More

  ಸೋನಿಯಾ, ಪ್ರಿಯಾಂಕಾ ಗಾಂಧಿಯನ್ನು ತಬ್ಬಿ ಸ್ವಾಗತಿಸಿದ ಬಾಂಗ್ಲಾ ಪ್ರಧಾನಿ ಶೇಖ್ ಹಸೀನಾ!

  ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಪ್ರಮಾಣವಚನ ಸಮಾರಂಭಕ್ಕೆ ಭಾನುವಾರ ದೆಹಲಿಗೆ ಆಗಮಿಸಿರುವ ಬಾಂಗ್ಲಾ ಪ್ರಧಾನಿ ಶೇಖ್ ಹಸೀನಾ ಅವರನ್ನು ಇಂದು ಕಾಂಗ್ರೆಸ್ ನಾಯಕರಾದ ಸೋನಿಯಾ ಗಾಂಧಿ, ಸಂಸದ ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ಭೇಟಿಯಾಗಿದ್ದಾರೆ.

  ಇದನ್ನೂ ಓದಿ: ಸಿಕ್ಕಿಂ ಮುಖ್ಯಮಂತ್ರಿ ತಮಾಂಗ್​ಗೆ ಅಭಿನಂದನೆ ಸಲ್ಲಿಸಿದ ಪ್ರಧಾನಿ ಮೋದಿ

  ಈ ವೇಳೆ ಗಾಂಧಿ ಕುಟುಂಬವನ್ನು ಆತ್ಮೀಯವಾಗಿ ಬರಮಾಡಿಕೊಂಡ ಬಾಂಗ್ಲಾ ಪ್ರಧಾನಿ ಶೇಖ್ ಹಸೀನಾ ಅವರು, ಸಂಸದ ರಾಹುಲ್ ಗಾಂಧಿ, ಸೋನಿಯಾ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿಯನ್ನು ತಬ್ಬಿಕೊಂಡು ಆತ್ಮೀಯವಾಗಿ ಸ್ವಾಗತಿಸಿದ್ದಾರೆ. ಹೌದು.. ನೆಹರು ಕುಟುಂಬಕ್ಕೂ ಬಾಂಗ್ಲಾದೇಶದ ಪ್ರಧಾನಿ ಶೇಖ್ ಹಸೀನಾ ಅವರ ಕುಟುಂಬಕ್ಕೂ ಬಹಳ ಆತ್ಮೀಯ ಒಡನಾಟವಿತ್ತು.

  ಪ್ರಧಾನಿ ಶೇಖ್ ಹಸೀನಾ ಅವರ ತಂದೆ ಮತ್ತು ಬಾಂಗ್ಲಾದೇಶದ ಸಂಸ್ಥಾಪಕ ನಾಯಕ ಶೇಖ್ ಮುಜಿಬುರ್ ರೆಹಮಾನ್ ಅವರು ಭಾರತದ ಪ್ರಧಾನಿಯಾಗಿದ್ದ ಇಂದಿರಾ ಗಾಂಧಿಯವರೊಂದಿಗೆ ಸೌಹಾರ್ದ ಸಂಬಂಧವನ್ನು ಹೊಂದಿದ್ದರು. 1971ರಲ್ಲಿ ಬಾಂಗ್ಲಾದೇಶ ವಿಮೋಚನಾ ಯುದ್ಧದ ಸಮಯದಲ್ಲಿ ಇಂದಿರಾ ಗಾಂಧಿಯವರು ಮಹತ್ವದ ಪಾತ್ರವನ್ನು ವಹಿಸಿದರು. ಪಾಕಿಸ್ತಾನದಿಂದ ಬಾಂಗ್ಲಾದೇಶದ ಸ್ವಾತಂತ್ರ್ಯವನ್ನು ಬೆಂಬಲಿಸಿದರು.

  ನರೇಂದ್ರ ಮೋದಿಯವರು ಮೂರನೇ ಬಾರಿಗೆ ಭಾರತದ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸಿದರು. ಈ ಕಾರ್ಯಕ್ರಮಕ್ಕೆ ಸಾಕ್ಷಿಯಾಗಲು ವಿದೇಶಿ ಗಣ್ಯರು ಆಗಮಿಸಿದರು. ಸಮಾರಂಭದಲ್ಲಿ ಮಾಲ್ಡೀವ್ಸ್ ಅಧ್ಯಕ್ಷ ಮೊಹಮ್ಮದ್ ಮುಯಿಝು ಮತ್ತು ಬಾಂಗ್ಲಾದೇಶದ ಪ್ರಧಾನಿ ಶೇಖ್ ಹಸೀನಾ ಮತ್ತು ನೆರೆಯ ಮತ್ತು ಹಿಂದೂ ಮಹಾಸಾಗರದ ಏಳು ದೇಶಗಳ ನಾಯಕರು ಭಾಗವಹಿಸಿದ್ದರು.

  ಪ್ರಧಾನಿ ನರೇಂದ್ರ ಮೋದಿ ಅವರ ಪ್ರಮಾಣ ವಚನ ಸಮಾರಂಭದಲ್ಲಿ ಪಾಲ್ಗೊಳ್ಳಲು ಹಸೀನಾ ದೆಹಲಿಯಲ್ಲಿದ್ದು, ಸೋಮವಾರ ಸಂಜೆ ತಮ್ಮ ದೇಶಕ್ಕೆ ಮರಳಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

  ಸರ್ಕಾರದ ಮೊದಲ ಸಂಪುಟ ಸಭೆಯಲ್ಲೇ ಬಡವರಿಗೆ ಬಂಪರ್ ಗಿಫ್ಟ್​: 3 ಕೋಟಿ ಮನೆ ನಿರ್ಮಾಣಕ್ಕೆ ನೆರವು

  ಸಿನಿಮಾ

  ಲೈಫ್‌ಸ್ಟೈಲ್

  ಟೆಕ್ನಾಲಜಿ

  Latest Posts