More

    ನ್ಯಾಷನಲ್ ಹೆರಾಲ್ಡ್ ಕೇಸ್​: ಮೂರನೇ ಸುತ್ತಿನ ವಿಚಾರಣೆಗಾಗಿ ED ಕಚೇರಿಗೆ ಹಾಜರಾದ ಸೋನಿಯಾ ಗಾಂಧಿ

    ನವದೆಹಲಿ: ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯದಿಂದ ವಿಚಾರಣೆ ಎದುರಿಸುತ್ತಿರುವ ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ಅವರು ಇಂದು (ಜುಲೈ 27) ಮೂರನೇ ಸುತ್ತಿನ ವಿಚಾರಣೆಗಾಗಿ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿರುವ ಇಡಿ ಮುಖ್ಯ ಕಚೇರಿಗೆ ಆಗಮಿಸಿದ್ದಾರೆ.

    ಸುಮಾರು 11 ಗಂಟೆಗೆ ಮಗಳು ಪ್ರಿಯಾಂಕಾ ಗಾಂಧಿ ವಾದ್ರಾ ಜೊತೆಯಲ್ಲಿ ಸೋನಿಯಾ ಗಾಂಧಿ ಅವರು ಇಡಿ ಕಚೇರಿಗೆ ಆಗಮಿಸಿದರು. ಇದುವರೆಗೂ ಸುಮಾರು 8 ಗಂಟೆಗೂ ಅಧಿಕ ಕಾಲ ವಿಚಾರಣೆ ಎದುರಿಸಿರುವ ಸೋನಿಯಾ ಅವರು 60 ರಿಂದ 75 ಪ್ರಶ್ನೆಗಳಿಗೆ ಉತ್ತರ ನೀಡಿದ್ದಾರೆಂದು ತಿಳಿದುಬಂದಿದೆ. ಇಂದು ಮೂರನೇ ಸುತ್ತಿನ ವಿಚಾರಣೆಗೆ ಹಾಜರಾಗಿರುವ ಅವರಿಗೆ ಇಂದು ಸಹ 30 ರಿಂದ 40 ಪ್ರಶ್ನೆಗಳನ್ನು ಇಡಿ ಅಧಿಕಾರಿಗಳು ಕೇಳುತ್ತಾರೆಂದು ತಿಳಿದುಬಂದಿದೆ.

    ಒಂದು ಮೂಲಗಳ ಪ್ರಕಾರ ಸೋನಿಯಾ ಅವರು ಇಡಿ ಅಧಿಕಾರಿಗಳು ಕೇಳಿದ ಎಲ್ಲ ಪ್ರಶ್ನೆಗಳಿಗೂ ಸೂಕ್ತವಾದ ಉತ್ತರ ನೀಡಿದ್ದು, ಇಂದೇ ಅವರ ವಿಚಾರಣೆ ಅಂತ್ಯವಾಗಲಿದೆ ಎಂದು ಹೇಳಲಾಗುತ್ತಿದೆ. ಇನ್ನೊಂದೆಡೆ ಇಂದು ಸಹ ಕಾಂಗ್ರೆಸ್​ ಕಾರ್ಯಕರ್ತರು ದೆಹಲಿಯಲ್ಲಿ ಪ್ರತಿಭಟನೆ ಮುಂದುವರಿಸಿದ್ದಾರೆ.

    ಪ್ರಕರಣದ ಹಿನ್ನೆಲೆ: ಯಂಗ್ ಇಂಡಿಯನ್ ಪ್ರೈವೇಟ್ ಲಿಮಿಟೆಡ್‌ನಿಂದ ಅಸೋಸಿಯೇಟೆಡ್ ಜರ್ನಲ್ಸ್ ಲಿಮಿಟೆಡ್‌ನ ಅಕ್ರಮ ಹಣ ವರ್ಗಾವಣೆ ಕುರಿತು ಇಡಿ ತನಿಖೆ ನಡೆಸುತ್ತಿದೆ. ಈ ಸಂಸ್ಥೆಯಲ್ಲಿ ಸೋನಿಯಾ ಗಾಂಧಿ ಶೇ. 38 ರಷ್ಟು ಷೇರುಗಳನ್ನು ಹೊಂದಿದ್ದಾರೆ ಮತ್ತು ನಿರ್ದೇಶಕರಾಗಿದ್ದಾರೆ.

    ಜುಲೈ 21ರಂದು ಮೊದಲ ಸುತ್ತಿನ ವಿಚಾರಣೆ ಎದುರಿಸಿರುವ ಸೋನಿಯಾ ಗಾಂಧಿ, ನಿನ್ನೆ (ಜುಲೈ 26) ಎರಡನೇ ಸುತ್ತಿನ ವಿಚಾರಣೆಗೆ ಹಾಜರಾಗಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ರಾಹುಲ್ ಗಾಂಧಿ ಸಹ ಜಾರಿ ನಿರ್ದೇಶನಾಲಯದಿಂದ ವಿಚಾರಣೆಗೊಳಪಟ್ಟಿದ್ದಾರೆ. ಹೆಚ್ಚುವರಿ ನಿರ್ದೇಶಕಿ ಮೋನಿಕಾ ಶರ್ಮಾ ನೇತೃತ್ವದ ತಂಡವು ಸೋನಿಯಾ ಗಾಂಧಿ ಅವರನ್ನು ವಿಚಾರಣೆ ನಡೆಸುತ್ತಿದೆ.

    ಕಾಂಗ್ರೆಸ್ ಅಧಿನಾಯಕಿಯನ್ನ ವಿಚಾರಣೆಗೊಳಪಡಿಸಿರುವುದನ್ನ ಖಂಡಿಸಿ ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ನಾಯಕರು ದೆಹಲಿಯಲ್ಲಿ ಪ್ರತಿಭಟನೆ ನಡೆಸಿದರು. ದೆಹಲಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದ ಸಂದರ್ಭದಲ್ಲಿ ಕಾಂಗ್ರೆಸ್​​ನ 50 ಸಂಸದರು, ಮಲ್ಲಿಕಾರ್ಜುನ ಖರ್ಗೆ ಹಾಗೂ ರಾಹುಲ್ ಗಾಂಧಿ ಅವರನ್ನ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದು, ಠಾಣೆಗೆ ಕರೆದೊಯ್ಯಲಾಗಿತ್ತು. (ಏಜೆನ್ಸೀಸ್​)

    ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಬಂಧಿಸುವ ED ಅಧಿಕಾರವನ್ನು ಎತ್ತಿಹಿಡಿದ ಸುಪ್ರೀಂಕೋರ್ಟ್​

    VIDEO| ಬೆಳ್ಳಂಬೆಳಗ್ಗೆ ವಸತಿ ಶಾಲೆಗೆ ನುಗ್ಗಿದ ಒಂಟಿ ಸಲಗ: ಆತಂಕಕ್ಕೀಡಾದ ವಿದ್ಯಾರ್ಥಿಗಳು

    ಹೈದರಾಬಾದ್​ ಗ್ಯಾಂಗ್​ರೇಪ್​ ಕೇಸ್​: MLA ಪುತ್ರ ಸೇರಿದಂತೆ ನಾಲ್ವರು ಅಪ್ರಾಪ್ತ ಆರೋಪಿಗಳಿಗೆ ಜಾಮೀನು ಮಂಜೂರು

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts