ಟ್ಯಾಂಕರ್ ಮೂಲಕ ಅಥವಾ ಖಾಸಗಿ ಬೋರ್‌ನಿಂದ ನೀರು ಪಡೆಯಲು ತಹಸೀಲ್ದಾರ್ ಅನಮತಿ ನೀಡುತ್ತಾರೆ ಗ್ರಾಮಗಳ ನೀರುಗಂಟಿಗಳೊಂದಿಗೆ ಪ್ರತಿನಿತ್ಯ ಸಂಪರ್ಕದಲ್ಲಿದ್ದು, ನೀರಿನ ಸಮಸ್ಯೆಗಳ ಬಗ್ಗೆ ಚರ್ಚಿಸುತ್ತಿರಬೇಕು ಎಂದು ಸೂಚಿಸಿದರು.
    ಯಾವುದೇ ಕಾರಣಕ್ಕೂ ನೀರಿನ ಸಮಸ್ಯೆಗಳು ದೊಡ್ಡದಾಗದ ಹಾಗೆ ನಿಮ್ಮ ಹಂತದಲ್ಲೇ ಬಗೆಹರಿಸಿ, ನಿಮ್ಮ ಹಂತದಲ್ಲಿ ಆಗದಿದಲ್ಲಿ ನಮಗೆ ಪತ್ರಿಸಿ, ನಂತರ ಸಂಬಂಧಪಟ್ಟ ಅಧಿಕಾರಿ, ಇಲಾಖೆಗಳ ಗಮನಕ್ಕೆ ತಂದು ಶೀಘ್ರ ಪರಿಹಾರ ಕಂಡುಕೊಳ್ಳಬೇಕು ಎಂದು ಪಿಡಿಒಗಳಿಗೆ ತಿಳಿಸಿದರು.
    ಕಸಬಾ ಹೋಬಳಿ ಕಂದಾಯ ನಿರೀಕ್ಷಕ ಎಚ್.ಮಂಜುನಾಥ್, ಬಾಳೆಹೊನ್ನೂರು ಹೋಬಳಿ ಕಂದಾಯ ನಿರೀಕ್ಷಕ ಮಂಜುನಾಥ್, ಇಂಜಿನಿಯರ್ ಅಕ್ಷತ್ ಸಾಗರ್ ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts