ಆಧುನಿಕ ತಂತ್ರಜ್ಞಾನದಿಂದ ಕೃಷಿ ಸಮಸ್ಯೆಗೆ ಮುಕ್ತಿ

gan-4
Published on

ಗಂಗೊಳ್ಳಿ: ಕೃಷಿಯಲ್ಲಿ ಅನೇಕ ಸುಧಾರಣೆಗಳಾಗಿದ್ದರೂ ಕೃಷಿ ಕ್ಷೇತ್ರದಲ್ಲಿ ಸಮಸ್ಯೆಗಳು ಹೆಚ್ಚಾಗುತ್ತಲೇ ಇದೆ. ಕೃಷಿಕರು ಆಧುನಿಕ ತಂತ್ರಜ್ಞಾನ ಅಳವಡಿಸಿಕೊಂಡರೆ ಸಮಸ್ಯೆಗಳನ್ನು ಕಡಿಮೆ ವಾಡಬಹುದು. ಭತ್ತ, ಅಡಕೆ ಹಾಗೂ ತೆಂಗಿನ ಮರಗಳಿಗೆ ಬಾಧಿಸುವ ರೋಗ ಮತ್ತು ಕೀಟಬಾಧೆ ನಿಯಂತ್ರಿಸಲು ವೈಜ್ಞಾನಿಕ ಹತೋಟಿ ಕ್ರಮ ಅನುಸರಿಸಬೇಕು ಎಂದು ಕೀಟಶಾಸ್ತ್ರ ಪ್ರಾಧ್ಯಾಪಕ ಡಾ.ರೇವಣ್ಣ ರೇವಣ್ಣನವರ್ ಹೇಳಿದರು.

ಶಿವಮೊಗ್ಗ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಐ.ಸಿ.ಎ.ಆರ್. ಕೃಷಿ ವಿಜ್ಞಾನ ಕೇಂದ್ರ ಉಡುಪಿ, ಜಿಲ್ಲಾ ಪಂಚಾಯಿತಿ, ಕೃಷಿ ಇಲಾಖೆ, ತೋಟಗಾರಿಕೆ ಇಲಾಖೆ ಹಾಗೂ ಗಂಗೊಳ್ಳಿ ಗ್ರಾಮ ಪಂಚಾಯಿತಿ ಸಹಯೋಗದೊಂದಿಗೆ ಗಂಗೊಳ್ಳಿ ಗ್ರಾಪಂ ಸಭಾಂಗಣದಲ್ಲಿ ಗುರುವಾರ ನಡೆದ ಪೂರ್ವಮುಂಗಾರು ವಿಕಸಿತ ಕೃಷಿ ಸಂಕಲ್ಪ ಅಭಿಯಾನ ಕಾರ್ಯಕ್ರಮದಲ್ಲಿ ಮಾತನಾಡಿದರು.

ಕೃಷಿ ವಿಜ್ಞಾನ ಕೇಂದ್ರದ ವಿಜ್ಞಾನಿ ಭೂಮಿಕಾ ಎಚ್.ಆರ್.ಮಾತನಾಡಿ, ವಿಜ್ಞಾನಿಗಳನ್ನೊಳಗೊಂಡ ನಾಲ್ಕು ತಂಡ ಉಡುಪಿ ಜಿಲ್ಲೆಯ 155 ಗ್ರಾಮ ಪಂಚಾಯಿತಿಗಳಿಗೆ ತೆರಳಿ ಅಲ್ಲಿನ ರೈತರಿಗೆ ಕೃಷಿ ಮತ್ತು ಕೃಷಿಗೆ ಪೂರಕವಾದ ವಾಹಿತಿ ನೀಡಲು ಈ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದರು.

ಗಂಗೊಳ್ಳಿ ಗ್ರಾಪಂ ಅಧ್ಯಕ್ಷೆ ಜಯಂತಿ ಖಾರ್ವಿ ಅಧ್ಯಕ್ಷತೆ ವಹಿಸಿದ್ದರು. ಗ್ರಾಪಂ ಉಪಾಧ್ಯಕ್ಷ ತಬ್ರೇಜ್, ಕೃಷಿ ಇಲಾಖೆಯ ಗಜೇಂದ್ರ, ಕೃಷಿ ಸಖಿ ವಂದನಾ ಶೇರುಗಾರ್ ಮೊದಲಾದವರು ಉಪಸ್ಥಿತರಿದ್ದರು. ಗ್ರಾಪಂ ಸಿಬ್ಬಂದಿ ನಾರಾಯಣ ಶ್ಯಾನುಭಾಗ್ ಸ್ವಾಗತಿಸಿ, ನಿರೂಪಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net