More

    ಸೋ.ಪೇಟೆ ಪಪಂಗೆ 3.16 ಲಕ್ಷ ರೂ. ಉಳಿತಾಯ ಬಜೆಟ್

    ಸೋಮವಾರಪೇಟೆ: ಪಟ್ಟಣ ಪಂಚಾಯಿತಿ 2024-25ನೇ ಸಾಲಿಗೆ 3.16 ಲಕ್ಷ ರೂ. ಉಳಿತಾಯ ಬಜೆಟ್ ಮಂಡಿಸಲಾಯಿತು.

    ಪಟ್ಟಣ ಪಂಚಾಯಿತಿ ಸಭಾಂಗಣದಲ್ಲಿ ತಹಸೀಲ್ದಾರ್ ನವೀನ್‌ಕುಮಾರ್ ಅಧ್ಯಕ್ಷತೆಯಲ್ಲಿ ಗುರುವಾರ ಆಯೋಜಿಸಿದ್ದ ಆಯವ್ಯಯ ಸಭೆಯಲ್ಲಿ ಪಂಚಾಯಿತಿ ಮುಖ್ಯಾಧಿಕಾರಿ ನಾಚಪ್ಪ ಬಜೆಟ್ ಮಂಡಿಸಿದರು.

    ವಿವಿಧ ಮೂಲಗಳಿಂದ ಒಟ್ಟು 11.04 ಕೋಟಿ ರೂ. ಆದಾಯ ನಿರೀಕ್ಷೆ ಮಾಡಲಾಗಿದ್ದು, 11.01 ಕೋಟಿ ರೂ., ಖರ್ಚಿನ ಅಂದಾಜು ಮಾಡಲಾಗಿದೆ. ಪಟ್ಟಣದ ಜನರಿಗೆ ಉತ್ತಮ ಮೂಲ ಸೌಕರ್ಯ ಒದಗಿಸುವುದು ಮತ್ತು ಪಂಚಾಯಿತಿಯನ್ನು ಆರ್ಥಿಕವಾಗಿ ಸದೃಢಗೊಳಿಸುವುದು, ಅದಕ್ಕೆ ತಕ್ಕ ಆದಾಯ ಮೂಲಗಳಾದ ತೆರಿಗೆ, ವಾಣಿಜ್ಯ ಮಳಿಗೆ ಬಾಡಿಗೆ, ನೀರಿನ ತೆರಿಗೆ, ಉದ್ದಿಮೆ ಪರವಾನಗಿ, ಮಾರುಕಟ್ಟೆ ಬಾಡಿಗೆಗಳು ಹಾಗೂ ಇತರ ತೆರಿಗೆಗಳನ್ನು ಸಂಗ್ರಹಿಸಲಾಗುವುದು ಎಂದು ನಾಚಪ್ಪ ವಿವರಿಸಿದರು.

    ಸರ್ಕಾರದ ಎಸ್‌ಎಫ್‌ಸಿ, 15ನೇ ಹಣಕಾಸು ಯೋಜನೆಯ ಅನುದಾನ ನಿರೀಕ್ಷೆ ಮಾಡಲಾಗಿದೆ. ರಸ್ತೆ, ಚರಂಡಿ ನಿರ್ಮಾಣ, ಬೀದಿ ದೀಪ ಅಳವಡಿಕೆ, ನೀರು ವಿತರಣೆ, ಒಳಚರಂಡಿ ವ್ಯವಸ್ಥೆ, ವಾಣಿಜ್ಯ ಮಳಿಗೆಗಳ ನಿರ್ಮಾಣ, ಸ್ಥಿರಾಸ್ತಿ ನಿರ್ಮಾಣಕ್ಕೆ ಒತ್ತು ನೀಡಲಾಗುವುದು ಎಂದು ನಾಚಪ್ಪ ತಿಳಿಸಿದರು.ಪಂಚಾಯಿತಿ ಸದಸ್ಯರಾದ ಜಯಂತಿ ಶಿವಕುಮಾರ್, ಜೀವನ್, ಶೀಲಾ ಡಿಸೋಜಾ, ಪಿ.ಕೆ. ಚಂದ್ರು, ಬಿ.ಆರ್.ಮಹೇಶ್, ಮೋಹಿನಿ, ಶುಭಕರ, ಬಿ.ಸಿ.ವೆಂಕಟೇಶ್, ನಾಗರತ್ನ ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts