More

    ಕಣ್ಣಿನ ಪೊರೆ ಪತ್ತೆಗೆ ಸಮೀಕ್ಷೆ

    ಸಂಡೂರು: ಐವತ್ತು ವರ್ಷ ಮೇಲ್ಪಟ್ಟವರ ಕಣ್ಣಿನ ಪೊರೆ ಪತ್ತೆ ಸಮೀಕ್ಷೆಯನ್ನು ತಾಲೂಕಿನಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಶಿವಪ್ಪ ಹೇಳಿದರು.
    ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಅಂಧತ್ವ ನಿಯಂತ್ರಣ ವಿಭಾಗ ತೋರಣಗಲ್‌ಘೆ 3ನೇ ವಾರ್ಡ್‌ನಲ್ಲಿ ಸೋಮವಾರ ಆಯೋಜಿಸಿದ್ದ ಕಣ್ಣಿನ ಪೊರೆ ಮುಕ್ತ ಭಾರತ ಅಭಿಯಾನ ಜಾಗೃತಿ ಕಾರ್ಯಕ್ರಮದಲ್ಲಿ ಮಾತನಾಡಿದರು.

    ಆಶಾ ಕಾರ್ಯಕರ್ತೆಯರು ಪ್ರತಿ ಮನೆಗೂ ಭೇಟಿ ನೀಡಿ, ಕಣ್ಣಿನ ಪೊರೆ ಬಂದವರ ಹೆಸರನ್ನು ನೋಂದಣಿ ಮಾಡಿಕೊಳ್ಳುತ್ತಾರೆ. ನಿಗದಿತ ದಿನ ಆರೋಗ್ಯ ಕೇಂದ್ರಗಳಲ್ಲಿ ಪ್ರಾಥಮಿಕ ತಪಾಸಣೆಗೆ ಒಳಪಡಿಸಲಾಗುವುದು. ಕಣ್ಣಿನ ಪೊರೆ ತೆಗೆಯಲು ಶಸ್ತ್ರ ಚಿಕಿತ್ಸೆಗೆ ನಿಗದಿತ ಆಸ್ಪತ್ರೆ ಹೋಗಲು ಸೂಚಿಸಲಾಗುವುದು. ಈ ಮೂಲಕ ಅಂಧತ್ವ ನಿವಾರಣೆ ಮಾಡುವ ಕಾರ್ಯ ಹಮ್ಮಿಕೊಳ್ಳಲಾಗಿದೆ. ದೃಷ್ಟಿ ದೋಷ ಉಳ್ಳವರಿಗೆ ಕನ್ನಡಕ ವಿತರಿಸುವ ವ್ಯವಸ್ಥೆಯನ್ನು ಇಲಾಖೆ ಮಾಡಲಿದೆ. ಅಂಧತ್ವ ನಿವಾರಣೆ ಮಹತ್ವಾಕಾಂಕ್ಷೆಯನ್ನು ಪ್ರಧಾನಿ ನರೇಂದ್ರ ಮೋದಿ ಹೊಂದಿದ್ದು, ಕಣ್ಣಿನ ಪೊರೆ ಮುಕ್ತ ಭಾರತ ಅಭಿಯಾನ ಕುರಿತು ಪ್ರತಿ ಗ್ರಾಮದಲ್ಲೂ ಜಾಗೃತಿ ಮೂಡಿಸಲಾಗುತ್ತಿದೆ ಎಂದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts