More

    ಚುನಾವಣೆಗೆ ಸ್ಫರ್ಧಿಸುವುದಿಲ್ಲ ಸೋನಿಯಾ; ತಾಯಿಯ ಸ್ಥಾನ ತುಂಬಲಿದ್ದಾರೆ ಪ್ರಿಯಾಂಕ

    ನವದೆಹಲಿ: ಮುಂದಿನ ಕೆಲವೇ ತಿಂಗಳುಗಳಲ್ಲಿ ನಡೆಯಲಿರುವ ಲೋಕಸಭೆ ಚುನಾವಣೆಗೆ ಈಗಾಗಲೇ ರಾಜಕೀಯ ಪಕ್ಷಗಳು ಸಿದ್ದತೆ ಆರಂಭಿಸಿದ್ದು, ಹೊಸಬರಿಗೆ ಅವಕಾಶ ನೀಡುವ ನಿಟ್ಟಿನಲ್ಲಿ ಹಿರಿಯರು ಕಣದಿಂದ ಹಿಂದೆ ಸರಿಯುತ್ತಿದ್ದಾರೆ. ಇನ್ನೂ ಈ ನಡುವೆ ಕಾಂಗ್ರೆಸ್​ ಅಧಿನಾಯಕಿ ಸೋನಿಯಾ ಗಾಂಧಿ ಕೂಡ ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಸ್ಫರ್ಧಿಸದಿರಲು ನಿರ್ಧರಿಸಿದ್ದು, ತಮ್ಮ ಪುತ್ರಿ ಪ್ರಿಯಾಂಕ ವಾದ್ರಾಗೆ ರಾಯ್​ಬರೇಲಿ ಕ್ಷೇತ್ರವನ್ನು ಬಿಟ್ಟುಕೊಡಲು ಮುಂದಾಗಿದ್ದಾರೆ ಎಂದು ತಿಳಿದು ಬಂದಿದೆ.

    ಫೆಬ್ರವರಿ 27ರಂದು ನಡೆಯುವ ರಾಜ್ಯಸಭಾ ಚುನಾವಣೆಯಲ್ಲಿ ರಾಜಸ್ಥಾನದಿಂದ ಸೋನಿಯಾ ಗಾಂಧಿ ನಾಮನಿರ್ದೇಶನಗೊರ್ಳಳುವುದು ಬಹುತೇಕ ಖಚಿತವಾಗಿದ್ದು, ಈ ಹಿನ್ನಲೆಯಲ್ಲಿ ಅವರು ಲೋಕಸಭೆ ಸದಸ್ಯತ್ವಕ್ಕೆ ರಾಜೀನಾಮೆ ನೀಡಲಿದ್ದಾರೆ ಎಂದು ಆಪ್ತ ಮೂಲಗಳು ತಿಳಿಸಿವೆ. ಇತ್ತ ವಿವಿಧ ರಾಜ್ಯಗಳ ಉಸ್ತುವಾರಿ ಹೊತ್ತಿರುವ ಪ್ರಿಯಾಂಕ ಗಾಂಧಿಗೆ ಇದು ಮೊದಲ ಚುನಾವಣೆಯಾಗಿದ್ದು, ಕಾಂಗ್ರೆಸ್​ ಭದ್ರಕೋಟೆ ರಾಯ್​ಬರೇಲಿಯಲ್ಲಿ ಗೆಲುವಿನ ನಗೆ ಬೀರಲಿದ್ದಾರ ಎಂದು ಕಾದು ನೋಡಬೇಕಿದೆ.

    Sonia Priyanka

    ಇದನ್ನೂ ಓದಿ: ಹಾಸ್ಟೆಲ್​ ವಿದ್ಯಾರ್ಥಿಗಳ ಮೇಲೆ ನಿರಂತರ ದೌರ್ಜನ್ಯ; ಸಿಬ್ಬಂದಿ ವಜಾಕ್ಕೆ ಆಗ್ರಹಿಸಿ ಪ್ರತಿಭಟನೆ

    ಕಾಂಗ್ರೆಸ್​ ಪಾಲಿಗೆ ಇದು ದೊಡ್ಡ ಬದಲಾವಣೆಯಾಗಿದ್ದು, ಸೋನಿಯಾ ಗಾಂಧಿ 2006ರಿಂದಲೂ ಲೋಕಸಭೆಯಲ್ಲಿ ರಾಯ್​ಬರೇಲಿ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದಾರೆ. ಕಳೆದ ಹಲವು ವರ್ಷಗಳಿಂದಲೂ ಪ್ರಿಯಾಂಕ ಗಾಂಧಿ ಅವರನ್ನು ಚುನಾವಣಾ ರಾಜಕೀಯಕ್ಕೆ ಕರೆತರುವ ಬಗ್ಗೆ ಕಾಂಗ್ರೆಸ್​ ಪಾಳಯದಲ್ಲಿ ಮಾತುಕತೆಗಳು ನಡೆದಿದ್ದವು. 1950ರಿಂದಲೂ ರಾಯ್​ಬರೇಲಿ ಕಾಂಗ್ರೆಸ್​ನ ಭದ್ರಕೋಟೆಯಾಗಿದ್ದು, ಗಾಂಧಿ ಪರಿವಾರದ ಸದಸ್ಯರೇ ಸತತವಾಗಿ ಗೆದ್ದು ಬೀಗಿದ್ದಾರೆ.

    2019ರ ಲೋಕಸಭೆ ಚುನಾವಣೆಯಲ್ಲಿ ವಾರಣಾಸಿಯಲ್ಲಿ ಪ್ರಧಾನಿ ಮೋದಿ ಎದುರು ಪ್ರಿಯಾಂಕ ಸ್ಪರ್ಧಿಸಲಿದ್ದಾರೆ ಎಂದು ಹೇಳಲಾಗಿತ್ತು. ಆದರೆ, ಕಾರಣಾಂತರಗಳಿಂದ ಅವರನ್ನು ಕಣಕ್ಕಿಳಿಸಲಿರಲಿಲ್ಲ ಬದಲಾಗಿ ಉತ್ತರಪ್ರದೇಶದ ಉಸ್ತುವಾರಿಯನ್ನಾಗಿ ಮಾಡಲಾಗಿತ್ತು. ಪ್ರಿಯಾಂಕ ಗಾಂಧಿ ಜೊತೆ ಉತ್ತರಪ್ರದೇಶದ ಉಸ್ತುವಾರಿ ವಹಿಸಿದ್ದ ಜೋತಿರಾದಿತ್ಯ ಸಿಂಧಿಯಾ ಬಿಜೆಪಿಯಲ್ಲಿದ್ದು, ಒಂದು ವೇಳೆ ರಾಯ್ ಬರೇಲಿಯಲ್ಲಿ ಪ್ರಿಯಾಂಕಾ ಕಣಕ್ಕಿಳಿದರೆ ಲೋಕಸಭೆ ಚುನಾವಣೆಗೂ ಮುನ್ನ ಪಕ್ಷದ ಪುನಶ್ಚೇತನಕ್ಕೆ ಸಹಾಯ ಮಾಡಲಿದೆ ಎಂದು ಹಿರಿಯ ಕಾಂಗ್ರೆಸ್​ ನಾಯಕರು ಅಭಿಪ್ರಾಯಪಟ್ಟಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts