ರಾಮಮಂದಿರ ಉದ್ಘಾಟನೆ ಸಮಾರಂಭಕ್ಕೆ ತೆರಳಲಿರುವ ಸೋನಿಯಾ ಗಾಂಧಿ..!

soniya
Published on

ಅಯೋಧ್ಯೆ: ರಾಮಮಂದಿರ ಉದ್ಘಾಟನಾ ಸಮಾರಂಭಕ್ಕೆ ಸೋನಿಯಾ ಗಾಂಧಿ ಹೋಗಲಿದ್ದಾರೆ. ಕಾರ್ಯಕ್ರಮಕ್ಕೆ ಹೋಗಬೇಕೋ ಬೇಡವೋ ಎಂಬ ದ್ವಂದ್ವದಲ್ಲಿ ಸಿಲುಕಿದ್ದ ಕಾಂಗ್ರೆಸ್ ಪಕ್ಷ ಕೊನೆಗೂ ದೃಢ ನಿರ್ಧಾರ ಕೈಗೊಂಡಿದೆ ಎಂದು ವಿಶ್ವಾಸನೀಯ ಮೂಲಗಳು ತಿಳಿಸಿವೆ.

ರಾಮಜನ್ಮಭೂಮಿಯಲ್ಲಿ ಜ.22ರಂದು ನಡೆಯುವ ದೇವಸ್ಥಾನದ ಉದ್ಘಾಟನಾ ಸಮಾರಂಭಕ್ಕೆ ಬರುವಂತೆ ಸೋನಿಯಾ ಅವರೊಂದಿಗೆ ಕಾಂಗ್ರೆಸ್ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ ಮತ್ತು ವಿರೋಧ ಪಕ್ಷದ ನಾಯಕ ಅಧೀರ್ ರಂಜನ್ ಚೌಧರಿ ಅವರನ್ನು ಆಹ್ವಾನಿಸಲಾಗಿದೆ.

2024ರಲ್ಲಿ ಲೋಕಸಭಾ ಚುನಾವಣೆ ನಡೆಯಲಿದ್ದು, ರಾಮಮಂದಿರ ವಿಷಯವು ನಿರ್ಣಾಯಕವಾಗಿದೆ. ಇದು ಧಾರ್ಮಿಕ ವಿಚಾರವಾಗಿದ್ದರಿಂದ ಅಯೋಧ್ಯೆ ಆಹ್ವಾನಕ್ಕೆ ಕಾಂಗ್ರೆಸ್ ಪಕ್ಷ ಹೇಗೆ ಪ್ರತಿಕ್ರಿಯಿಸುತ್ತದೆ ಎಂಬ ಅನುಮಾನವಿತ್ತು. ಕಾಂಗ್ರೆಸ್ ನಾಯಕರೂ ಸಹ ಭಿನ್ನ ಅಭಿಪ್ರಾಯ ವ್ಯಕ್ತಪಡಿಸಿದ್ದರು.

ಆದರೆ ಪಕ್ಷದ ವರಿಷ್ಠರು ಯಾವ ತೀರ್ಮಾನ ತೆಗೆದುಕೊಳ್ಳುತ್ತಾರೆ ಎಂಬ ಬಗ್ಗೆ ಆ ಪಕ್ಷದ ಕಾರ್ಯಕರ್ತರಲ್ಲಷ್ಟೇ ಅಲ್ಲ, ಇಡೀ ದೇಶದ ಜನರಲ್ಲಿ ಕುತೂಹಲ ಕೆರಳಿಸಿತ್ತು.

ಬಿಜೆಪಿ ಮತ್ತು ಅದರ ಮಿತ್ರ ಪಕ್ಷಗಳನ್ನು ಎದುರಿಸಲು ಕಾಂಗ್ರೆಸ್ ಮುಖಂಡರು ಸಮಾರಂಭದಲ್ಲಿ ಭಾಗವಹಿಸುವುದು ಮುಖ್ಯವಾಗುತ್ತದೆ ಎಂದುಅ ರಿತು ದೇಗುಲ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಲು ಸೋನಿಯಾಗಾಂಧಿ ಅವರು ಪಾಲ್ಗೊಳ್ಳಲಿದ್ದಾರೆ ಎಂದು ಮೂಲಗಳಿಂದ ತಿಳಿದು ಬಂದಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net