ನೇಣು ಹಾಕಿಕೊಂಡು ಆತ್ಮಹತ್ಯೆ
ಸೋಮವಾರಪೇಟೆ: ಇಲ್ಲಿಗೆ ಸಮೀಪದ ಬಜೆಗುಂಡಿ ಗ್ರಾಮದಲ್ಲಿ ವ್ಯಕ್ತಿಯೊಬ್ಬ ಶುಕ್ರವಾರ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.


ಖಾಸಗಿ ಸಂಸ್ಥೆಯ ಮೊಬೈಲ್ ಟವರ್‌ನಲ್ಲಿ ಕೆಲಸ ನಿರ್ವಹಿಸುತ್ತಿದ್ದ ಕಾರ್ಮಿಕ ಮಹದೇವಸ್ವಾಮಿ (41) ಮೃತರು. ಮನೆಯಲ್ಲಿ ಯಾರು ಇಲ್ಲದ ಸಮಯದಲ್ಲಿ ನೇಣು ಹಾಕಿಕೊಂಡಿದ್ದಾರೆ. ಮೃತ ಮಹದೇವಸ್ವಾಮಿ ಕಿಡ್ನಿ ಸಂಬಂಧಿತ ಕಾಯಿಲೆಯಿಂದ ಬಳಲುತ್ತಿರುವುದಲ್ಲದೆ, ಕೆಲವು ವ್ಯಕ್ತಿಗಳು ತನಗೆ ನೀಡಬೇಕಾಗಿದ್ದ ಹಣವನ್ನು ಹಿಂದಿರುಗಿಸಲು ಸತಾಯಿಸುತ್ತಿದ್ದರಿಂದ ಖಿನ್ನತೆಗೆ ಒಳಗಾಗಿದ್ದರು ಎಂದು ಮೃತರ ಪತ್ನಿ ಆರ್. ವನಿತಾ ಪಟ್ಟಣದ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.