More

    ರಾಮಮಂದಿರ ನಿರ್ಮಾಣ ಮಾಡಿದರೆ ಕರೊನಾ ಸೋಂಕು ನಿರ್ಮೂಲನೆ ಆಗತ್ತಾ?; ಶರದ್​ ಪವಾರ್​ ವ್ಯಂಗ್ಯ

    ಮುಂಬೈ: ಅಯೋಧ್ಯೆಯ ರಾಮಮಂದಿರ ನಿರ್ಮಾಣಕ್ಕೆ ಭೂಮಿಪೂಜೆಯ ದಿನಾಂಕ ನಿಗದಿಯಾಗಿದೆ. ಆಗಸ್ಟ್​ 5ರಂದು ನಡೆಯಲಿರುವ ಈ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಭಾಗವಹಿಸುತ್ತಾರೆ ಎಂದು ಮೂಲಗಳು ತಿಳಿಸಿವೆ.

    ಈಗ ಎನ್​ಸಿಪಿ ಮುಖ್ಯಸ್ಥ ಶರದ್​ ಪವಾರ್​ ಅವರು ಇದೇ ವಿಚಾರವಾಗಿ ಪ್ರಧಾನಿ ನರೇಂದ್ರ ಮೋದಿಯವರ ಬಗ್ಗೆ ವ್ಯಂಗ್ಯವಾಡಿದ್ದಾರೆ.
    ಕೆಲವರು ರಾಮಮಂದಿರ ನಿರ್ಮಾಣ ಮಾಡಿದರೆ ಕೊವಿಡ್​-19 ಸಾಂಕ್ರಾಮಿಕ ರೋಗದಿಂದ ಮುಕ್ತಿ ಪಡೆಯಬಹುದು ಎಂದು ಭಾವಿಸಿದ್ದಾರೆ ಎಂದು ಶರದ್​ ಪವಾರ್​ ನೀಡಿರುವ ಹೇಳಿಕೆ ವಿವಾದವನ್ನೂ ಸೃಷ್ಟಿಸಿದೆ. ಇದನ್ನೂ ಓದಿ: ವರ್ಷಾಂತ್ಯವರೆಗೆ ಶಾಲಾ- ಕಾಲೇಜು ಆರಂಭ ಅನುಮಾನ…? ಆನ್​​ಲೈನ್​ ಕ್ಲಾಸ್​ಗಳೇ ಅನಿವಾರ್ಯ

    ಇಲ್ಲಿ ಕೆಲವರು ರಾಮಮಂದಿರ ನಿರ್ಮಾಣ ಮಾಡಿದ ಕೂಡಲೇ ಕರೊನಾ ವೈರಸ್​ ನಿರ್ಮೂಲನೆ ಆಗುತ್ತದೆ ಎಂದು ಭಾವಿಸಿದಂತಿದೆ. ಅದಕ್ಕಾಗಿಯೇ ಈಗ ಭೂಮಿಪೂಜೆಯಂತಹ ಯೋಜನೆಯನ್ನು ಹಾಕಿಕೊಂಡಿರಬಹುದು..ನನಗೆ ಗೊತ್ತಿಲ್ಲ ಎಂದು ಟೀಕಿಸಿದ್ದಾರೆ.
    ನನ್ನ ಅಭಿಪ್ರಾಯದಲ್ಲಿ ಸದ್ಯದ ಮಟ್ಟಿಗೆ ಕರೊನಾ ವೈರಸ್ ಬಹುದೊಡ್ಡ ಸಮಸ್ಯೆ. ಸೋಂಕು ನಿಯಂತ್ರಣಕ್ಕೆ ತ್ವರಿತವಾಗಿ ಕ್ರಮಗಳನ್ನು ತೆಗೆದುಕೊಳ್ಳಬೇಕಾಗಿದೆ. ಕೇಂದ್ರ ಮತ್ತು ರಾಜ್ಯಸರ್ಕಾರಗಳು ಈಗ ಬೇರೆಲ್ಲವನ್ನೂ ಬದಿಗಿಟ್ಟು ಕರೊನಾ ಹೋಗಲಾಡಿಸುವ ಕ್ರಮಗಳನ್ನು ಕೈಗೊಳ್ಳುವತ್ತ ಗಮನ ಹರಿಸಬೇಕು ಎಂದು ಶರದ್​ ಪವಾರ್​ ವಾಗ್ದಾಳಿ ನಡೆಸಿದ್ದಾರೆ.

    ಆಗಸ್ಟ್​ 5ರಂದು ಬೆಳಗ್ಗೆ 11 ಗಂಟೆಗೆ ಅಯೋಧ್ಯೆಗೆ ತೆರಳಲಿದ್ದು, ಮಧ್ಯಾಹ್ನ 1.10ರವರೆಗೆ ಅಲ್ಲಿಯೇ ಇರಲಿದ್ದಾರೆ ಎಂದು ಉನ್ನತ ಮೂಲಗಳಿಂದ ಮಾಹಿತಿ ಸಿಕ್ಕಿದೆ. ಪ್ರಧಾನಿ ಹುದ್ದೆಗೆ ಏರಿದ ಬಳಿಕ ಇದೇ ಮೊದಲ ಬಾರಿಗೆ ಮೋದಿಯವರು ಅಯೋಧ್ಯೆ ಮತ್ತು ರಾಮಮಂದಿರ ಇರುವ ಸ್ಥಳಕ್ಕೆ ಭೇಟಿ ನೀಡುತ್ತಿದ್ದಾರೆ. (ಏಜೆನ್ಸೀಸ್​)

    VIDEO: ಕೀಟನಾಶಕ ಕದ್ದವನಿಗೆ ಹಿಗ್ಗಾಮುಗ್ಗಾ ಹೊಡೆದ ಜನರು; ಅವನೊಬ್ಬ ಮದ್ಯವ್ಯಸನಿ ಎಂದ ಪೊಲೀಸರು

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts