More

    ಪೆಟ್ರೋಲ್ ಬೆಲೆ ಹೆಚ್ಚಳ: ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆದ ಸೋನಿಯಾ ಗಾಂಧಿ

    ನವದೆಹಲಿ: ಪೆಟ್ರೋಲ್, ಡಿಸೇಲ್ ಹಾಗೂ ಅಡುಗೆ ಅನಿಲ ಬೆಲೆ ಏರಿಕೆ ಕುರಿತಂತೆ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದು, ಭಾನುವಾರ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದಾರೆ.

    ಈ ಬೆಲೆ ಏರಿಕೆಯೂ ಜನರ ದುಃಖ ಮತ್ತು ಸಂಕಟಗಳಿಂದ ಸರ್ಕಾರ ಲಾಭ ಗಳಿಸುವುದು ಎಂದು ಕೇಂದ್ರ ಸರ್ಕಾರದ ಮೇಲೆ ಹರಿಹಾಯ್ದಿದ್ದಾರೆ. ಮೂರು ಪುಟಗಳ ಸುದೀರ್ಘ ಪತ್ರ ಬರೆದಿರುವ ಅವರು ವಿನಾಕಾರಣ ಕೇಂದ್ರ ಸರ್ಕಾರ ಪೆಟ್ರೋಲ್ ಡಿಸೇಲ್ ಮೇಲೆ ಅಬಕಾರಿ ಸುಂಕವನ್ನು ಹೆಚ್ಚಿಸಿದೆ ಎಂದು ಆರೋಪಿಸಿದ್ದಾರೆ.

    ಈ ಪರಿಯ ಬೆಲೆ ಏರಿಕೆಯಿಂದ ಮಧ್ಯಮ ವರ್ಗದ ಜನತೆ ತೀವ್ರ ಸಂಕಟಪಡುತ್ತಿದ್ದಾರೆ. ಕೇಂದ್ರ ಸರ್ಕಾರ ದೇಶದಲ್ಲಿನ ಉದ್ಯೋಗ, ಕೂಲಿ, ದೈನದಂದಿನ ಆದಾಯವನ್ನು ತಳಮಟ್ಟಕ್ಕೆ ತೆಗೆದುಕೊಂಡು ಹೋಗಿದೆ ಎಂದಿದ್ದಾರೆ. ಯುಪಿಎ ಅವಧಿಯಲ್ಲಿದ್ದ ದರಕ್ಕಿಂತಲೂ ಅರ್ಧ ದರ ಈಗ ಕಚ್ಚಾತೈಲಕ್ಕಿದೆ. ಆದರೂ ನೀವೆಕೆ ಇಷ್ಟು ಪ್ರಮಾಣದಲ್ಲಿ ಇಂಧನ ದರ ಏರುವಂತೆ ಮಾಡಿದಿರಿ ಎಂದು ಸೋನಿಯಾ ಪ್ರಶ್ನಿಸಿದ್ದಾರೆ.

    ಕೇಂದ್ರ ಸರ್ಕಾರ ಕಳೆದ ಆರೂವರೆ ವರ್ಷಗಳಲ್ಲಿ ಡಿಸೇಲ್ ಮೇಲಿನ ಅಬಕಾರಿ ಸುಂಕವನ್ನು ಶೇ 820 ರಷ್ಟು ಹಾಗೂ ಪೆಟ್ರೋಲ್ ಮೇಲಿನ ಅಬಕಾರಿ ಸುಂಕವನ್ನು ಶೇ 258 ರಷ್ಟು ಏರಿಸಲಾಗಿದೆ ಎಂದು ಅವರು ಪತ್ರದಲ್ಲಿ ತಿಳಿಸಿದ್ದಾರೆ. ದೇಶದ ಸಾಮಾನ್ಯ ವರ್ಗದವರ ಹಿತ ಕಾಯುವಲ್ಲಿ ನಿಮ್ಮ ಸರ್ಕಾರ ವಿಫಲವಾಗಿದೆ ಎಂದು ಸೋನಿಯಾ ಆರೋಪಿಸಿದ್ದಾರೆ.

    ಪೆಟ್ರೋಲ್ ಬೆಲೆ ಏರಿಕೆ ಕುರಿತು ಕೇಂದ್ರ ಸರ್ಕಾರಕ್ಕೆ ಸಲಹೆ ನೀಡಿದ ಮಾಯಾವತಿ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts