ನವದೆಹಲಿ: ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರನ್ನು ಬುಧವಾರ ದೆಹಲಿಯ ಗಂಗಾರಾಮ್ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.
ಉಸಿರಾಟ ಸಮಸ್ಯೆಯಿಂದ ಬಳಲುತ್ತಿರುವ ಸೋನಿಯಾ ಗಾಂಧಿ ಅವರ ಆರೋಗ್ಯದಲ್ಲಿ ಮಂಗಳವಾರ ಏರುಪೇರಾಗಿದೆ. ಹಾಗಾಗಿ ಸಾಮಾನ್ಯ ತಪಾಸಣೆಗಾಗಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ತಾಯಿ ಜತೆ ಪ್ರಿಯಾಂಕ ಗಾಂಧಿ ಆಸ್ಪತ್ರೆಗೆ ಆಗಮಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
Sad to know that senior @INCIndia leader Smt Sonia Gandhi is admitted to the hospital.
I wish her a speedy recovery & healthy return.
— Siddaramaiah (@siddaramaiah) January 4, 2023
ಕಾಂಗ್ರೆಸ್ನ ನಾಯಕಿ ಶ್ರೀಮತಿ ಸೋನಿಯಾ ಗಾಂಧಿ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂಬ ಸುದ್ದಿ ಕೇಳಿ ಬೇಸರವಾಯಿತು. ಅವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಮತ್ತು ಆರೋಗ್ಯವಾಗಿ ಮರಳಲಿ ಎಂದು ದೇವರದಲ್ಲಿ ಪ್ರಾರ್ಥಿಸುತ್ತೇನೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.
ರಾತ್ರಿ ಪಾಳಿಯ ಕೆಲಸ ಮುಗಿಸಿ ಬೆಳಗ್ಗೆ ಮನೆಗೆ ಬಂದ ಪೊಲೀಸ್ ಹೆಡ್ ಕಾನ್ಸ್ಟೇಬಲ್ ಹೃದಯಾಘಾತದಿಂದ ಸಾವು
ಆನೇಕಲ್ನಲ್ಲಿ ಈ ನಾಗರಹಾವಿನ ನಡೆಯೇ ವಿಚಿತ್ರ-ವಿಸ್ಮಯ! ಹಾವು ನೋಡಲು ಜನವೋ ಜನ