More

    ಸೋನಿಯಾ ಗಾಂಧಿ ವಿಚಾರಣೆ, ಡಿಸಿ ಕಚೇರಿಗೆ ಮುತ್ತಿಗೆ ಹಾಕಲೆತ್ನಿಸಿದ ಕಾಂಗ್ರೆಸ್ಸಿಗರ ಬಂಧನ

    ಶಿವಮೊಗ್ಗ: ಎಐಸಿಸಿ ನಾಯಕಿ ಸೋನಿಯಾ ಗಾಂಧಿ ಅವರನ್ನು ಇಡಿ(ಜಾರಿ ನಿರ್ದೇಶನಾಲಯ) ವಿಚಾರಣೆ ಒಳಪಡಿಸುತ್ತಿರುವುದನ್ನು ಖಂಡಿಸಿ ಜಿಲ್ಲಾ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದರು.
    ಕೆಪಿಸಿಸಿ ಕಾರ್ಯಾಧ್ಯಕ್ಷ ಧ್ರುವನಾರಾಯಣ್ ನೇತೃತ್ವದಲ್ಲಿ ಶಿವಪ್ಪ ನಾಯಕ ವೃತ್ತದಿಂದ ನೆಹರೂ ರಸ್ತೆ, ಬಾಲರಾಜ್ ಅರಸ್ ರಸ್ತೆ, ಮಹಾವೀರ ವೃತ್ತದ ಮಾರ್ಗವಾಗಿ ಡಿಸಿ ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿದ ಕಾರ್ಯಕರ್ತರು ಡಿಸಿ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದರು. ಈ ವೇಳೆ ನೂರಾರು ಮುಖಂಡರು ಮತ್ತು ಕಾರ್ಯಕರ್ತರನ್ನು ಪೊಲೀಸರು ಬಂಧಿಸಿ ಕರೆದೊಯ್ದರು.
    ನ್ಯಾಷನಲ್ ಹೆರಾಲ್ಡ್ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಕೇಂದ್ರ ಸರ್ಕಾರ ವಿನಾಕಾರಣ ಸೇಡಿನ ರಾಜಕಾರಣ ಮಾಡುತ್ತಿದೆ. ತನಿಖೆ ನೆಪದಲ್ಲಿ ಇಡಿಯನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ. ತಕ್ಷಣವೇ ಪ್ರಕರಣದಿಂದ ಸೋನಿಯಾಗಾಂಧಿ ಅವರನ್ನು ಮುಕ್ತಗೊಳಿಸಬೇಕು ಎಂದು ಪ್ರತಿಭನಾಕಾರರು ಆಗ್ರಹಿಸಿದರು.
    ಇಡಿ ಸೇರಿದಂತೆ ತನಿಖಾ ಸಂಸ್ಥೆಗಳನ್ನು ಮುಂದೆ ಬಿಟ್ಟು ಸೋನಿಯಾಗಾಂಧಿ ಮತ್ತು ರಾಹುಲ್ ಗಾಂಧಿ ಅವರನ್ನು ಹೆದರಿಸುವ ಕೆಲಸ ಬಿಜೆಪಿ ನಾಯಕರು ಮಾಡುತ್ತಿದ್ದಾರೆ. ಆದರೆ ಯಾವುದೇ ಸಂಸ್ಥೆ ವಿಚಾರಣೆ ನಡೆಸಿದರೂ ಹೆದರುವ ಪ್ರಶ್ನೆಯೇ ಇಲ್ಲ. ಇದರಿಂದ ಯಾವೊಬ್ಬ ಕಾರ್ಯಕರ್ತನೂ ಎದೆಗುಂದಬೇಕಿಲ್ಲ ಎಂದು ನಾಯಕರು ಧೈರ್ಯತುಂಬಿದರು.
    ಜಿಲ್ಲಾಧ್ಯಕ್ಷ ಎಚ್.ಎಸ್.ಸುಂದರೇಶ್, ಮಾಜಿ ಸಚಿವ ಕಿಮ್ಮನೆ ರತ್ನಾಕರ್, ಮಾಜಿ ಶಾಸಕರಾದ ಎಚ್.ಎಂ.ಚಂದ್ರಶೇಖರಪ್ಪ, ಕೆ.ಬಿ.ಪ್ರಸನ್ನಕುಮಾರ್, ಬೇಳೂರು ಗೋಪಾಲಕೃಷ್ಣ, ಮಾಜಿ ಎಂಎಲ್ಸಿ ಆರ್.ಪ್ರಸನ್ನಕುಮಾರ್,ಆರ್.ಎಂ.ಮಂಜುನಾಥಗೌಡ, ಮುಖಂಡರಾದ ಎನ್.ರಮೇಶ್, ವಿಜಯಕುಮಾರ್, ರಮೇಶ್ ಶಂಕರಘಟ್ಟ, ಸಿ.ಎಸ್.ಚಂದ್ರಭೂಪಾಲ್, ರಾಮೇಗೌಡ, ಶ್ರೀನಿವಾಸ ಕರಿಯಣ್ಣ, ಎಚ್.ಸಿ.ಯೋಗೇಶ್, ಇಸ್ಮಾಯಿಲ್ ಖಾನ್, ಅನಿತಾ ಕುಮಾರಿ, ವೇದಾ ವಿಜಯ್ಕುಮಾರ್, ಯಮುನಾ ರಂಗೇಗೌಡ ಮತ್ತಿತರರು ಉಪಸ್ಥಿತರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts