

ನವದೆಹಲಿ: ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ಹಾಜರಾಗುವಂತೆ ಜಾರಿ ನಿರ್ದೇಶನಾಲಾಯ ಸಮನ್ಸ್ ಜಾರಿ ಮಾಡಿದೆ.
ನ್ಯಾಷನಲ್ ಹೆರಾಲ್ಡ್ ಪತ್ರಿಕೆಯಲ್ಲಿನ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ಹಿಂದೆ ಹಲವು ಬಾರಿ ಹಾಜರಾಗಲು ಸೂಚಿಸಿದ್ದರೂ, ಒಂದಲ್ಲ ಒಂದು ಕಾರಣ ನೀಡಿ ಗೈರಾಗಿದ್ದ ಸೋನಿಯಾ ಗಾಂಧಿ ಅವರಿಗೆ ಈ ಬಾರಿ ಇಡಿ ಹಾಜರಾಗಲೇಬೇಕೆಂದು ಸೂಚಿಸಿದೆ.
ಜುಲೈ 21 ರಂದು ತಮ್ಮ ಮುಂದೆ ಹಾಜರಾಗಬೇಕೆಂದಿರುವ ಇಡಿ ಯಾವುದೇ ಕಾರಣ ನೀಡುವಂತಿಲ್ಲ ಎಂದೂ ಹೇಳಿದೆ. ಇದೇ ಪ್ರಕರಣದಲ್ಲಿ ಸಂಸದ ರಾಹುಲ್ ಗಾಂಧಿಯವರಿಗೆ ಜಾರಿ ನಿರ್ದೇಶನಾಲಯ ಆರು ದಿನಗಳ ಕಾಲ ವಿಚಾರಣೆ ನಡೆಸಿದೆ. ಕರೊನಾ ಕಾರಣದಿಂದ ಸೋನಿಯಾ ಗಾಂಧಿ ವಿಚಾರಣೆಗೆ ಹಾಜರಾಗಿರಲಿಲ್ಲ. (ಏಜೆನ್ಸೀಸ್)