More

    ರಾಜ್ಯಸಭೆಗೆ ನಾಮಪತ್ರ ಸಲ್ಲಿಸಿದ ಸೋನಿಯಾ ಗಾಂಧಿ: ರಾಹುಲ್-ಪ್ರಿಯಾಂಕಾ ಸಾಥ್

    ರಾಜಸ್ಥಾನ: ಕಾಂಗ್ರೆಸ್‌ನ ಅಧಿನಾಯಕಿ ಸೋನಿಯಾ ಗಾಂಧಿ ಅವರು ಮುಂದಿನ ರಾಜ್ಯಸಭೆಗೆ ಬುಧವಾರ (ಫೆ.14) ರಂದು ನಾಮಪತ್ರ ಸಲ್ಲಿಸಿದ್ದಾರೆ. ಈ ಸಂದರ್ಭದಲ್ಲಿ ವೇಳೆ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ವಾದ್ರಾ ಉಪಸ್ಥಿತರಿದ್ದರು.

    ಇದನ್ನೂ ಓದಿ:ರಾಜ್ಯಸಭಾ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ ಕಾಂಗ್ರೆಸ್! ರಾಜಸ್ಥಾನದಿಂದ ಸೋನಿಯಾ ಸ್ಪರ್ಧೆ

    ಜೈಪುರದಿಂದ ನಾಮಪತ್ರ ಸಲ್ಲಿಸಿದ ಸೋನಿಯಾ ಜತೆ ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ವಾದ್ರಾ ಇದ್ದರು. ಫೆಬ್ರವರಿ 27ರಂದು ಚುನಾವಣೆ ನಡೆಯಲಿದ್ದು, ಫೆ.15 ನಾಮಪತ್ರ ಸಲ್ಲಿಸಲು ಕೊನೆಯ ದಿನ. ಕಳೆದ 25 ವರ್ಷಗಳಿಂದ ರಾಯ್ ಬರೇಲಿ ಕ್ಷೇತ್ರದಿಂದ ಸ್ಪರ್ಧೆ ಮಾಡುತ್ತಿದ್ದ ಸೋನಿಯಾ ಗಾಂಧಿ ಅವರು ಇದೇ ಪ್ರಥಮ ಬಾರಿಗೆ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧೆ ಮಾಡದಿರಲು ನಿರ್ಧರಿಸಿದ್ದಾರೆ.

    ರಾಜಸ್ಥಾನ ಅಥವಾ ಹಿಮಾಚಲ ಪ್ರದೇಶ ಯಾವುದಾದರು ಒಂದು ರಾಜ್ಯದಿಂದ ಸ್ಪರ್ಧಿಸಲು ತೀರ್ಮಾನಿಸಿದ್ದರು. ಈ ಪೈಕಿ ರಾಜಸ್ಥಾನ ಸುರಕ್ಷಿತ ಎಂಬ ತೀರ್ಮಾನಕ್ಕೆ ನಾಯಕರು ಬಂದಿದ್ದರಿಂದ ಕೊನೆಗೆ ಸೋನಿಯಾ ಅವರು ರಾಜಸ್ಥಾನ ಆಯ್ಕೆ ಮಾಡಿರುವುದಾಗಿ ವರದಿಯಾಗಿದೆ.
    1964 ಆಗಸ್​ನಿಂದ ರಿಂದ 1967 ಫೆಬ್ರವರಿ ರವರೆಗೆ ನೋನಿಯಾ ಗಾಂಧಿ ಅವರ ಅತ್ತೆ ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರು ರಾಜ್ಯಸಭೆ ಸದಸ್ಯರಾಗಿದ್ದರು.

    ಸೋನಿಯಾ ಗಾಂಧಿ ಅವರು 1999 ರಿಂದ ಲೋಕಸಭೆಯಲ್ಲಿ ರಾಯ್ ಬರೇಲಿಯನ್ನು ಪ್ರತಿನಿಧಿಸುತ್ತಿದ್ದಾರೆ. ಅವರು 2019 ರಲ್ಲಿ ಕಾಂಗ್ರೆಸ್ ಸಾಧನೆಯು ಅತ್ಯಂತ ಕೆಳಮಟ್ಟದಲ್ಲಿದ್ದಾಗಲೂ ಮತ್ತು ರಾಹುಲ್ ಗಾಂಧಿಯವರು ಉತ್ತರ ಪ್ರದೇಶದ ಅಮೇಥಿಯನ್ನು ಕಳೆದುಕೊಂಡಾಗಲೂ ಸಹ ಸೋನಿಯಾ ತಮ್ಮ ಕ್ಷೇತ್ರದಲ್ಲಿ ಗೆಲುವು ಸಾಧಿಸಿದ್ದರು. ಅಮೇಥಿ ಲೋಕಸಭೆ ಕ್ಷೇತ್ರದಲ್ಲಿ ಬಿಜೆಪಿ ಸಂಸದೆ ಸ್ಮೃತಿ ಇರಾನಿ ಗೆಲುವು ಸಾಧಿಸಿದ್ದರು.

    ಹಲವು ವರ್ಷಗಳಿಂದ ಪ್ರಿಯಾಂಕಾ ಗಾಂಧಿ ವಾದ್ರಾ ಅವರನ್ನು ಚುನಾವಣಾ ರಾಜಕೀಯಕ್ಕೆ ಕರೆತರುವ ಬಗ್ಗೆ ಮಾತುಕತೆಗಳು ನಡೆಯುತ್ತಲೇ ಇತ್ತು. ಅಂದ ಹಾಗೆ ಇದು ಸುರಕ್ಷಿತ ಸ್ಥಾನವೆಂದು ಪರಿಗಣಿಸಲಾಗಿದೆ. 1950 ರ ದಶಕದಿಂದಲೂ ಕಾಂಗ್ರೆಸ್ ಭದ್ರಕೋಟೆಯಾಗಿದ್ದ ಈ ಕ್ಷೇತ್ರವನ್ನು ಮೊದಲು ಆಕೆಯ ಅಜ್ಜ ಫಿರೋಜ್ ಗಾಂಧಿ ಪ್ರತಿನಿಧಿಸಿದ್ದರು.

    ಪ್ರಿಯಾಂಕಾ ಗಾಂಧಿ ವಾದ್ರಾ ಅವರು ರಾಜಕೀಯ ಕ್ಷೇತ್ರಕ್ಕೆ ಪ್ರವೇಶಿಸಿದಾಗ 2019 ರಲ್ಲಿ ಚುನಾವಣೆಯಲ್ಲಿ ಸ್ಪರ್ಧಿಸುತ್ತಾರೆ ಎಂದು ನಿರೀಕ್ಷಿಸಲಾಗಿತ್ತು. ವಾರಣಾಸಿಯಲ್ಲಿ ಪ್ರಧಾನಿ ಮೋದಿ ಅವರ ನಡುವೆ ಮುಖಾಮುಖಿಯಾಗಬಹುದು ಎಂದು ರಾಜಕೀಯ ವಲಯದಲ್ಲಿ ಭಾರೀ ಚರ್ಚೆಯಾಗಿತ್ತು.

    ಮನೆ ಮೇಲ್ಛಾವಣಿ ಉಚಿತ ವಿದ್ಯುತ್​ ಪ್ರಯೋಜನಾ ಪಡೆಯಲು pmsuryaghar.gov.in ಅರ್ಜಿ ಸಲ್ಲಿಸಿ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts