More

    ಲೋಕಸಭೆ: ಸೋನಿಯಾ ಗಾಂಧಿ ರಾಜ್ಯಸಭೆಗೆ, ಪ್ರಿಯಾಂಕಾ ಗಾಂಧಿ ಈ ಕ್ಷೇತ್ರದಿಂದ ಸ್ಪರ್ಧೆ?

    ನವದೆಹಲಿ: ಕಾಂಗ್ರೆಸ್‌ ಹಿರಿಯ ನಾಯಕಿ ಸೋನಿಯಾ ಗಾಂಧಿ ಅವರು ಲೋಕಸಭಾ ಚುನಾವಣೆಯಲ್ಲಿ ಕಣಕ್ಕಿಳಿಯುವುದಿಲ್ಲ. ಇದರ ಬದಲಾಗಿ ಪುತ್ರಿ ಪ್ರಿಯಾಂಕಾ ಗಾಂಧಿ ವಾದ್ರಾ ಚುನಾವಣೆಯಲ್ಲಿ ಸ್ಪರ್ಧಿಸುವ ಸಾಧ್ಯತೆ ಇದೆ ಎಂದು ವರದಿಯಾಗಿದೆ.

    ಇದನ್ನೂ ಓದಿ:ದೆಹಲಿ: ಕಾಂಗ್ರೆಸ್ ಒಂದು ಸ್ಥಾನಕ್ಕೂ ಅರ್ಹರಲ್ಲ ಆದರೂ ಒಂದು ಸ್ಥಾನ ಬಿಟ್ಟುಕೊಡ್ತೀವಿ!

    ಕಾಂಗ್ರೆಸ್ ನಾಯಕಿ​ ಸೋನಿಯಾ ಗಾಂಧಿ ಅವರು ರಾಜಸ್ಥಾನದಿಂದ ರಾಜ್ಯಸಭಾ ಸ್ಥಾನಕ್ಕೆ ನಾಮನಿರ್ದೇಶನಗೊಳ್ಳುವ ಸಾಧ್ಯತೆಯಿದೆ ಎನ್ನಲಾಗಿದೆ.
    ಪ್ರಿಯಾಂಕಾ ಗಾಂಧಿ ವಾದ್ರಾ ಅವರು ರಾಯ್ ಬರೇಲಿ ಕುಟುಂಬ ಕ್ಷೇತ್ರದಿಂದ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಲಿದ್ದಾರೆ. ಅಂದಹಾಗೆ ಪ್ರಿಯಾಂಕಾ ಅವರ ಮೊದಲ ಚುನಾವಣೆ. 77ರ ಹರೆಯದ ಸೋನಿಯಾ ಗಾಂಧಿ ಅವರು ರಾಜ್ಯಸಭೆಯ ಚುನಾವಣೆಯ ಸುತ್ತಿನಲ್ಲಿ ಜೈಪುರದಿಂದ ನಾಮಪತ್ರ ಸಲ್ಲಿಸುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ.

    ಸೋನಿಯಾ ಗಾಂಧಿ ಅವರು 1999 ರಿಂದ ಲೋಕಸಭೆಯಲ್ಲಿ ರಾಯ್ ಬರೇಲಿಯನ್ನು ಪ್ರತಿನಿಧಿಸುತ್ತಿದ್ದಾರೆ. ಅವರು 2019 ರಲ್ಲಿ ಕಾಂಗ್ರೆಸ್ ಸಾಧನೆಯು ಅತ್ಯಂತ ಕೆಳಮಟ್ಟದಲ್ಲಿದ್ದಾಗಲೂ ಮತ್ತು ರಾಹುಲ್ ಗಾಂಧಿಯವರು ಉತ್ತರ ಪ್ರದೇಶದ ಅಮೇಥಿಯನ್ನು ಕಳೆದುಕೊಂಡಾಗಲೂ ಸಹ ಸೋನಿಯಾ ತಮ್ಮ ಕ್ಷೇತ್ರದಲ್ಲಿ ಗೆಲುವು ಸಾಧಿಸಿದ್ದರು. ಅಮೇಥಿ ಲೋಕಸಭೆ ಕ್ಷೇತ್ರದಲ್ಲಿ ಬಿಜೆಪಿ ಸಂಸದೆ ಸ್ಮೃತಿ ಇರಾನಿ ಗೆಲುವು ಸಾಧಿಸಿದ್ದರು.

    ಹಲವು ವರ್ಷಗಳಿಂದ ಪ್ರಿಯಾಂಕಾ ಗಾಂಧಿ ವಾದ್ರಾ ಅವರನ್ನು ಚುನಾವಣಾ ರಾಜಕೀಯಕ್ಕೆ ಕರೆತರುವ ಬಗ್ಗೆ ಮಾತುಕತೆಗಳು ನಡೆಯುತ್ತಲೇ ಇತ್ತು. ಅಂದ ಹಾಗೆ ಇದು ಸುರಕ್ಷಿತ ಸ್ಥಾನವೆಂದು ಪರಿಗಣಿಸಲಾಗಿದೆ. 1950 ರ ದಶಕದಿಂದಲೂ ಕಾಂಗ್ರೆಸ್ ಭದ್ರಕೋಟೆಯಾಗಿದ್ದ ಈ ಕ್ಷೇತ್ರವನ್ನು ಮೊದಲು ಆಕೆಯ ಅಜ್ಜ ಫಿರೋಜ್ ಗಾಂಧಿ ಪ್ರತಿನಿಧಿಸಿದ್ದರು.

    ಪ್ರಿಯಾಂಕಾ ಗಾಂಧಿ ವಾದ್ರಾ ಅವರು ರಾಜಕೀಯ ಕ್ಷೇತ್ರಕ್ಕೆ ಪ್ರವೇಶಿಸಿದಾಗ 2019 ರಲ್ಲಿ ಚುನಾವಣೆಯಲ್ಲಿ ಸ್ಪರ್ಧಿಸುತ್ತಾರೆ ಎಂದು ನಿರೀಕ್ಷಿಸಲಾಗಿತ್ತು. ವಾರಣಾಸಿಯಲ್ಲಿ ಪ್ರಧಾನಿ ಮೋದಿ ಅವರ ನಡುವೆ ಮುಖಾಮುಖಿಯಾಗಬಹುದು ಎಂದು ರಾಜಕೀಯ ವಲಯದಲ್ಲಿ ಭಾರೀ ಚರ್ಚೆಯಾಗಿತ್ತು.

    2019ರ ಲೋಕಸಭೆ ಚುನಾವಣೆ ಸಮಯದಲ್ಲಿ ಕಾಂಗ್ರೆಸ್ ಪಕ್ಷವನ್ನು ಮುನ್ನಡೆಸುತ್ತಿದ್ದ ರಾಹುಲ್ ಗಾಂಧಿ ಅವರು ಎಐಸಿಸಿ ಪ್ರಧಾನ ಕಾರ್ಯದರ್ಶಿಯಾಗಿ ಮತ್ತು ಉತ್ತರ ಪ್ರದೇಶದ ಉಸ್ತುವಾರಿ ಪ್ರಧಾನ ಕಾರ್ಯದರ್ಶಿಯಾಗಿ ನೇಮಿಸಿ ಈ ರಾಜ್ಯದಲ್ಲಿ ಪಕ್ಷವನ್ನು ಪುನರುಜ್ಜೀವನಗೊಳಿಸುವ ಜವಾಬ್ದಾರಿ ನೀಡಿದ್ದರು.
    ಉತ್ತರ ಪ್ರದೇಶ ಉಸ್ತುವಾರಿ ವಹಿಸಿದ್ದ ಪ್ರಿಯಾಂಕ ಗಾಂಧಿ ಅವರು ಪಕ್ಷವನ್ನು ಬಲಪಡಿಸಲು ವಿಫಲರಾಗಿದ್ದರು. 2019 ರಲ್ಲಿ ರಾಜ್ಯದಿಂದ ಬಿಜೆಪಿ ಬೃಹತ್ ಗೆಲುವು ಮತ್ತು 2022 ರಲ್ಲಿ ರಾಜ್ಯದಲ್ಲಿ ಯೋಗಿ ಆದಿತ್ಯನಾಥ್ ಅವರ ವಿಜಯಶಾಲಿಯಾಗಿ ಅಧಿಕಾರಕ್ಕೆ ಮರಳುವುದರೊಂದಿಗೆ ನೆಲಕಚ್ಚಿತು.

    ಪ್ರಿಯಾಂಕಾ ಗಾಂಧಿ ವಾದ್ರಾ ಅವರು ರಾಯ್ ಬರೇಲಿ ಕುಟುಂಬ ಕ್ಷೇತ್ರದಿಂದ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಲಿದ್ದಾರೆ ಎಂಬ ಸುದ್ದಿ ಈಗ ಭಾರೀ ಸಂಚಲನ ಸೃಷ್ಟಿಸಿದೆ.

    ದೆಹಲಿ: ಕಾಂಗ್ರೆಸ್ ಒಂದು ಸ್ಥಾನಕ್ಕೂ ಅರ್ಹರಲ್ಲ ಆದರೂ ಒಂದು ಸ್ಥಾನ ಬಿಟ್ಟುಕೊಡ್ತೀವಿ!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts